Site icon Vistara News

Student Death : ಮೈಸೂರಿನ ಕಾಲೇಜಿನ ಹಾಸ್ಟೆಲ್‌‌ನಲ್ಲಿ 17 ವರ್ಷದ ವಿದ್ಯಾರ್ಥಿನಿ ಅನಾರೋಗ್ಯದಿಂದ ಸಾವು

Student Death

ಮೈಸೂರು: ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಏಕಾಏಕಿ ಅನಾರೋಗ್ಯ ಉಂಟಾಗಿದ್ದ ಕಾರಣ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.

ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನವರಾಗಿದ್ದಾರೆ. ಭಾನುವಾರ ಊಟದ ನಂತರ ಜಯಪ್ರಾರ್ಥನಾ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿತ್ತು.

ಸೋಮವಾರ ಬೆಳಗ್ಗೆ ಜಯಪ್ರಾರ್ಥನಾಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿತ್ತು. ಆ ಸಮಯದಲ್ಲಿ ವಿಷಯವನ್ನು ಪೊಷಕರಿಗೆ ತಿಳಿಸಿದ್ದಾರೆ. ಆದರೆ, ಪೋಷಕರು ಆಸ್ಪತ್ರೆಗೆ ಬರುವ ಮುನ್ನವೇ ಜಯಪ್ರಾರ್ಥನಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Murder Case : ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ (Murder Case) ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿಯಾಗಿದ್ದು, ಕೆಲಸದ ನಿಮಿತ್ತವಾಗಿ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್‌ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್‌ ನಾಯಕಿ!

ಮೋಹನ್ ಅವರು ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳ ಪರಾರಿಯಾಗಿದ್ದರು. ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಮೋಹನ್ ಅವರನ್ನು ಬೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಗಾರಕಕ್ಕೆ ಮೃತದೇಹ ರವಾನೆ ಮಾಡಲಾಗಿದೆ.

ಮೋಹನ್ ಅವರ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ‌. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version