ಚಿಕ್ಕೋಡಿ : ಅಕ್ರಮವಾಗಿ ಹಾಗೂ ಯಾವುದೇ ದಾಖಲೆ ಇಲ್ಲದೆ ಬಸ್ನಲ್ಲಿ ಸಾಗಿಸುತ್ತಿದ್ದ 16. 31 ಲಕ್ಷ ರೂಪಾಯಿ ಹಣವನ್ನು ಚಿಕ್ಕೋಡಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಜಾಗೃತವಾಗಿರುವ ಪೊಲೀಸರು ಹಣದ ಸಮೇತ ಮಹಾರಾಷ್ಟ್ರದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಪೊಲೀಸರ ತಪಾಸಣೆ ನಡೆಸುತ್ತಿದ್ದ ವೇಳೆ ದೊಡ್ಡ ಮೊತ್ತದ ನಗದು ಪತ್ತೆಯಾಗಿದೆ. ಚಿಕ್ಕೋಡಿ ಯಿಂದ ಮಹಾರಾಷ್ಟ್ರದ ಇಚಲಕರಂಜಿ ನಗರಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಈ ಮೊತ್ತ ಪತ್ತೆಯಾಗಿದೆ. ಬಸ್ ತಪಾಸಣೆ ವೇಳೆ ದಾಖಲೆ ಇಲ್ಲದ ಹಣ ಪತ್ತೆಯಾಗಿದ್ದು, ಅಕ್ರಮ ಹಣದ ಜೊತೆಗೆ ಇಬ್ಬರನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.
ಹಣ ಸಾಗಾಟ ಮಾಡುತ್ತಿದ್ದ ಆರೋಪಿಗಳು ಮಹಾರಾಷ್ಟ್ರದ ಇಚಲಕರಂಜಿ ನಗರದ ನಿವಾಸಿಗಳು ಎಂದು ಹೇಳಿದ್ದಾರೆ. ಪ್ರಕರಣವನ್ನ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರಲ್ಲಿ ಯುಗಾದಿಯಂದು ಜೂಜಾಟದಲ್ಲಿ ತೊಡಗಿದ್ದ 291 ಮಂದಿ ಬಂಧನ!
ತುಮಕೂರು: ಯುಗಾದಿ ಹಬ್ಬದಂದು ತುಮಕೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯ ವಿವಿಧೆಡೆ ಜೂಜಾಟಕ್ಕೆ ಸಂಬಂಧಿಸಿ 53 ಪ್ರಕರಣ ದಾಖಲಾಗಿದ್ದು, ಒಟ್ಟು 291 ಜನರನ್ನು ಬಂಧಿಸಿ, 3.21 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಗ್ರಾಮದಲ್ಲಿ ಅವಿತಿದೆ ಹುಲಿ, ಗ್ರಾಮಸ್ಥರಿಗೆ ಆತಂಕ; ಇಲ್ಲಿದೆ ವಿಡಿಯೊ
ತುಮಕೂರು ನಗರ ಉಪವಿಭಾಗದಲ್ಲಿ 15 ಪ್ರಕರಣದಲ್ಲಿ 77 ಜನರ ಬಂಧನವಾಗಿದ್ದು, ತಿಪಟೂರು ಉಪವಿಭಾಗದಲ್ಲಿ 11 ಪ್ರಕರಣದಲ್ಲಿ 63 ಜನರು, ಶಿರಾ ಉಪವಿಭಾಗದಲ್ಲಿ 20 ಪ್ರಕರಣದಲ್ಲಿ 108 ಮಂದಿ, ಮಧುಗಿರಿ ಉಪವಿಭಾಗದಲ್ಲಿ 7 ಪ್ರಕರಣದಲ್ಲಿ 43 ಜನರನ್ನು ಬಂಧಿಸಲಾಗಿದೆ.
ತುಮಕೂರು ಎಸ್‌ಪಿ ಅಶೋಕ್ ಕೆ.ವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಬಂಧಿತರ ವಿಚಾರಣೆ ಮುಂದುವರಿದಿದೆ.