Site icon Vistara News

Blast in Bengaluru : ಬಾಂಬ್​ ಬ್ಲಾಸ್ಟ್​ ಆದ ರಾಮೇಶ್ವರಂ ಕೆಫೆ ಶಿವರಾತ್ರಿ ದಿನ ರೀ ಓಪನ್​

Rameshwarm Cafe

ಬೆಂಗಳೂರು: ಮಾರ್ಚ್​ 1ರಂದು ಬಾಂಬ್​ ಸ್ಫೋಟ ಸಂಭವಿಸಿದ (Blast in Bengaluru) ರಾಮೇಶ್ವರಂ ಕೆಫೆ ಶಿವರಾತ್ರಿ ದಿನದಂದು (ಮಾರ್ಚ್​8) ರೀ ಓಪನ್​ ಆಗಲಿದೆ. ಘಟನೆ ನಡೆದ ಬಳಿಕದಿಂದ ತನಿಖೆ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಹೋಟೆಲ್ ಬಂದ್​ ಮಾಡಲಾಗಿದೆ. ಇದೀಗ ಮುಂದಿನ ಶುಕ್ರವಾರ ಅದ್ಧೂರಿ ಕಾರ್ಯಕ್ರಮ ನಡೆಸಿ ಪುನರಾರಂಭ ಮಾಡಲು ಹೋಟೆಲ್​ ಮಾಲೀಕರು ಯೋಜನೆ ರೂಪಿಸಿದ್ದಾರೆ.

ಇದೇ ವೇಳೆ ಘಟನೆಯಿಂದ ಗಾಯಗೊಂಡಿದ್ದವರಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡಿದ್ದ ಕೆಲವರು ಶನಿವಾರ (ಮಾರ್ಚ್​ 2ರಂದು) ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದರು. ಇನ್ನೂ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ತನಿಖೆ ಚುರುಕು

ಬಾಂಬ್​ ಬ್ಲಾಸ್ಟ್​ ಘಟನೆ ಬಗ್ಗೆ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ವಿವಿಧ ಆಯಾಮಗಳಲ್ಲಿ ಅನಾಲಿಸಿಸ್ ಮಾಡಿ ಪ್ರತ್ಯೇಕ ತಂಡಗಳಿಂದ ಕಾರ್ಯಾಚರಣೆ ಮಾಡುತ್ತಿದೆ ತನಿಖಾ ತಂಡ. ಏಕಾಂಗಿಯಾಗಿ ಬಾಂಬ್ ಬ್ಲಾಸ್ಟ್ ಮಾಡಿರೋ ಶಂಕೆ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ಒಬ್ಬನೇ ವ್ಯಕ್ತಿ ಬಾಂಬ್ ತಯಾರಿಸಿ ಸ್ಫೋಟ ಮಾಡಿದರೆ ಸಿಂಗಲ್​ ವೂಲ್ಫ್​ ಟೆರರಿಸ್ಟ್​ ಎಂಬ ಆಯಾಮದಲ್ಲಿ ತನಿಖೆ ಮಾಡಲಾಗುತ್ತದೆ. ಅಮೆರಿಕದಲ್ಲಿ ಈ ರೀತಿಯ ಭಯೋತ್ಪಾದನೆ ಇದೆ. ಅದೇ ಮಾದರಿಯಲ್ಲಿ ಶಂಕಿತ ವ್ಯಕ್ತಿ ಸ್ಫೋಟ ಮಾಡಿದ್ದಾನಅ ಎಂಬ ಶಂಕೆಯ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಟಲಿಜೆನ್ಸ್ ಸೆಲ್ ಟೀಂ ಜತೆ ಬೆಂಗಳೂರು ಪೊಲೀಸರ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಮೂಗಳು ತಿಳಿಸಿವೆ. ಬಾಂಬ್ ಸ್ಫೋಟ ಹಾಗೂ ಉಗ್ರ ಕೃತ್ಯಗಳ ತನಿಖೆಯಲ್ಲಿ ಖ್ಯಾತಿ ಗಳಿಸಿರೋ ಕೌಂಟರ್ ಇಂಟಲಿಜೆನ್ಸ್ ಸೆಲ್​ನಿಂದ ತನಿಖೆ ಪ್ರಕ್ರಿಯೆಗೆ ಚುರುಕು ಸಿಕ್ಕಿದೆ.

ಇದನ್ನೂ ಓದಿ : Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್‌; ಟೆಕ್ನಾಲಜಿ ಬಳಸಿ ವಿದ್ರೋಹಿಗಳ ಹಿಡಿಯಲು ಸಿಎಂ ಖಡಕ್‌ ಸೂಚನೆ

ಹೋಟೆಲ್​ಗೆ ಬಂದು ಅಲ್ಲಿ ಪತ್ತೆಯಾದ ಬಾಂಬ್​ಮಾದರಿಗಳನ್ನು ತೆಲಂಗಾಣದ ತನಿಖಾ ತಂಡ ಪಡೆದುಕೊಂಡು ಹೋಗಿದೆ. ಅದೇ ರೀತಿ ನಗರ ಪೊಲೀಸರು ತಮಿಳುನಾಡು, ಕೇರಳ ಹಾಗೂ ತೆಲಂಗಾಣದಲ್ಲಿ ಬೀಡುಬಿಟ್ಟಿದೆ.

ನೆರೆಯ ರಾಜ್ಯಗಳಲ್ಲಿರುವ ಪೊಲೀಸರ ತಂಡ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ತಾಂತ್ರಿಕ ಹಾಗೂ ಪೊಲೀಸರಿಗೆ ಪತ್ತೆಯಾಗದಂತೆ ಶಂಕಿತ ವ್ಯಕ್ತಿ ಬ್ಲಾಸ್ಟ್​ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರನ್ನೂ ಬಂಧಿಸಿಲ್ಲ ಎಂದ ಪೊಲೀಸ್‌ ಕಮಿಷನರ್‌

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ. ಹೀಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ರಾಮೇಶ್ವರಂ ಬ್ರಾಂಚ್‌ಗಳ ಪರಿಶೀಲನೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಮೇಶ್ವರಂ ಮತ್ತೊಂದು ಬ್ರಾಂಚ್‌ಗಳಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತರ ಚಲನವಲನ ಇದೇಯಾ ಎಂದು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ (Blast In Bengaluru) ಬ್ಲಾಸ್ಟ್‌ ಪ್ರಕರಣದ ಬಳಿಕ ಬೆಂಗಳೂರಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ (rameshwaram cafe blast) ನೀಡಿದ್ದಾರೆ. ಜತೆಗೆ ಜನರು ಇಂತಹ ಸಮಯದಲ್ಲಿ ಆತಂಕಕ್ಕೆ ಒಳಗಾಗದೇ, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡರೆ, ಯಾವುದಾರೂ ವಸ್ತು ಅಥವಾ ಬ್ಯಾಗ್‌ ಇರುವುದು ಕಂಡರೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಯಾರ ಮೇಲಾದರೂ ಸಂಶಯ ಬಂದರೆ ಕೂಡಲೇ 122ಗೆ ಸಂಖ್ಯೆಗೆ ಕರೆ ಮಾಡಿ, ಪೊಲೀಸರಿಗೆ ವಿಚಾರವನ್ನು ಮುಟ್ಟಿಸಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ನ ಎಕ್ಸ್‌ ಖಾತೆಯಿಂದ ಮಾಹಿತಿ ನೀಡಿದ್ದಾರೆ.

Exit mobile version