ಬೆಂಗಳೂರು: ಸಿರಿಧಾನ್ಯ (millet, Siridhanya) ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು (small land) ಹೊಂದಿರುವ ರೈತರಿಗೆ (farmers) ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ (Raitha Siri Yojana) ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು (seeds) ಮತ್ತು ರಸಗೊಬ್ಬರ (manure) ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.
ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ:
- ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
- ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
- ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
- ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ
ಕರ್ನಾಟಕ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ:
- ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
- ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
- ಶಾಶ್ವತ ನಿವಾಸಿ ಪ್ರಮಾಣಪತ್ರ
- ವಿಳಾಸ ಪುರಾವೆ
- ಪಡಿತರ ಚೀಟಿ
- ಬ್ಯಾಂಕ್ ಖಾತೆ ವಿವರಗಳು
- ಮೊಬೈಲ್ ನಂಬರ್
- ಭೂ ದಾಖಲೆ ವಿವರಗಳು
- ಪಾಸ್ಪೋರ್ಟ್ ಗಾತ್ರದ ಫೋಟೋಗಳು
ರೈತ ಸಿರಿ ಯೋಜನೆಯ ಉದ್ದೇಶ:
- ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
- ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
- ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
- ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000 ರೂ ನೆರವು
- ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು
ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ
ಇದನ್ನೂ ಓದಿ: Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!