ಹುಬ್ಬಳ್ಳಿ: ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದ ರಾಜ್ಯ ಸರ್ಕಾರ 100% ಭ್ರಷ್ಟಾಚಾರದ (Corruption) ಸರ್ಕಾರ. ಇಲ್ಲಿ ರಾಹುಲ್ ಗಾಂಧಿ (Rahul Gandhi) ಬೆಂಬಲದಿಂದಲೇ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ (Hubli) ಹೇಳಿಕೆ ನೀಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ (Valmiki Corporation Scam) ಮಾಜಿ ಸಚಿವ ನಾಗೇಂದ್ರ (B Nagendra) ಬಂಧನ ವಿಚಾರವನ್ನು ಪ್ರಸ್ತಾವಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ ಬೆಂಬಲದಿಂದ ಬಹುದೊಡ್ಡ ಭ್ರಷ್ಟಾಚಾರ ನಡೆಸಿದೆ. ತೆಲಂಗಾಣ ಚುನಾವಣೆ ಸಂದರ್ಭದಲ್ಲಿ ಕೋಟಿ ಕೋಟಿ ಹಣ ಸಂಗ್ರಹ ಮಾಡಿದ್ದರು. ಆ ಬಗ್ಗೆ ನಾನು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ನೂರಾರು ಜನರಿಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಇದು ಸಂಪೂರ್ಣವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ಗೆ ಗೊತ್ತಿದ್ದೇ ನಡೆದಿರುವ ಭ್ರಷ್ಟಾಚಾರ. ಇದು 100% ಭ್ರಷ್ಟಾಚಾರದ ಸರ್ಕಾರ. ಕೋಟಿಗಟ್ಟಲೇ ಹಣ ಗೋಣಿ ಚೀಲದಲ್ಲಿ ತುಂಬಿಟ್ಟಿದ್ದಾರೆ. ಭ್ರಷ್ಟಾಚಾರ ಹೊರಬಂದು 40 ದಿನಗಳಾದ್ರೂ ಸಹ ನಾಗೇಂದ್ರಗೆ ಯಾವುದೇ ನೋಟೀಸ್ ನೀಡಿಲ್ಲ. ಈಗ ಇಡಿ ಅಧಿಕಾರಿಗಳು ನಾಗೇಂದ್ರನನ್ನು ಬಂಧನ ಮಾಡಿದ ಕೂಡಲೇ ದದ್ದಲ್ ತನ್ನನ್ನು ಕಾಪಾಡುವಂತೆ ದುಂಬಾಲು ಬಿದ್ದಿದ್ದಾರೆ. ಇಡಿ ಅಧಿಕಾರಿಗಳಿಂದ ಬಂಧನವಾಗದಂತೆ ಎಸ್‌ಐಟಿ ಮುಂದೆ ಹೋಗುವ ನಾಟಕವಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಸಿದ್ದರಾಮಯ್ಯ ಸರ್ಕಾರ ಪರಮ ಭ್ರಷ್ಟ ಸರ್ಕಾರ. ಮೈಸೂರಿನ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರದ್ದೇ ನೇರ ಕೈವಾಡವಿದೆ. ಬಹಳ ವ್ಯವಸ್ಥಿತವಾಗಿ ಮುಡಾದಲ್ಲಿ ಬಹು ಬೆಲೆಬಾಳುವ ನಿವೇಶನ ಗುಳುಂ ಮಾಡಿದ್ದಾರೆ. ಬರೋಬ್ಬರಿ 14 ನಿವೇಶನಗಳನ್ನು ಗುಳುಂ ಮಾಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ ತನಿಖೆಯಾಗಬೇಕು. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜೋಶಿ ಗಂಭೀರ ಆರೋಪ ಮಾಡಿದರು.
Valmiki Corporation Scam: ಮಾಜಿ ಸಚಿವ ನಾಗೇಂದ್ರ 5 ದಿನಗಳ ಕಾಲ ಇಡಿ ಕಸ್ಟಡಿಗೆ
ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯಲಹಂಕದಲ್ಲಿ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು (ED Officers) ಇಂದು ಮುಂಜಾನೆ ಹಾಜರು ಪಡಿಸಿದ್ದರು. ವಾಲ್ಮೀಕಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮೊನ್ನೆಯಿಂದ ನಾಗೇಂದ್ರ ಇಡಿ ದಾಳಿಗೆ (ED Raid) ಒಳಗಾಗಿದ್ದಾರೆ.
ನಾಗೇಂದ್ರರನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು. 5 ದಿನಗಳ ಕಾಲ ಕಸ್ಟಡಿಗೆ ನೀಡಿದ ನ್ಯಾಯಾಧೀಶರು, 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿ ಆದೇಶಿಸಿದರು. ನ್ಯಾಯಾಧೀಶರ ಮುಂದೆ ತಮ್ಮ ಅನಾರೋಗ್ಯ ಸಮಸ್ಯೆಯನ್ನು ನಾಗೇಂದ್ರ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಎಂದರು. ಪ್ರತಿ ದಿನ ಮೂರು ಗಂಟೆ ವಿಚಾರಣೆ ನಡೆಸಬಹುದು, ವಿಚಾರಣೆ ಬಳಿಕ 30 ನಿಮಿಷಗಳ ಕಾಲ ರೆಸ್ಟ್ ನೀಡಬೇಕು ಹಾಗೂ ಪ್ರತಿ ದಿನ ವೈದ್ಯಕೀಯ ತಪಾಸಣೆ ಮಾಡುವಂತೆ ನ್ಯಾಯಧೀಶರು ಸೂಚಿಸಿದರು.
ಜಡ್ಜ್ ಮುಂದೆ ನಾಗೇಂದ್ರ ಹೇಳಿಕೆ ನೀಡಿದ್ದು, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ʼಇದು ಬೋರ್ಡ್ ಮಿಟೀಂಗ್ ಮೂಲಕ ಆಗಿರುವ ಹಣ ವರ್ಗಾವಣೆ. ನಾನು ಇಲಾಖೆ ಸಚಿವಾನಾಗಿದ್ದೆ ಅಷ್ಟೇ. ಅಕ್ರಮ ಹಣ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನನಗೆ ಮೆಡಿಕಲ್ ನೆರವು ಅವಶ್ಯಕತೆ ಇದೆʼ ಎಂದು ನಾಗೇಂದ್ರ ಮನವಿ ಮಾಡಿದರು. ಅಹವಾಲು ಹಿನ್ನೆಲೆಯಲ್ಲಿ, 24 ಗಂಟೆಗೊಮ್ಮೆ ಆರೋಗ್ಯ ತಪಾಸಣೆಗೆ ಕರೆದೊಯ್ಯುವಂತೆ ಇಡಿಗೆ ಸೂಚನೆ ನೀಡಲಾಯಿತು.
ʼನಾಗೇಂದ್ರರನ್ನು ಹೆಚ್ಚಿನ ವಿಚಾರಣೆ ಮಾಡಬೇಕು. ಬಹುಕೋಟಿ ಹಗರಣ ಆಗಿದೆ. ಹಣ ವರ್ಗಾವಣೆ ಮಾಹಿತಿ ಕಲೆ ಹಾಕಬೇಕಿದೆ. ಫಲಾನುಭವಿಗಳನ್ನು ಪತ್ತೆ ಹಚ್ಚಬೇಕಿದೆ. ಅವ್ಯವಹಾರ ಯಾವ ರೀತಿ ಆಗಿದೆ ಅನ್ನುವ ವಿಚಾರಣೆ ನಡೆಸಬೇಕಿದೆ. ಇಲಾಖೆಗೆ ಸಚಿವರಾಗಿದ್ದರಿಂದ ಹೆಚ್ಚಿನ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ಕಸ್ಟಡಿಗೆ ಕೊಡಬೇಕು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೇಳಿದ್ದರು.
ನಿನ್ನೆ ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅದಕ್ಕೂ ಮುನ್ನ ಸತತ 40 ಗಂಟೆಗಳ ಕಾಲ ನಾಗೇಂದ್ರ ಅವರ ಮನೆ ಹಾಗೂ ಕಚೇರಿಯನ್ನು ತಪಾಸಣೆ ನಡೆಸಲಾಗಿತ್ತು.
ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ದದ್ದಲ್ ಮಗನಿಗೂ ಇಡಿ ಉರುಳು?