ಚಿತ್ರದುರ್ಗ : ಶನಿವಾರ ಮುಂಜಾನೆ ವೇಳೆಗೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ(Road Accident) ನಡೆದಿದೆ. ನ್ಯಾಷನಲ್ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ನಿಗದಿತ ಕಾರ್ಯಕ್ರಮವನ್ನು ಉದ್ದೇಶವಾಗಿಟ್ಟುಕೊಂಟು ಅವರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದರೆ ಯಮಧರ್ಮರಾಯನಂತೆ ನುಗ್ಗಿದ ಲಾರಿಯು ಹಿಂಬದಿಂದ ಜೋರಾಗಿ ಗುದ್ದಿದೆ. ದೊಡ್ಡ ಲಾರಿಯು ಗುದ್ದಿದ ರಭಸಕ್ಕೆ ಕಾರಿನ ಹಿಂಭಾಗದಲ್ಲಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಈ ವೇಳೆ ಹಿಂಬದಿ ಸೀಟಿನಲ್ಲಿದ್ದ ಮಕ್ಕಳು ಹಾಗೂ ಮಹಿಳೆಯರಿಬ್ಬರು ಅಲ್ಲೇ ಮೃತಪಟ್ಟಿದ್ದಾರೆ. ಮುಂಬದಿ ಸೀಟು ಹಾಗೂ ಮಧ್ಯದಲ್ಲ ಕುಳಿತಿದ್ದವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಡಿವೈಡರ್ ಕಲ್ಲುಗಳಿಗೆ ಬಡಿದು ಕಾರು ಪಲ್ಟಿ
ರಸ್ತೆ ಮಧ್ಯೆ ಇಟ್ಟಿದ್ದ ಕಲ್ಲಿಗೆ ಕಾಣದೇ ಗುದ್ದಿದ ಕಾರೊಂದು ಪಲ್ಟಿಯಾ ಘಟನೆ ಉಡುಪಿ ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ: Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ;ಮಧ್ಯಾಹ್ನ1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ
ಮಣಿಪಾಲದಿಂದ ಉಡುಪಿಯತ್ತ ಬರುತ್ತಿದ್ದ ಫೋರ್ಡ್ ಫಿಗೊ ಕಾರು ರಸ್ತೆ ಮಧ್ಯದಲ್ಲಿ ನಿರ್ಲಕ್ಷ್ಯದಿಂದ ಇಡಲಾಗಿದ್ದ ಕಲ್ಲಿಗೆ ಗುದ್ದಿದೆ. ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದ ತಕ್ಷಣ ಕಲ್ಲಿನ ತುಂಡೊಂದು ಹಾರಿ ಸಮೀಪದಲ್ಲಿ ಹೋಗುತ್ತಿದ್ದ ಹಾರಿ ಬೈಕ್ ಗೂ ತೀವ್ರ ಹಾನಿಯಾಗಿದೆ. ಆದರೆ, ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ.
ರಸ್ತೆ ಮಧ್ಯೆ ವಿಭಜಕವನ್ನು ನಿರ್ಮಿಸಲು ಬಳಸುತ್ತಿದ್ದ ಕಲ್ಲುಗಳನ್ನು ಎಲ್ಲೆಂದರಲ್ಲಿ ಇಡಲಾಗಿತ್ತು. ಮುಂಜಾನೆ ವೇಳೆ ಹೆಡ್ ಲೈಟ್ ಪ್ರಭಾವಕ್ಕೆ ಕಲ್ಲುಗಳು ಇರುವುದನ್ನು ಅರಿಯದ ಚಾಲಕ ಅದಕ್ಕೆ ಡಿಕ್ಕಿ ಹೊಡೆದಿದ್ದಾನೆ.