Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ - Vistara News

ಪ್ರಮುಖ ಸುದ್ದಿ

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Ravindra Jadeja : ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಹೇಳುವುದರೊಂದಿಗೆ ಟಿ20 ವಿಶ್ವ ಕಪ್​ ಗೆಲುವಿನ ಬಳಿಕ ಭಾರತ ತಂಡದಿಂದ ಟಿ20 ವಿಶ್ವ ಕಪ್​ಗೆ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

VISTARANEWS.COM


on

Ravindra jadeja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ತಂಡ ಸ್ಟಾರ್​ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja ) ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್​ ಮೂಲಕ ಟಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. “ಕೃತಜ್ಞತೆ ತುಂಬಿದ ಹೃದಯದಿಂದ ನಾನು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದ್ದನ್ನು ನೀಡಿದ್ದೇನೆ. ಕ್ರಿಕೆಟ್​​ನ ಇತರ ಸ್ವರೂಪಗಳಲ್ಲಿ ಆಟ ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿತ್ತು. ಅದು ನನಸಾಗಿದೆ. ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಸ್ಪಿನ್-ಬೌಲಿಂಗ್ ಆಲ್ರೌಂಡರ್ ಎಂಎಸ್ ಧೋನಿ ನಾಯಕತ್ವದಲ್ಲಿ ತಂಡಕ್ಕೆ ಕಾಲಿಟ್ಟಿದ್ದರು. ಅಲ್ಲಿಂದ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಅವರು ಹೆಚ್ಚು ಪ್ರಭಾವಶಾಲಿ ಪ್ರದರ್ಶನ ನೀಡಿರಲಿಲ್ಲ. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಅವರು 74 ಪಂದ್ಯಗಳನ್ನು ಆಡಿದ್ದು, 515 ರನ್ ಹಾಗೂ 54 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

2024ರ ಟಿ20 ವಿಶ್ವಕಪ್ ಗೆದ್ದ ಮರುದಿನವೇ ಆಲ್​ರೌಂಡ್​​ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಂಡದಲ್ಲಿ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅದಕ್ಕಿಂತ ಮೊದಲು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಭಾರತ 7 ರನ್​ಗಳಿಂದ ಗೆದ್ದುಕೊಂಡಿತು. ಐಸಿಸಿ ಪ್ರಶಸ್ತಿ ಗೆಲುವಿನ ನಂತರ ಭಾರತ ಸಂಭ್ರಮದಲ್ಲಿರುವಾಗ ಜಡೇಜಾ ಅವರು ವಿರಾಟ್ ಕೊಹ್ಲಿ ಮತ್ತು ಅವರ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂಬಾಲಿಸಿದರು.

ವಿಶ್ವ ಕಪ್​ನಲ್ಲಿ ಜಡೇಜಾ ಉತ್ತಮ ಫಾರ್ಮ್​​ನಲ್ಲಿ ಇರಲಿಲ್ಲ. ಆದರೆ ಕಳೆದ ದಶಕದಲ್ಲಿ ವಿಶ್ವ ಕ್ರಿಕೆಟ್​ನಲ್ಲಿ ಅವರು ಪ್ರಾಬಲ್ಯ ಸಾಧಿಸಿದ್ದರು. ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತೀಯ ತಂಡದ ಆಸ್ತಿಯಾಗಿದ್ದರು. ಸಾರ್ವಕಾಲಿಕ ಅತ್ಯುತ್ತಮ ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಕರೆಯಲ್ಪಡುವ ಜಡೇಜಾ ಸುಮಾರು 36 ನೇ ವಯಸ್ಸಿನಲ್ಲಿ ಟಿ 20 ಐ ಕ್ರಿಕೆಟ್​ನಿಂದ ವಿದಾಯ ಹೇಳಿದ್ದಾರೆ. ಅವರು ಐಪಿಎಲ್​ನಲ್ಲಿ ಮುಂದುವರಿಯಲಿದ್ದಾರೆ.

2022 ರಲ್ಲಿ ಇಂಗ್ಲೆಂಡ್ ವಿರುದ್ಧ ಬ್ಯಾಟಿಂಗ್​ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವು ಬಂದಿದ್ದವು. ಅಲ್ಲಿ ಅವರು 29 ಎಸೆತಗಳಲ್ಲಿ 46 ರನ್ ಗಳಿಸಿದ್ದರು. ಆ ಪಂದ್ಯವನ್ನು ಭಾರತ 49 ರನ್​ಗಳಿಂದ ಗೆದ್ದಿತ್ತು. ದುಬೈನಲ್ಲಿ ನಡೆದ 2021 ರ ಟಿ 20 ವಿಶ್ವಕಪ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಅವರು ಬೌಲಿಂಗ್​ನಲ್ಲಿ 15 ನೀಡಿ 3 ವಿಕೆಟ್ ಉರುಳಿಸಿದ್ದರು.

ಜಡೇಜಾ ಅವರ ಅತ್ಯಂತ ಗಮನಾರ್ಹ ಲಕ್ಷಣವೆಂದರೆ ಅವರ ಫೀಲ್ಡಿಂಗ್. ಸುರೇಶ್ ರೈನಾ ಮತ್ತು ಯುವರಾಜ್ ಸಿಂಗ್ ಅವರಂತಹ ಆಟಗಾರರನ್ನು ನಾವು ಹೊಂದಿದ್ದ ಸಮಯದಲ್ಲಿ ಸೌರಾಷ್ಟ್ರದ ಆಟಗಾರ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಸಂದರ್ಭಗಳಲ್ಲಿ ಉತ್ತಮ ಫೀಲ್ಡಿಂಗ್ ಮಾಡಿದ್ದಾರೆ. ಅವರು ಎದುರಾಳಿ ತಂಡಕ್ಕೆ 20 ರನ್​ಗಳನ್ನು ಫೀಲ್ಡಿಂಗ್​ನಲ್ಲಿ ಬಿಟ್ಟುಕೊಡುತ್ತಿರಲಿಲ್ಲ.

ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ನಿಯೋಜಿತ ಆಲ್​ರೌಂಡರ್​ಗಳಾಗಿ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಜಡೇಜಾ ಈಗ ಏಕದಿನ ಮತ್ತು ಟೆಸ್ಟ್ ಸ್ವರೂಪಗಳತ್ತ ಗಮನ ಹರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Karnataka CM: ಈ ಬಣ ಬಡಿದಾಟದಿಂದ ಹೈಕಮಾಂಡ್ ಗರಂ ಆಗಿದೆ. ಉಭಯ ಬಣಗಳ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭ ಆಗಲಿದೆಯಾ ಎಂಬ ಕುತೂಹಕ ಮೂಡಿದೆ. ಹಲವು ವರ್ಷಗಳಿಂದ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಾಯುತ್ತಿದ್ದ ವ್ಯಕ್ತಿಗೆ ಈ ಬಾರಿ ಅವಕಾಶ ಪಕ್ಕಾ ಅಂತಿವೆ ಹೈಕಮಾಂಡ್ ಮೂಲಗಳು.

VISTARANEWS.COM


on

karnataka cm mallikarjun kharge siddaramiah dk shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬಣ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಬಣಗಳ ಬಡಿದಾಟದಿಂದ ಸುಸ್ತಾಗಿರುವ ಕಾಂಗ್ರೆಸ್ ಹೈಕಮಾಂಡ್ (Congress high command), ಇಬ್ಬರ ನಡುವಿನ ಜಗಳಕ್ಕೆ ಮದ್ದು ಅರೆಯಲು ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯ ಮುಖ್ಯಮಂತ್ರಿ (Karnataka CM) ಪದವಿಗೆ ಮೂರನೆಯವರು ಬಂದು ಕೂರಲೂಬಹುದು ಎನ್ನಲಾಗುತ್ತಿದೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಬೆಳಗ್ಗೆ ಎದ್ರೆ ಬಣ ಬಡಿದಾಟ ಪಾಲಿಟಿಕ್ಸ್ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಪೈಪೋಟಿ ಎದ್ದಿದ್ದು, ಉಭಯ ಟೀಂಗಳ ನಡುವೆ ಎಟು ಎದಿರೇಟು ಪಾಲಿಟಿಕ್ಸ್ ಮುಂದುವರಿದಿದೆ. ಸಿದ್ದರಾಮಯ್ಯ ಬಣ ಇನ್ನೊಂದಷ್ಟು ಡಿಸಿಎಂ ಪೋಸ್ಟ್‌ಗಳು ಸೃಷ್ಟಿಯಾಗಬೇಕು ಎನ್ನುತ್ತಿದೆ. ಡಿಕೆಶಿ ಬಣವೂ ಒಕ್ಕಲಿಗ ಸಿಎಂ ಆಗಲಿ ಎಂದು ಎದುರೇಟು ಹಾಕಿದೆ.

ಈ ಬಣ ಬಡಿದಾಟದಿಂದ ಹೈಕಮಾಂಡ್ ಗರಂ ಆಗಿದೆ. ಉಭಯ ಬಣಗಳ ಜಗಳದಲ್ಲಿ ಮೂರನೇ ವ್ಯಕ್ತಿಗೆ ಲಾಭ ಆಗಲಿದೆಯಾ ಎಂಬ ಕುತೂಹಕ ಮೂಡಿದೆ. ಹಲವು ವರ್ಷಗಳಿಂದ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಾಯುತ್ತಿದ್ದ ವ್ಯಕ್ತಿಗೆ ಈ ಬಾರಿ ಅವಕಾಶ ಪಕ್ಕಾ ಅಂತಿವೆ ಹೈಕಮಾಂಡ್ ಮೂಲಗಳು. ಸಿದ್ದರಾಮಯ್ಯ ಎರಡುವರೆ ವರ್ಷಗಳನ್ನು ಪೂರೈಸಿದ ಬಳಿಕ ರಾಜ್ಯದಲ್ಲಿ ಆ ಭಾರಿ ಬದಲಾವಣೆ ಆಗುವ ಸಾಧ್ಯತೆ ಇದೆ. 2025ಕ್ಕೆ ರಾಜ್ಯ ರಾಜಕಾರಣದಲ್ಲಿ ಈ ಪಲ್ಲಟ ಆಗಬಹುದು.

ಅತ್ತ ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೆ ಸಿದ್ದರಾಮಯ್ಯ ಬಣ ವಿರೋಧವಿದೆ. ಸಿದ್ದರಾಮಯ್ಯ ಮುಂದುವರಿಯಲು ಡಿಕೆಶಿ ಬಣ ಬಿಡಲಾರದು. ಹೀಗಾಗಿ ಹೈಕಮಾಂಡ್ ನಿಷ್ಠಾವಂತ ವ್ಯಕ್ತಿಗೆ, ಗಾಂಧಿ ಕುಟುಂಬಕ್ಕೆ ನಿಷ್ಠಾವಂತನಾದ ವ್ಯಕ್ತಿಗೆ ಮಣೆ ಹಾಕುವ ಸಾಧ್ಯತೆ ಇದೆ. ಅಂಥವರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಟ್ಟರೆ ಬೇರೆ ಯಾರೂ ಇಲ್ಲ. ಸಿದ್ದು- ಡಿಕೆಶಿ ಕೈತಪ್ಪಿದ ಹುದ್ದೆ, ಸದ್ಯ ರಾಜ್ಯ ರಾಜಕಾರಣದ ಅತಿ ಹಿರಿಯ ಹುದ್ದರಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಗುವುದು ಬಹುತೇಕ ಪಕ್ಕಾ ಆಗಿದೆ.

ಅತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ದಿನೇ ದಿನೆ ಗಟ್ಟಿ ಆಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಇದು ಧನಾತ್ಮಕ ಫಲಿತಾಂಶ ತಂದುಕೊಟ್ಟ ಬಳಿಕ ಮೈತ್ರಿ ಇನ್ನಷ್ಟು ಬಿಗಿಯಾಗಿದೆ. ಲಿಂಗಾಯತ ಹಾಗೂ ಒಕ್ಕಲಿಗ ವೋಟ್ ಬ್ಯಾಂಕ್ ಮೈತ್ರಿಗೆ ಗಟ್ಟಿಯಾದರೆ ರಾಜ್ಯ ಕಾಂಗ್ರೆಸ್‌ಗೆ ತೀವ್ರ ಹಾನಿಯಾಗಲಿದೆ. ಈ ಮೈತ್ರಿ ಗಟ್ಟಿ ಆಗದಂತೆ ಬ್ರೇಕ್ ಹಾಕುವುದಕ್ಕೂ ಇದು ಅನಿವಾರ್ಯವಾಗಿದೆ.

ಲಿಂಗಾಯತ- ಒಕ್ಕಲಿಗ ಮತ ಬ್ಯಾಂಕ್‌ಗೆ ಪರ್ಯಾಯವಾಗಿ ದಲಿತ ಸಮುದಾಯಕ್ಕೆ ಮಣೆ ಹಾಕಿ ದಲಿತ ಸಮುದಾಯದ ವೋಟ್ ಗಟ್ಟಿ ಮಾಡಿಕೊಳ್ಳಲು ಹೈಕಮಾಂಡ್ ಪ್ಲಾನ್ ಮಾಡಿದೆ. ಖರ್ಗೆಗೆ ಅಧಿಕಾರ ನೀಡುವ ಮೂಲಕ ಅಹಿಂದ ವರ್ಗಕ್ಕೆ ಅಧಿಕಾರ ಕೊಟ್ಟೆವು ಅನ್ನುವ‌ ಸಂದೇಶ ರವಾನೆ ಮಾಡುವುದು. ಆ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಟಕ್ಕರ್ ಕೊಡುವ ಪ್ಲಾನ್‌ನಲ್ಲಿ ಹೈಕಮಾಂಡ್ ಇದೆ. ಹೀಗಾಗಿ ಇಬ್ಬರ ಜಗಳ ಮೂರನೇಯವರಿಗೆ ಲಾಭವಾದರೂ ಅಚ್ಚರಿ ಇಲ್ಲ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಇದನ್ನೂ ಓದಿ: DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Continue Reading

Latest

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Police Arrest: ಪೊಲೀಸರೆಂದರೆ ಕಳ್ಳರನ್ನು ಹಿಡಿದು ತಕ್ಕ ಶಿಕ್ಷೆ ನೀಡುತ್ತಾರೆ ಎಂಬ ನಂಬಿಕೆ ಜನರಿಗೆ. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿಯೊಂದು ನಿರ್ಮಾಣವಾಗಿದೆ. ಅದೇನೆಂದರೆ, ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

VISTARANEWS.COM


on

Police Arrest
Koo

ಅಹಮದಾಬಾದ್: ಪೊಲೀಸ್ ಅಧಿಕಾರಿಗಳೆಂದರೆ ಕಳ್ಳತನ, ಸುಲಿಗೆ, ದರೋಡೆ ಮಾಡುವಂತಹ ದುಷ್ಟರನ್ನು ಹಿಡಿದು ಜನರಿಗೆ ನ್ಯಾಯ ಕೊಡಿಸುವವರು ಎಂಬ ಭಾವನೆ ಜನರಲ್ಲಿದೆ. ಆದರೆ ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಪೊಲೀಸ್ ವೃತ್ತಿಗೆ ಅಪಖ್ಯಾತಿ ತರುವಂತದಾಗಿದೆ. ಯಾಕೆಂದರೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ (Police arrest).

ಭಚೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ, ಮದ್ಯ ಕಳ್ಳಸಾಗಣೆಯನ್ನು ತಡೆಯಲು ಕಚ್(kutch) ನ ಭಚೌ ಪೊಲೀಸ್ ಠಾಣೆ ಪ್ರದೇಶದ ಚೋಪ್ಡ್ವಾ(chopdwa) ಸೇತುವೆಯ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಬಿಳಿ ಥಾರ್ ವಾಹನವೊಂದು ಪೊಲೀಸ್ ತಪಾಸಣೆಯನ್ನು ಕಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿತು. ಮತ್ತೊಂದು ಪೊಲೀಸ್ ಬೆಂಗಾವಲು ವಾಹನ ಅವರನ್ನು ಹಿಂಬಾಲಿಸಿ ತಡೆದರು. ನಂತರ ಪೊಲೀಸರು ವಾಹನವನ್ನು ಶೋಧಿಸಿದಾಗ ಅದರಲ್ಲಿ 16 ಬಾಟಲಿ ಮದ್ಯ ಮತ್ತು ಎರಡು ಕ್ಯಾನ್ ಬಿಯರ್ ಪತ್ತೆಯಾಗಿದೆ. ನಂತರ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಕಚ್ ಪೂರ್ವ ಸಿಐಡಿಯ ಅಧಿಕಾರಿ ನೀತಾ ಚೌಧರಿ ಮತ್ತು ಕಳ್ಳಸಾಗಣೆದಾರನನ್ನು ಯುವರಾಜ್ ಸಿಂಗ್ ಎಂದು ಪತ್ತೆ ಮಾಡಲಾಗಿದೆ. ಇವರಿಬ್ಬರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಯುವರಾಜ್ ಸಿಂಗ್ ಈ ಹಿಂದೆ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆ ಯತ್ನ ಸೇರಿದಂತೆ 6 ಪ್ರಕರಣಗಳಲ್ಲಿ ಬೇಕಾಗಿದ್ದಾನೆ ಎನ್ನಲಾಗಿದೆ. ಮತ್ತು ಪೊಲೀಸ್ ಅಧಿಕಾರಿ ನೀತಾ ಚೌಧರಿ ಅವರು ಪೊಲೀಸ್ ಸಮವಸ್ತ್ರದಲ್ಲಿ ನೃತ್ಯ ವೀಡಿಯೊಗಳನ್ನು ಮಾಡುವುದು ಸೇರಿದಂತೆ ತನ್ನ ಅಸಾಂಪ್ರದಾಯಿಕ ನಡವಳಿಕೆಗಾಗಿ ಅವರು ಈ ಹಿಂದೆ ವಿವಾದದಲ್ಲಿ ಸಿಲುಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ಈ ಹಿಂದೆ, ಗುಜರಾತ್ ನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದ್ದರೂ ಕೆಲವು ಪೊಲೀಸ್ ಅಧಿಕಾರಿಗಳು ಕಳ್ಳಸಾಗಾಣಿಕೆದಾರರಿಗೆ ಸಹಾಯ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ತಿಳಿದುಬಂದಿತ್ತು. ಅಲ್ಲದೇ ಗುಜರಾತ್‌ನ ಭೋಪಾಲ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ಅಪಘಾತಕ್ಕೀಡಾದ ವಾಹನದಲ್ಲಿ ಮದ್ಯ ನಿಷೇಧದ ಹೊರತಾಗಿಯೂ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Good News For Farmers: ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಖಾರಿಫ್ ಬೆಳೆಗಳ ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ.

VISTARANEWS.COM


on

Good News For Farmers
Koo

ನವದೆಹಲಿ: ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ.

ಖಾರಿಫ್ ಬೆಳೆಗಳ ಬಿತ್ತನೆಗೆ (ವಿಶೇಷವಾಗಿ ಭತ್ತದಂತಹ ಹೆಚ್ಚಿನ ನೀರಿನ ಆವಶ್ಯಕತೆಯಿರುವ ಬೆಳೆ) ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಮಳೆಯ ಕೊರತೆಯು ಜೂನ್‌ನಲ್ಲಿ ಸುಮಾರು ಶೇ. 32.6ಕ್ಕೆ ತಲುಪಿದ್ದರಿಂದ ವಾಯುವ್ಯ ಭಾರತದಲ್ಲಿ ಕಳೆದ ತಿಂಗಳು ಶುಷ್ಕ ವಾತಾವರಣ ಕಂಡು ಬಂದಿತ್ತು. ಹೀಗಾಗಿ ಈ ಪ್ರದೇಶವು ತೀವ್ರವಾದ ಶಾಖದ ಅಲೆಗಳಿಂದ ಸುಟ್ಟು ಹೋಗಿತ್ತು. ಅಲ್ಲದೆ 123 ವರ್ಷಗಳಲ್ಲಿ ಅತ್ಯಂತ ಬೆಚ್ಚಗಿನ ಜೂನ್ ಎನಿಸಿಕೊಂಡಿತ್ತು. ಸರಾಸರಿ ಮಾಸಿಕ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 1.65 ಡಿಗ್ರಿ ಹೆಚ್ಚು ದಾಖಲಾಗಿತ್ತು.

ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಜತೆಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಬಹುದಾದಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹರಿಯಾಣ, ಉತ್ತರಾಖಂಡಕ್ಕೆ ಎಚ್ಚರಿಕೆ

ಐಎಂಡಿ ಡಿಜಿ ಡಾ.ಎಂ.ಮೊಹಾಪಾತ್ರ ಅವರ ಪ್ರಕಾರ ಜುಲೈನಲ್ಲಿ ಸುರಿಯುವ ಧಾರಾಕಾರ ಮಳೆಯು ಪಶ್ಚಿಮ ಹಿಮಾಲಯದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಬೆಟ್ಟದ ತಪ್ಪಲಿನ ರಾಜ್ಯಗಳಲ್ಲಿ ನದಿ ಪ್ರವಾಹಕ್ಕೆ ಕಾರಣವಾಗಬಹುದು.

“ಮುನ್ಸೂಚನೆಯ ಪ್ರಕಾರ ಭಾರೀ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಮಳೆಯಿಂದ ಭೂಕುಸಿತದಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ. ಮಧ್ಯ ಭಾರತದ ಕೆಲವು ಭಾಗಗಳಲ್ಲಿ, ಗೋದಾವರಿ, ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರು ಎಚ್ಚರಿಕೆ ವಹಿಸಬೇಕುʼʼ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ಇದರ ಹೊರತಾಗಿ ಉತ್ತರ ಪ್ರದೇಶದ ಕೆಲವು ಭಾಗಗಳಾದ ಗೋರಖ್ಪುರ, ಬಿಹಾರದ ಪಶ್ಚಿಮ ಜಿಲ್ಲೆಗಳು, ಜಾರ್ಖಂಡ್, ಮುಂತಾದ ಕೆಲವು ಭಾಗಗಳು ಮತ್ತು ಲಡಾಖ್‌ನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಜೂನ್‌ನಲ್ಲಿ ಮಳೆ ಕೊರತೆ

ಭಾರತವು ಜೂನ್‌ನಲ್ಲಿ ಸುಮಾರು ಶೇ. 10.9ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ವಾಯುವ್ಯ ಭಾರತದಲ್ಲಿ ಇದರ ಪ್ರಮಾಣ ಹೆಚ್ಚು (ಶೇ. 32.6). ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತ (ಸುಮಾರು ಶೇ. 13)ದಲ್ಲಿಯೂ ಮಳೆ ಕೊರತೆ ಕಂಡು ಬಂದಿದೆ. ಸದ್ಯ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಂಡಿದ್ದು, ಮತ್ತು ಮುಂದಿನ ಎರಡು-ಮೂರು ದಿನಗಳಲ್ಲಿ ಭಾರತವನ್ನು ಆವರಿಸಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಕೊರತೆಯು ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳಕ್ಕೆ ಮತ್ತು ತೀವ್ರವಾದ ಶಾಖದ ಅಲೆಗಳಿಗೆ ಕಾರಣವಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಬೇಸಿಗೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸುಮಾರು 20ರಿಂದ 38 ದಿನಗಳವರೆಗೆ ಉಷ್ಣಗಾಳಿ ಬೀಸಿದೆ.

ಇದನ್ನೂ ಓದಿ: Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Continue Reading

ರಾಜಕೀಯ

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಇಂದು (ಜುಲೈ 2) ನರೇಂದ್ರ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ. ಅಧಿವೇಶನದ ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ (Parliament Sessions). ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಸೋಮವಾರ ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ (Rahul Gandhi) ಸರ್ಕಾರದ ಬೆವರಿಳಿಸಿದ್ದಾರೆ. ನೀಟ್‌ (NEET) ವಿವಾದ ಚರ್ಚೆ ನಡೆಸಬೇಕೆಂಬ ಬೇಡಿಕೆ ಮುಂದಿಟ್ಟು ಅವರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇಂದು (ಜುಲೈ 2) ನರೇಂದ್ರ ಮೋದಿ (Narendra Modi) ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ.

ಪ್ರತಿಪಕ್ಷಗಳ ನಾಯಕನಾದ ಬಳಿಕ ರಾಹುಲ್‌ ಗಾಂಧಿ ಸೋಮವಾರ ಮೊದಲ ಬಾರಿ ಲೋಕಸಭೆಯಲ್ಲಿ ಮಾತನಾಡಿದ್ದು, ಇಂದು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮೋದಿ ಉತ್ತರವನ್ನು ನೀಡಲಿದ್ದಾರೆ.

ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲು, ಮೋದಿ ಬೆಳಿಗ್ಗೆ 9:30ಕ್ಕೆ ಎನ್‌ಡಿಎ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಆಡಳಿತಾರೂಢ ಬಣದ ಸಂಸದರನ್ನುದ್ದೇಶಿಸಿ ಮೋದಿ ನಡೆಸುವ ಮೊದಲ ಭಾಷಣ ಇದಾಗಿರಲಿದೆ. 2014ರ ನಂತರ ಮೊದಲ ಬಾರಿಗೆ ಬಿಜೆಪಿ ಬಹುಮತ ಕಳೆದುಕೊಂಡಿರುವುದರಿಂದ ಮತ್ತು ಆಡಳಿತ ನಡೆಸಲು ಮಿತ್ರಪಕ್ಷಗಳನ್ನು ಅವಲಂಬಿಸಬೇಕಿರುವಿದರಿಂದ ಈ ಬೆಳವಣಿಗೆ ಮಹತ್ವವನ್ನು ಪಡೆದುಕೊಂಡಿದೆ. 543 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಮಿತ್ರಪಕ್ಷಗಳು 53 ಸ್ಥಾನಗಳಲ್ಲಿ ಜಯಗಳಿಸಿವೆ.

ಆರಂಭದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಶುಕ್ರವಾರ ನಿಗದಿಪಡಿಸಲಾಗಿತ್ತು. ಆದರೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ರಾಹುಲ್‌ ಗಾಂಧಿ ವಾಗ್ದಾಳಿ

ಸೋಮವಾರ ರಾಹುಲ್‌ ಗಾಂಧಿ ವಿವಿಧ ವಿಚಾರಗಳನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಸಜ್ಜಾಗಿಯೇ ಬಂದಿದ್ದ ರಾಹುಲ್‌ ಗಾಂಧಿ, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ನೇರವಾಗಿ ತಿವಿದರು. ಇದರಿಂದ ಸದನ ರಣರಂಗವಾಗಿತ್ತು. ʼʼಅಗ್ನಿಪಥ್ ಯೋಜನೆಯು ಪ್ರಧಾನಿ ಮೋದಿಯ ಕೂಸು. ಆದರೆ ಸಶಸ್ತ್ರ ಪಡೆಗಳದ್ದಲ್ಲ. ನಮ್ಮ ಸರ್ಕಾರ ಬಂದಾಗ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತೇವೆ. ಏಕೆಂದರೆ ಇದು ಸಶಸ್ತ್ರ ಪಡೆಗಳು ಮತ್ತು ದೇಶಭಕ್ತಿಗೆ ವಿರುದ್ಧವಾಗಿದೆ. ಬಿಜೆಪಿಯ ನೀತಿಗಳು, ರಾಜಕಾರಣವು ಮಣಿಪುರವನ್ನು ಭಸ್ಮ ಮಾಡಿದೆ, ನಾಗರಿಕ ಯುದ್ಧಕ್ಕೆ ನೂಕಿದೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಈವರೆಗೂ ಭೇಟಿ ನೀಡಿಲ್ಲ. ನೀಟ್‌ ಅಕ್ರಮದಿಂದ ಕೋಟ್ಯಂತರ ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆʼʼ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ದೂರಿದ್ದ ಅವರು, ʼʼಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ. ಪ್ರಧಾನಿ ಮೋದಿಯವರ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಪ್ರಕರಣಗಳು ನನ್ನ ವಿರುದ್ಧ ದಾಖಲಾಗಿವೆ. ನನ್ನ ಮನೆಯನ್ನು ಕಿತ್ತುಕೊಳ್ಳಲಾಯಿತು, ಇ.ಡಿ 55 ಗಂಟೆಗಳ ವಿಚಾರಣೆ ನಡೆಸಿತುʼʼ ಎಂದು ಹೇಳಿದ್ದರು.

ಪ್ರತಿಪಕ್ಷಗಳ, ರಾಹುಲ್‌ ಗಾಂಧಿ ಅವರ ಈ ಎಲ್ಲ ಆರೋಪಗಳಿಗೆ ನರೇಂದ್ರ ಮೋದಿ ಅವರು ಇಂದು ಯಾವ ರೀತಿ ಉತ್ತರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading
Advertisement
karnataka cm mallikarjun kharge siddaramiah dk shivakumar
ಪ್ರಮುಖ ಸುದ್ದಿ6 mins ago

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Student death
ಚಿತ್ರದುರ್ಗ18 mins ago

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

MUDA site Cm Siddaramaiah says his wife was given MUDA site during BJP regimescandal
ಕರ್ನಾಟಕ39 mins ago

MUDA site scandal: ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

Highest Collection Movie
ಸಿನಿಮಾ49 mins ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Narendra Modi
ರಾಜಕೀಯ50 mins ago

Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

theft Case
ಕ್ರೈಂ56 mins ago

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

AR Rahman
ಕ್ರೀಡೆ1 hour ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ1 hour ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest1 hour ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ1 hour ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌