ನವದೆಹಲಿ: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ಭಾನುವಾರ ನಡೆದ ರಾಜಕೀಯ ಪಕ್ಷದ ಸಭೆಯಲ್ಲಿ (Political Meet) ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ (Suicide Blast) ಕನಿಷ್ಠ 44 ಜನರು ಮೃತಪಟ್ಟಿದ್ದಾರೆ(People Dead). 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸುದ್ದಿವಾಹಿನಿ ಜಿಯೋ ನ್ಯೂಸ್ ವರದಿ ಮಾಡಿದೆ. ಈ ಸ್ಫೋಟದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದನ್ನು ಕಾಣಬಹುದಾಗಿದೆ. ರಾಜಕೀಯ ಪಕ್ಷವೊಂದರ ಸಮಾವೇಶ ನಡೆದಿತ್ತು. ಈ ವೇಳೆ, ಆತ್ಮಹತ್ಯಾ ಬಾಂಬ್ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.
ಈ ಭಯಂಕರ ದಾಳಿಯ ಹೊಣೆಯನ್ನು ಈವರೆಗೂ ಯಾವುದೇ ಗುಂಪು ವಹಿಸಿಕೊಂಡಿಲ್ಲ. ಆದರೆ, ಇತ್ತೀಚೆಗೆ ಜೆಯುಐ-ಎಫ್ ವಿರುದ್ದ ದಾಳಿ ನಡೆಸಿದ ಇಸ್ಲಾಮಿಕ್ ಸ್ಟೇಟ್(ಐಎಸ್) ಉಗ್ರ ಸಂಘಟನೆಯ ಸ್ಥಳೀಯ ಗುಂಪು ಈ ಕೃತ್ಯವನ್ನು ಎಸಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಜೆಯುಐ-ಎಫ್ ಇಸ್ಲಾಮಿಕ್ ಗುಂಪಾಗಿದ್ದೂ, ವಿರೋಧಿ ಸರ್ಕಾರ ಹಾಗೂ ಸೇನೆಯನ್ನು ಬೆಂಬಲಿಸುತ್ತಿದೆ ಎಂದು ಜೆಹಾದಿ ಗುಂಪುಗಳು ಆರೋಪಿಸುತ್ತಿವೆ.
ಈ ಸುದ್ದಿಯನ್ನೂ ಓದಿ: Sunny Leone: ನಟಿ ಸನ್ನಿ ಲಿಯೋನ್ ಭಾಗವಹಿಸಲಿದ್ದ ಫ್ಯಾಶನ್ ಶೋ ಸ್ಥಳದ ಬಳಿಯೇ ಪ್ರಬಲ ಬಾಂಬ್ ಸ್ಫೋಟ
ಕೆಲವು ವರದಿಗಳ ಪ್ರಕಾರ ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸಂಜೆ 4 ಗಂಟೆಗೆ ಸ್ಫೋಟ ಸಂಭವಿಸಿದೆ. ಈ ಸಮಾವೇಶದಲ್ಲಿ ಪಕ್ಷದ ಸುಮಾರು 400ಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಆರೈಕೆಗಾಗಿ ಪ್ರಾಂತೀಯ ರಾಜಧಾನಿ ಪೇಶಾವರಕ್ಕೆ ವಿಮಾನದಲ್ಲಿ ಸಾಗಿಸಲಾಗುತ್ತಿದೆ ಎಂದು ಸರ್ಕಾರಿ ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.