Site icon Vistara News

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Rashid Khan

ಬೆಂಗಳೂರು: ಪುರುಷರ ಹಂಡ್ರೆಡ್ ಕ್ರಿಕೆಟ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ದಾಖಲೆ ಮಾಡಿದ್ದಾರೆ, ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೋ ನಂತರ ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಮೊದಲ ಸ್ಪಿನ್ನರ್​​ ಮತ್ತು ಒಟ್ಟಾರೆ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ.

ರಶೀದ್ ಖಾನ್ ಇತ್ತೀಚಿನ ವರ್ಷಗಳಲ್ಲಿ ವಿವಿಧ ಜಾಗತಿಕ ಲೀಗ್​​ಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ (ಎಂಎಸ್​​ಸಿ) 2024 ಋತುವಿನಲ್ಲಿ ಎಂಐ ನ್ಯೂಯಾರ್ಕ್ ಪರ ಆಡಿದ ನಂತರ ಅಫ್ಘಾನಿಸ್ತಾನದ ನಾಯಕ ಟ್ರೆಂಟ್ ರಾಕೆಟ್ಸ್​​ ಸೇರಿ್ದರು. ಈ ವರ್ಷದ ಪುರುಷರ ಹಂಡ್ರೆಡ್​​ನಲ್ಲಿ ತಮ್ಮ ಮೊದಲ ಪ್ರದರ್ಶನದಲ್ಲಿ ಅವರು ಎರಡು ವಿಕೆಟ್​ಗಳನ್ನು ಪಡೆದಿದ್ದಾರೆ.

ಬೌಲರ್ ಡಾಟ್ ಬಾಲ್ ಸೇರಿದಂತೆ 20 ಎಸೆತಗಳಲ್ಲಿ ಕೇವಲ 24 ರನ್​ಗಳನ್ನು ಬಿಟ್ಟುಕೊಟ್ಟರು. ಅದೇ ರೀತಿ ಅವರು 9 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಸಿಡಿಸಿ ಔಟಾದರು. ಮ್ಯಾಂಚೆಸ್ಟರ್​ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ರಾಕೆಟ್ಸ್ ತಂಡ 145 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ರಾಕೆಟ್ಸ್ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು.

600 ವಿಕೆಟ್ ಪೂರೈಸಿದ ರಶೀದ್ ಖಾನ್

ಟಿ20 ಕ್ರಿಕೆಟ್​​ನಲ್ಲಿ 600 ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ರಶೀದ್ ಖಾನ್ ಪಾತ್ರರಾಗಿದ್ದಾರೆ. ಅವರು ಈ ಮೈಲಿಗಲ್ಲನ್ನು ಸಾಧಿಸಿದ ಅತ್ಯಂತ ಕಿರಿಯ ಮತ್ತು ವೇಗದ ಕ್ರಿಕೆಟಿಗ. ಅವರು ಕೇವಲ 438 ಇನ್ನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಅವರು 18.25 ಸರಾಸರಿ ಮತ್ತು 6.47 ಎಕಾನಮಿ ರೇಟ್​ನಲ್ಲ 600 ವಿಕೆಟ್​ಗಳನ್ನು ಪಡೆದಿದ್ದಾರೆ. 2015 ರಲ್ಲಿ ಟಿ20 ಐ ಗೆ ಪಾದಾರ್ಪಣೆ ಮಾಡಿದಾಗಿನಿಂದ ಅವರು ಸುಮಾರು 20 ತಂಡಗಳಿಗಾಗಿ ಆಡಿದ್ದಾರೆ.

ಡ್ವೇನ್ ಬ್ರಾವೋ 543 ಟಿ20 ಇನ್ನಿಂಗ್ಸ್​​ನಲ್ಲಿ 630 ವಿಕೆಟ್​ಗಳೊಂದಿಗೆ ಬೌಲಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸುನಿಲ್ ನರೈನ್ 519 ಪಂದ್ಯಗಳಲ್ಲಿ 6.12 ಎಕಾನಮಿ ರೇಟ್​ನಲ್ಲಿ 557 ವಿಕೆಟ್ ಉರುಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಅನುಭವಿ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Exit mobile version