Site icon Vistara News

Shiradi Ghat: ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

Shiradi Ghat

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಿನ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಗುಡ್ಡ ಕುಸಿತದ ಭೀತಿ, ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್​​

ಮಡಿಕೇರಿ: ಕೊಡುಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡ ಕುಸಿಯು ಭೀತಿ ಹುಟ್ಟಿಸಿರುವ ಗುಡ್ಡದ ಮಣ್ಣು ತೆರವು ಕಾರ್ಯ ಆರಂಭ ಮಾಡಲಾಗಿದೆ. ಅದೇ ರೀತಿ ಮಡಿಕೇರಿ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳು ಮುಂದಕ್ಕೆ ಸಾಗದಂತೆ ಅಧಿಕಾರಿಗಳು ತಡೆಯುತ್ತಿದ್ದಾರೆ ಅದೇ ರೀತಿ ದಕ್ಷಿಣ ಕನ್ನಡದ ಮಾಣಿ ಬಳಿಯಲ್ಲೇ ವಾಹನಗಳಿಗೆ ತಡೆದು ಚಾರ್ಮಾಡಿ ಮಾರ್ಗವಾಗಿ ಹೋಗುವಂತೆ ಸೂಚನೆ ನೀಡಲಾಗುತ್ತಿದೆ. ರಸ್ತೆ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿರು ಕಾರಣ ವಾಹನ ಸವಾರರು ಪರದಾಡುವಂತಾಗಿದೆ, ಮಂಗಳೂರು ಕಡೆ ಹೋಗುವ ವಾಹನ ಸವಾರರ‌ ಪರದಾಡುವಂತಾಗಿದೆ.

Exit mobile version