ಶಿರಾ: ಬೀದಿನಾಯಿಗಳು ದಾಳಿ (Stray Dogs Attack) ನಡೆಸಿ, ನಾಲ್ಕು ಮಕ್ಕಳು ಹಾಗೂ ಒಬ್ಬ ಮಹಿಳೆಗೆ ಕಚ್ಚಿ ಗಾಯಗೊಳಿಸಿರುವ ಘಟನೆ ನಗರಸಭೆಯ 12ನೇ ವಾರ್ಡ್ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಕಚ್ಚಿ ಗಾಯಗೊಳಿಸಿವೆ. ಇದೇ ವೇಳೆ ಮಕ್ಕಳ ರಕ್ಷಣೆಗೆಂದು ಹೋದ ಮಹಿಳೆಯ ಮೇಲೂ ದಾಳಿ ನಡೆಸಿ, ಗಾಯಗೊಳಿಸಿವೆ.
ರಿಹಾನ್ (7), ತಾಸ್ಮಿಯ (13), ಜಿಯಾ ಉಲ್ಲಾಖಾನ್ (7), ಇಬದುಲ್ಲಾ ಖಾನ್ (1) ಹಾಗೂ ಶಾಹಿನ (45) ಅವರಿಗೆ ಗಾಯಗಳಾಗಿದ್ದು, ಶಿರಾ ನಗರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Bangalore Rain: ರಾಜಧಾನಿಯಲ್ಲಿ ಮಳೆ ಆರ್ಭಟ; ಬೆಂಗಳೂರು-ಹೊಸೂರು ಹೆದ್ದಾರಿ ಜಲಾವೃತ, ಮನೆಗಳಿಗೆ ನುಗ್ಗಿದ ನೀರು
ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ 4 ಮಕ್ಕಳು ಹಾಗೂ ಮಹಿಳೆಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Dinesh Karthik: ಜನ್ಮದಿನದಂದೇ ಕ್ರಿಕೆಟ್ ಬದುಕಿಗೆ ದಿನೇಶ್ ಕಾರ್ತಿಕ್ ಭಾವುಕ ವಿದಾಯ; ಕೊಡುಗೆ ನೆನೆದ ಆರ್‌ಸಿಬಿ ಫ್ಯಾನ್ಸ್
ಬೀದಿನಾಯಿಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಶಿರಾ ನಗರಸಭೆ ವ್ಯಾಪ್ತಿಯ 12ನೇ ವಾರ್ಡ್‌ನ ನಿವಾಸಿಗಳು, ನಗರಸಭೆಯ ಆಯುಕ್ತ ಕೆ. ರುದ್ರೇಶ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ನಗರಸಭೆಯ ಆಯುಕ್ತ ಕೆ. ರುದ್ರೇಶ್, ನಗರಸಭೆ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಎಬಿಸಿ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಭೆ ತೀರ್ಮಾನ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ತಡವಾಯಿತು. ಸದ್ಯದಲ್ಲೇ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದ ತಿಳಿಸಿದರು.