Site icon Vistara News

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

Shootout Case

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Electric shock : ವಸತಿ ಶಾಲೆ ಆವರಣದಲ್ಲಿ ಕರೆಂಟ್‌ ಶಾಕ್‌ನಿಂದ ಬಾಲಕ ಸಾವು; 8 ಮಂದಿ ಅಮಾನತು

ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

murder case in Bengaluru rural

ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡದಲ್ಲಿ ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ (Murder Case) ನಡೆಸಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಗ್ರಾಮದ ಸಾಯಿ ಮೆಡೋಸ್ ಲೇಔಟ್‌ನಲ್ಲಿ ಘಟನೆ ನಡೆದಿದೆ. ಕೃಷ್ಣೋಜಿ ರಾವ್ (37) ಕೊಲೆಯಾದವನು.

ಶಿವಕುಮಾರ್, ರಾಜೇಶ್ವರಿ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಮದುವೆಯಾಗಿದ್ದ ರಾಜೇಶ್ವರಿ ಪತಿಯಿಂದ ದೂರಾಗಿದ್ದಳು. ಬಳಿಕ ಕೆಲ ವರ್ಷಗಳ ಹಿಂದೆ ಕೃಷ್ಣೋಜಿರಾವ್ ಜತೆ ರಾಜೇಶ್ವರಿ ಸಂಬಂಧ ಹೊಂದಿದ್ದಳು. ಇವರಿಬ್ಬರು ಗಂಡ-ಹೆಂಡತಿ ಎಂದು ಹೇಳಿಕೊಂಡು ಗಾರೆ ಕೆಲಸ ಮಾಡಿಕೊಂಡು ಒಟ್ಟಿಗೆ ವಾಸವಿದ್ದರು.

ಕೃಷ್ಣೋಜಿರಾವ್, ರಾಜೇಶ್ವರಿ ಮತ್ತು ಆಕೆಯ ಮಗ ಶಿವಕುಮಾರ್ ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದರು. ಇತ್ತೀಚೆಗೆ ಕೃಷ್ಣೋಜಿರಾವ್ ದಿನನಿತ್ಯ ಕುಡಿದು ಬಂದು ರಾಜೇಶ್ವರಿಗೆ ಹಲ್ಲೆ ಮಾಡುತ್ತಿದ್ದ. ಇದರಿಂದಾಗಿ ರಾಜೇಶ್ವರಿ ಹಾಗೂ ಆಕೆಯ ಮಗ ಶಿವಕುಮಾರ್‌ ಬೇಸತ್ತು ಹೋಗಿದ್ದರು.

ನಿನ್ನೆ ಭಾನುವಾರ ಸಂಜೆ ಕಂಠ ಪೂರ್ತಿ ಕುಡಿದು ಬಂದಿದ್ದ ಕೃಷ್ಣೋಜಿರಾವ್, ರಾಜೇಶ್ವರಿ ಜತೆಗೆ ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ರಾಜೇಶ್ವರಿ ಮಗ ಶಿವಕುಮಾರ್‌ ದೊಣ್ಣೆಯಿಂದ ಕೃಷ್ಣೋಜಿರಾವ್ ತಲೆಗೆ ಹೊಡೆದಿದ್ದ.

ಆಗ ಶಿವಕುಮಾರನ ತಾಯಿ ರಾಜೇಶ್ವರಿ ಅವನನ್ನು ಬಿಡಬೇಡ ಮುಗಿಸಿಬಿಡು ಎಂದು ಹೇಳಿದ್ದಾಳೆ. ಆಗ ಮತ್ತೆ ದೊಣ್ಣೆಯಿಂದ ಮುಖ ಹಾಗೂ ತಲೆಗೆ ಹೊಡೆದು ಕೊಂದು ಹಾಕಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Exit mobile version