ಕೊಪ್ಪಳ: ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ (Road Accident) ಕೊಪ್ಪಳ ತಾಲೂಕಿನ ನಿಂಗಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮಸ್ಥರಾದ ಬಸವರಾಜ (22), ಮುತ್ತಪ್ಪ (22), ಕೊಂಡಪ್ಪ (60) ಮೃತರು. ಹುಲಿಗೆಮ್ಮ ದೇವಸ್ಥಾನಕ್ಕೆ ಹೋಗಿ ಮರಳಿ ಊರಿಗೆ ಹೋಗುವಾಗ ದುರ್ಘಟನೆ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ | Rain News: ಮುಧೋಳದಲ್ಲಿ ಸಿಡಿಲಿಗೆ ಬಾಲಕಿ ಬಲಿ; ಚನ್ನರಾಯಪಟ್ಟಣ, ಗುಂಡ್ಲುಪೇಟೆ ಸೇರಿ ವಿವಿಧೆಡೆ ವರುಣಾರ್ಭಟ
ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkal News) ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವುದು ಶುಕ್ರವಾರ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ದುರ್ಘಟನೆ ನಡೆದಿದೆ. ಸೂರಜ್ ನಾಯ್ಕ (17), ಪಾರ್ವತಿ ಶಂಕರ ನಾಯ್ಕ (35) ಮೃತರು.
ಮೃತರು ಭಟ್ಕಳದ ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. ಮೃತ ಸೂರಜ್ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದಾನೆ. 15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದಾಗ ಘಟನೆ ನಡೆದಿದೆ.
ನಮಾಜ್ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು
ರಾಮನಗರ: ಈಜಲು ಹೋಗಿದ್ದ ಮೂವರು (Drowned In water) ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ (16) ಮೃತಪಟ್ಟಿದ್ದಾರೆ.
ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು, ಮೃತರೆಲ್ಲರೂ ರಾಮನಗರ ಟೌನ್‌ನ ಸುಲ್ತಾನ್ ನಗರದವರು. ಒಟ್ಟು 8 ಯುವಕರ ತಂಡ ನಮಾಜ್ ಮುಗಿಸಿದ ಈಜಲು ಹೊಂಡಕ್ಕೆ ಇಳಿದಿದ್ದರು. ಈ ವೇಳೆ ಮೂವರು ನೀರುಪಾಲಾದರೆ, ಐವರು ಸಾವಿನ ದವಡೆಯಿಂದ ಬಚಾವ್ ಆಗಿದ್ದಾರೆ.
ಇದನ್ನೂ ಓದಿ: KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ
ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.