ವಿಸ್ತಾರ ಸಂಪಾದಕೀಯ: ವಿದೇಶಗಳಲ್ಲಿ ಪ್ರಧಾನಿ ಮೋದಿಗೆ ಆದರ, ಇದು ಭಾರತದ ಹಿರಿಮೆ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ವಿದೇಶಗಳಲ್ಲಿ ಪ್ರಧಾನಿ ಮೋದಿಗೆ ಆದರ, ಇದು ಭಾರತದ ಹಿರಿಮೆ

ಪ್ರಧಾನಿ ಮೋದಿ ಹಲವು ದೇಶಗಳ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರಿಗೆ ಸಿಕ್ಕಿರುವ ಆದರ ಗೌರವ ಅಭೂತಪೂರ್ವ. ಇದು ಮೋದಿಯವರಿಗೆ ಅವರ ವೈಯಕ್ತಿಕ ವರ್ಚಸ್ಸಿನಿಂದ ಸಿಕ್ಕಿರುವ ಗೌರವ ಎನ್ನಬಹುದಾದರೂ, ಇದು ವಿದೇಶಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವದ ಸೂಚಕವೂ ಹೌದು.

VISTARANEWS.COM


on

Narendra Modi
ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಧಾನಿ ಮೋದಿಯವರು ಜಪಾನ್‌ ಸೇರಿದಂತೆ ಹಲವು ದೇಶಗಳ ಪ್ರವಾಸದಲ್ಲಿದ್ದಾರೆ. ಜಪಾನ್‌ನಲ್ಲಿ ಜಿ7 ದೇಶಗಳ ಶೃಂಗಸಭೆಯಿಂದ ಆರಂಭವಾದ ಅವರ ಪ್ರವಾಸ, ಪಪುವಾ ನ್ಯೂಗಿನಿಯಾದಲ್ಲಿ ಭಾರತ- ಪೆಸಿಫಿಕ್‌ ದ್ವೀಪಗಳ ಸಹಕಾರ ಸಂಘಟನೆ (FIPIC)ಯ ಮಾತುಕತೆಯೊಂದಿಗೆ ಮುಂದುವರಿದು, ಸದ್ಯ ಆಸ್ಟ್ರೇಲಿಯಾದಲ್ಲಿದ್ದಾರೆ. ಅಮೆರಿಕ, ಜಪಾನ್‌, ಆಸ್ಟ್ರೇಲಿಯಗಳ ದೇಶ ಮುಖ್ಯಸ್ಥರ ಜತೆಗೆ ಜಿ7 ದೇಶಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಈ ಭೇಟಿಗಳ ಸಂದರ್ಭದಲ್ಲಿ ಅಲ್ಲಿಯ ಜನ ಅಷ್ಟೇ ಅಲ್ಲ, ಆ ದೇಶಗಳ ಪ್ರಧಾನಿ, ಅಧ್ಯಕ್ಷರಂಥ ಉನ್ನತ ಸ್ಥಾನದಲ್ಲಿದ್ದವರೂ ಮೋದಿಯವರನ್ನು ಆದರಿಸುತ್ತಿರುವ ಪರಿ ಅಚ್ಚರಿ ಎನಿಸುತ್ತದೆ. ಪಪುವಾ ನ್ಯೂಗಿನಿಯಾ ದೇಶಕ್ಕೆ ತೆರಳಿದಾಗ ಅಲ್ಲಿಯ ಪ್ರಧಾನಿ ಜೇಮ್ಸ್ ಮರಾಪೆ ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿದ್ದರು. ಆಸ್ಟ್ರೇಲಿಯಾದ ಪ್ರಧಾನಿ ಮೋದಿಯವರನ್ನು ʼಬಾಸ್ʼ ಎಂದು ಕರೆದು ಗೌರವಿಸಿದ್ದಾರೆ. ಅಷ್ಟೇ ಅಲ್ಲ. ಅಮೆರಿಕದ ರಾಕ್ ಸ್ಟಾರ್ ಬಂದಾಗಲೂ ಇಷ್ಟು ಜನ ಸೇರಿರಲಿಲ್ಲ ಎಂದು ಬಣ್ಣಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಮೋದಿಯವರಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಭಾರತ್ ಮಾತಾಕಿ ಜೈ, ಹರ್ ಹರ್ ಮೋದಿ ಘೋಷಣೆ ಮುಗಿಲು ಮುಟ್ಟಿದೆ. ಫಿಜಿ ಮತ್ತು ಪಪುವಾ ನ್ಯೂಗಿನಿಯಾ ದೇಶಗಳು ಮೊದಿಯವರಿಗೆ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿವೆ. ಜಪಾನ್‌ನಲ್ಲೂ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಕ್ವಾಡ್ ಶೃಂಗ ಸಭೆಯ ಸಂದರ್ಭ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಮೋದಿಯವರನ್ನು ಹುಡುಕಿಕೊಂಡು ಬಂದು ಆಲಂಗಿಸಿದ್ದು ಭಾರಿ ಸುದ್ದಿಯಾಗಿತ್ತು.

ಇದು ಮೋದಿಯವರಿಗೆ ಅವರ ವೈಯಕ್ತಿಕ ವರ್ಚಸ್ಸಿನಿಂದ ಸಿಕ್ಕಿರುವ ಗೌರವ ಎನ್ನಬಹುದಾದರೂ, ಇದು ವಿದೇಶಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವದ ಸೂಚಕವೂ ಹೌದು. ಪ್ರಮುಖ ಜಾಗತಿಕ ಆರ್ಥಿಕ ಶಕ್ತಿಗಳು, ಭಾರತದ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡಿವೆ. 3.5 ಟ್ರಿಲಿಯನ್‌ ಡಾಲರ್ ತಲುಪಿರುವ ನಮ್ಮ ದೇಶದ ಎಕಾನಮಿ ಅವರ ಗಮನ ಸೆಳೆದಿರುವುದರಲ್ಲಿ ಸಂಶಯವಿಲ್ಲ. ಎಲ್ಲ ಬಹುರಾಷ್ಟ್ರೀಯ ಕಂಪನಿಗಳೂ ತಮ್ಮ ಅಗಾಧವಾದ ಮಾರುಕಟ್ಟೆಯನ್ನು ಇಲ್ಲಿ ವಿಸ್ತರಿಸಿವೆ; ಇನ್ನಷ್ಟು ವಿಸ್ತರಿಸಲು ಉತ್ಸುಕವಾಗಿವೆ. ಹಾಗೆಯೇ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ಭಾರತ ದಾಪುಗಾಲು ಹಾಕುತ್ತಿದೆ. ವಿಶ್ವದ ಆಗುಹೋಗುಗಳಲ್ಲಿ ಈಗ ಭಾರತವೂ ಪ್ರಮುಖ ಪಾತ್ರ ವಹಿಸುತ್ತಿದೆ ಎನ್ನಲು ಹಲವು ಬೆಳವಣಿಗೆಗಳು ಸಾಕ್ಷಿಯಾಗಿವೆ. ವ್ಯಾಪಾರ ವಹಿವಾಟು, ಹೂಡಿಕೆ, ಹವಾಮಾನ ವೈಪರೀತ್ಯ, ಸುಸ್ಥಿರ ಅಭಿವೃದ್ಧಿಯ ವಿಚಾರಗಳಲ್ಲಿ ಭಾರತದ ಮಾತಿಗೆ ಇತರ ದೇಶಗಳು ತಲೆದೂಗುತ್ತಿವೆ. ಸೋಲಾರ್‌ ಇಂಧನ ಕ್ರಾಂತಿಯಲ್ಲಿ ಭಾರತ ಮುಂದಿದೆ. ಈ ಕುರಿತು ಮೋದಿಯವರು ನೀಡಿರುವ ದಿಗ್ದರ್ಶನದಿಂದ ಸ್ಫೂರ್ತಿಗೊಂಡಿರುವ 125 ದೇಶಗಳು ಭಾರತದ ನೇತೃತ್ವದಲ್ಲಿ ʼಅಂತಾರಾಷ್ಟ್ರೀಯ ಸೋಲಾರ್‌ ಒಕ್ಕೂಟʼವನ್ನು 2015ರಲ್ಲಿ ರಚಿಸಿಕೊಂಡಿದ್ದು, ಅದಕ್ಕೆ ಭಾರತವೇ ಅಧ್ಯಕ್ಷ ಸ್ಥಾನದಲ್ಲಿದೆ. 2030ರ ಒಳಗೆ ಇ-ವಾಹನ ಮಾರುಕಟ್ಟೆಯ ನೇತಾರನಾಗುವ ಭರವಸೆಯನ್ನೂ ಮೋದಿ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರತಿಪಾದಿಸುತ್ತ ಬಂದಿದ್ದು, ಪೆಟ್ರೋಲಿಯಂ ಇಂಧನಕ್ಕೆ ಪರ್ಯಾಯ ನೀತಿಗಳನ್ನು ರೂಪಿಸಲಾಗುತ್ತಿದೆ.

ಇದನ್ನೂ ಓದಿ: Narendra Modi: ಮೋದಿಯನ್ನು ಬಾಸ್‌ ಎಂದ ಆಸ್ಟ್ರೇಲಿಯಾ ಪ್ರಧಾನಿ; ಅಮೆರಿಕ ರಾಕ್‌ಸ್ಟಾರ್‌ ಜನಪ್ರಿಯತೆಗೆ ಹೋಲಿಕೆ

ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಅರ್ಧಪಾಲು ಜಗತ್ತಿಗೆ ನೇತಾರನ ಸ್ಥಾನದಲ್ಲಿದೆ. ಭಾರತದ ವೈದ್ಯರು ಹಾಗೂ ಐಟಿ ಉದ್ಯೋಗಿಗಳು ಉತ್ಕೃಷ್ಟತೆಯ ಪ್ರತೀಕಗಳಾಗಿ, ಅಮೆರಿಕ ಹಾಗೂ ಯುರೋಪ್‌ ಅನ್ನು ಆವರಿಸಿಕೊಂಡಿದ್ದಾರೆ. ಭಾರತದ ʼಲುಕ್‌ ಈಸ್ಟ್‌ ಪಾಲಿಸಿʼ ಹಾಗೂ ಅರಬ್‌ ದೇಶಗಳ ಜತೆಗೆ ಹೆಚ್ಚಿನ ಸೌಹಾರ್ದ ಸೃಷ್ಟಿಸಿಕೊಳ್ಳುವ ವಿದೇಶಾಂಗ ನೀತಿಯಂತೂ ನಮಗೆ ಅನೇಕ ಅತ್ಯುತ್ತಮ ಫಲಗಳನ್ನು ತಂದುಕೊಟ್ಟಿದೆ. ಉಕ್ರೇನ್-‌ ರಷ್ಯಾ ಯುದ್ಧದ ಸಂದರ್ಭದಲ್ಲಿ ತೈಲದ ಕೊರತೆಯಿಂದ ಹಲವು ದೇಶಗಳು ತತ್ತರಿಸುತ್ತಿದ್ದರೂ ಭಾರತಕ್ಕೆ ಅದರ ಸಮಸ್ಯೆಯಾಗಲಿಲ್ಲ. ಭಾರತಕ್ಕೆ ದುಃಸ್ವಪ್ನವನ್ನು ಸೃಷ್ಟಿಸುವ ಚೀನಾದ ಪ್ರಯತ್ನಗಳು ಪೆಸಿಫಿಕ್‌ ಒಕ್ಕೂಟದ ಜತೆಗಿನ ಭಾರತದ ಮೈತ್ರಿ, ಬಲಿಷ್ಠ ದೇಶಗಳ ಜತೆಗಿನ ಸೌಹಾರ್ದದ ವಿದೇಶಾಂಗ ನೀತಿಗಳ ಫಲವಾಗಿ ವಿಫಲಗೊಂಡಿವೆ. ಇದೆಲ್ಲವೂ ದೇಶದ ಭವ್ಯ ಭವಿಷ್ಯದ ದೃಷ್ಟಿಯಿಂದ ಮಹತ್ವದ ವಿದ್ಯಮಾನಗಳು. ಈ ಸಲದ ಪ್ರವಾಸದಲ್ಲಿ ಮೋದಿಯವರಿಗೆ ಸಂದ ಗೌರವವನ್ನು ನಾವು ಹೀಗೆ ವಿಶ್ಲೇಷಿಸಿದಾಗ ಅದು ಸಂಪೂರ್ಣ ಅರ್ಥ ಪಡೆದುಕೊಳ್ಳುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narendra Modi: ಕಾಶಿಯಲ್ಲಿ ವೈಭವದ ಗಂಗಾ ಆರತಿ ಕಣ್ತುಂಬಿಕೊಂಡ ಮೋದಿ; ಇಲ್ಲಿದೆ Photo Gallery

Narendra Modi: ಸತತ ಮೂರನೇ ಬಾರಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ಮಂಗಳವಾರ (ಜೂನ್‌ 18) ತಮ್ಮ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದರು. ಈ ವೇಳೆ ಅವರು ವಿಶ್ವನಾಥ ದೇಗುಲಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಜತೆಗೆ ಗಂಗಾ ಆರತಿಯಲ್ಲಿಯೂ ಪಾಲ್ಗೊಂಡರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜತೆಗಿದ್ದರು.

VISTARANEWS.COM


on

Narendra Modi
Koo

ಲಕ್ನೋ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದರು. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಅವರು, ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಪ್ರಧಾನಿಯನ್ನಾಗಿ ಆರಿಸಿದ್ದಕ್ಕೆ ಮತದಾರರಿಗೆ ದನ್ಯವಾದ ಅರ್ಪಿಸಿದರು. ರಾತ್ರಿ ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಜತೆಗೆ ವಾರಾಣಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆದ ಗಂಗಾ ಆರತಿಯನ್ನು ಕಣ್ತುಂಬಿಕೊಂಡರು. ಈ ಕ್ಷಣಗಳ ಫೋಟೊ ಗ್ಯಾಲರಿ ಇಲ್ಲಿದೆ.

ಇದನ್ನೂ ಓದಿ: Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Continue Reading

ಭವಿಷ್ಯ

Dina Bhavishya : ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಧನಸ್ಸು ರಾಶಿಯನ್ನು ಮಧ್ಯಾಹ್ನ 12:31ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಟಕ ರಾಶಿಯವರು ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 07:27 ವಾರ: ಬುಧವಾರ
ನಕ್ಷತ್ರ: ವಿಶಾಖಾ 17:22 ಯೋಗ: ಸಿದ್ಧಿ 21:10
ಕರಣ: ಬಾಲವ 07:27 ಅಮೃತಕಾಲ: ಬೆಳಗ್ಗೆ 08:03 ರಿಂದ 09:45 ರವರೆಗೆ
ದಿನದ ವಿಶೇಷ: ಬೆಂಗಳೂರು ಹೊಸಕೆರೆಹಳ್ಳಿ ಉತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:48

ರಾಹುಕಾಲ: ಮಧ್ಯಾಹ್ನ 12:21 ರಿಂದ 01:58
ಗುಳಿಕಕಾಲ: ಬೆಳಗ್ಗೆ 10:44 ರಿಂದ 12:21
ಯಮಗಂಡಕಾಲ: ಬೆಳಗ್ಗೆ 07:31 ರಿಂದ 09:08

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ:ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ :ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ. ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Bomb Threat: ಮುಂಬೈನ 50ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್‌ ದಾಳಿ ಬೆದರಿಕೆ; ಎಲ್ಲೆಡೆ ಕಟ್ಟೆಚ್ಚರ

Bomb Threat: ಮುಂಬೈನಲ್ಲಿರುವ ಪ್ರತಿಷ್ಠಿತ ಜಸ್ಲೋಕ್‌ ಹಾಸ್ಪಿಟಲ್‌, ರಹೇಜಾ ಹಾಸ್ಪಿಟಲ್‌, ಸೆವೆನ್‌ ಹಿಲ್ಸ್‌, ಕೊಹಿನೂರ್‌, ಕೆಇಎಂ, ಜೆಜೆ ಹಾಸ್ಪಿಟಲ್‌, ಸೇಂಟ್‌ ಜಾರ್ಜ್‌ ಹಾಸ್ಪಿಟಲ್‌ ಸೇರಿ ಹಲವು ಆಸ್ಪತ್ರೆಗಳ ಮೇಲೆ ಬಾಂಬ್‌ ದಾಳಿ ಮಾಡಲಾಗುವುದು ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಇದಕ್ಕೂ ಕೆಲ ಗಂಟೆಗಳ ಮೊದಲು ದೇಶದ 41 ಏರ್‌ಪೋರ್ಟ್‌ಗಳನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಒಡ್ಡಲಾಗಿತ್ತು.

VISTARANEWS.COM


on

Bomb threat
Koo

ಮುಂಬೈ: ದೇಶದಲ್ಲಿ ಇತ್ತೀಚೆಗೆ ಪ್ರಮುಖ ನಗರಗಳಲ್ಲಿ ಬಾಂಬ್‌ ದಾಳಿಗಳ ಬೆದರಿಕೆಗಳು (Bomb Threat) ಜಾಸ್ತಿಯಾಗಿವೆ. ಬೆಂಗಳೂರಿನ ಶಾಲೆಗಳು ಸೇರಿ ಮುಂಬೈ, ದೆಹಲಿ ಏರ್‌ಪೋರ್ಟ್‌ಗಳು (Airports), ಸರ್ಕಾರದ ಕಟ್ಟಡಗಳಿಗೆ ಹುಸಿ ಬೆದರಿಕೆ ಕರೆಗಳು, ಇ-ಮೇಲ್‌ಗಳು ರವಾನೆಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಮಂಗಳವಾರ (ಜೂನ್‌ 18) ಮುಂಬೈನಲ್ಲಿರುವ 50ಕ್ಕೂ ಅಧಿಕ ಆಸ್ಪತ್ರೆಗಳನ್ನು (Mumbai Hospitals) ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಹಾಗಾಗಿ, ಪೊಲೀಸರು ಆಸ್ಪತ್ರೆಗಳ ಸುತ್ತ ಕಟ್ಟೆಚ್ಚರ ವಹಿಸಿದ್ದಾರೆ.

ಮಂಗಳವಾರವೇ ದೇಶದ 41 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂಬುದಾಗಿ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಆಗಲೂ ಭದ್ರತಾ ಸಿಬ್ಬಂದಿ, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯ ಪರಿಶೀಲನೆ ನಡೆಸಿದ್ದರು. ಇದಾದ ಕೆಲವೇ ಗಂಟೆಯಲ್ಲಿ ಮುಂಬೈನ ಆಸ್ಪತ್ರೆಗಳಿಗೂ ಬಾಂಬ್‌ ಬೆದರಿಕೆ ಹಾಕಲಾಗಿದೆ. ಬಾಂಬ್‌ ಬೆದರಿಕೆಯ ಕುರಿತು ಪೊಲೀಸರೇ ಮಾಹಿತಿ ನೀಡಿದ್ದಾರೆ. ವಿಪಿಎನ್‌ ನೆಟ್‌ವರ್ಕ್‌ ಬಳಸಿ ಬಾಂಬ್‌ ದಾಳಿಯ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಂಬೈನಲ್ಲಿರುವ ಪ್ರತಿಷ್ಠಿತ ಜಸ್ಲೋಕ್‌ ಹಾಸ್ಪಿಟಲ್‌, ರಹೇಜಾ ಹಾಸ್ಪಿಟಲ್‌, ಸೆವೆನ್‌ ಹಿಲ್ಸ್‌, ಕೊಹಿನೂರ್‌, ಕೆಇಎಂ, ಜೆಜೆ ಹಾಸ್ಪಿಟಲ್‌, ಸೇಂಟ್‌ ಜಾರ್ಜ್‌ ಹಾಸ್ಪಿಟಲ್‌ ಸೇರಿ ಹಲವು ಆಸ್ಪತ್ರೆಗಳ ಮೇಲೆ ಬಾಂಬ್‌ ದಾಳಿ ಮಾಡಲಾಗುವುದು ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಇ-ಮೇಲ್‌ ಮೂಲಕ ಬೆದರಿಕೆ ಒಡ್ಡುತ್ತಲೇ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯು ಆಸ್ಪತ್ರೆಗಳಿಗೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಭದ್ರತೆಯನ್ನು ಕೂಡ ಹೆಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ನಕಲಿ ಬಾಂಬ್‌ ಬೆದರಿಕೆ ಎಂಬುದಾಗಿ ತಿಳಿದುಬಂದಿತ್ತು. ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಾಗಲಂತೂ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದಾದ ಬಳಿಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು.

ಇದನ್ನೂ ಓದಿ: Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Continue Reading

ದೇಶ

Jagan Mohan Reddy: ಸರ್ಕಾರದ 500 ಕೋಟಿ ರೂ.ನಲ್ಲಿ ಜಗನ್‌ ಅರಮನೆ ನಿರ್ಮಾಣ? ಟಿಡಿಪಿ ಸ್ಫೋಟಕ ಆರೋಪ

Jagan Mohan Reddy: ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಇಂತಹ ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ.

VISTARANEWS.COM


on

Jagan Mohan Reddy
Koo

ಅಮರಾವತಿ: ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ (Andhra Pradesh Assembly Election 2024) ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ (Jagan Mohan Reddy) ಅವರ ವೈಎಸ್‌ಆರ್‌ಸಿಪಿ ಪಕ್ಷವು ಸೋಲನುಭವಿಸಿದ್ದು, ಜಗನ್‌ ಮೋಹನ್‌ ರೆಡ್ಡಿ ಅವರು ಮುಖಭಂಗ ಅನುಭವಿಸಿದ್ದಾರೆ. ಎನ್‌.ಚಂದ್ರಬಾಬು ನಾಯ್ಡು (N Chandra Babu Naidu) ಅವರ ಟಿಡಿಪಿಯು ಆಂಧ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ, “ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದ 500 ಕೋಟಿ ರೂ. ವೆಚ್ಚದಲ್ಲಿ ವಿಶಾಖಪಟ್ಟಣಂನಲ್ಲಿ ಅರಮನೆಯಂತಹ ಐಷಾರಾಮಿ ಬಂಗಲೆ ಕಟ್ಟಿಸಿಕೊಂಡಿದ್ದಾರೆ” ಎಂಬುದಾಗಿ ಟಿಡಿಪಿ ಗಂಭೀರ ಆರೋಪ ಮಾಡಿದೆ.

ವಿಶಾಖಪಟ್ಟಣಂನಲ್ಲಿರುವ ಋಷಿಕೊಂಡ ಬೆಟ್ಟದಲ್ಲಿ ನಿರ್ಮಿಸಲಾಗಿರುವ ಟಿಡಿಪಿ ಶಾಸಕ ಗಂಟಾ ಶ್ರೀನಿವಾಸ್‌ ರಾವ್‌ ನೇತೃತ್ವದ ಎನ್‌ಡಿಎ ನಿಯೋಗವು ಭೇಟಿ ನೀಡಿದ್ದು, ಇದಾದ ಬಳಿಕ ಟಿಡಿಪಿಯು ಗಂಭೀರ ಆರೋಪ ಮಾಡಿದೆ. “ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದ 500 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಬಂಗಲೆಯನ್ನು ಕಟ್ಟಿಸಿಕೊಂಡಿದ್ದಾರೆ. ಇನ್ನೂ 10 ವರ್ಷ ಆಡಳಿತದಲ್ಲಿರುತ್ತೇನೆ ಎಂದು ಭಾವಿಸಿ, ವೈಯಕ್ತಿಕ ಕಾರಣಗಳಿಗಾಗಿ ಇದನ್ನು ಬಳಸುವುದು ಅವರ ಉದ್ದೇಶವಾಗಿತ್ತು” ಎಂದು ಟಿಡಿಪಿ ಆರೋಪಿಸಿದೆ.

ವಿಶಾಖಪಟ್ಟಣಂ ಅಥವಾ ವೈಜಾಗ್‌ಅನ್ನೇ ಇದಕ್ಕೂ ಮೊದಲು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿತ್ತು. ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಇದಕ್ಕೂ ಮೊದಲು ಮೂರು ನಗರಗಳನ್ನು ರಾಜಧಾನಿ ಎಂಬುದಾಗಿ ಘೋಷಿಸಲಾಗಿತ್ತು. ವಿಶಾಖಪಟ್ಟಣಂಅನ್ನು ಕೂಡ ರಾಜಧಾನಿ ಎಂಬುದಾಗಿ ಘೋಷಿಸಲಾಗಿತ್ತು. ಹಾಗಾಗಿ, ಇಲ್ಲಿಯೇ ಐಷಾರಾಮಿ ಮನೆಯನ್ನು ಕಟ್ಟಿಸಿದ್ದಾರೆ. ಪತ್ನಿಯ ಆಸೆಯಂತೆಯೇ ಜಗನ್‌ ಮೋಹನ್‌ ರೆಡ್ಡಿ ಅವರು ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಇಂತಹ ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ. ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ವೈಎಸ್‌ಆರ್‌ಸಿಪಿಯು ಕೇವಲ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದು ಅವರಿಗೆ ಮುಖಭಂಗ ತಂದಿದೆ.

ಇದನ್ನೂ ಓದಿ: Jagan Reddy : ಚುನಾವಣಾ ರ್ಯಾಲಿಯಲ್ಲಿ ಆಂಧ್ರ ಸಿಎಂ ಜಗನ್​​ ತಲೆಗೆ ಕಲ್ಲೆಸೆತ

Continue Reading
Advertisement
International Yoga Day 2024
ಆರೋಗ್ಯ3 mins ago

International Yoga Day 2024: ಹಿರಿಯರಿಗೆ ಸೂಕ್ತವಾದ ಯೋಗಾಸನಗಳಿವು

Lucknow Airport
ದೇಶ10 mins ago

Lucknow Airport: ವಿಮಾನ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ನಡೆಸಿದ ಮಹಿಳೆ; ಕಾರಣ ಏನು?

USA vs SA
ಕ್ರಿಕೆಟ್11 mins ago

USA vs SA: ಇಂದು ದಕ್ಷಿಣ ಆಫ್ರಿಕಾ-ಅಮೆರಿಕ ನಡುವೆ ಸೂಪರ್​-8 ಕದನ

Vastu Tips
ಧಾರ್ಮಿಕ25 mins ago

Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?

actor Darshan Arrested
ಕ್ರೈಂ40 mins ago

Actor Darshan: `ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

Narendra Modi
ದೇಶ51 mins ago

Narendra Modi: ಕಾಶಿಯಲ್ಲಿ ವೈಭವದ ಗಂಗಾ ಆರತಿ ಕಣ್ತುಂಬಿಕೊಂಡ ಮೋದಿ; ಇಲ್ಲಿದೆ Photo Gallery

New criminal laws
ದೇಶ56 mins ago

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

renuka swamy murder case
ಕ್ರೈಂ1 hour ago

Renuka Swamy Murder Case: ರಾಜಕಾಲುವೆ ಪಾಲಾದ ಮೊಬೈಲ್‌ ಹುಡುಕಾಟಕ್ಕೆ ಅಗ್ನಿಶಾಮಕ ದಳ

International Yoga Day 2024
ದೇಶ1 hour ago

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ ಭಾರತದ ಹೆಮ್ಮೆ; ಈ ವರ್ಷದ ಥೀಮ್‌ ಏನು?

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌