ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.
ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಇದನ್ನೂ ಓದಿ: GT World Mall : ಜಿಟಿ ಮಾಲ್ ಏಳು ದಿನಗಳ ಕಾಲ ಬಂದ್, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ
ಎಕ್ಸಾಂನಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್
ಪರೀಕ್ಷೆಯಲ್ಲಿ ಫೇಲ್ (Failed in Exam) ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಮೃತಪಟ್ಟಿದ್ದಾಳೆ. ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡವಳು.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವಿತಾ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್‌ಸಿ 5ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.