Site icon Vistara News

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

Sunil Narine

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ, ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಲ್​ರೌಂಡರ್​ ಸುನಿಲ್ ನರೈನ್ (Sunil Narine) ಶೇನ್ ವ್ಯಾಟ್ಸನ್ ಮತ್ತು ಜಾಕ್ ಕಾಲಿಸ್ ನಂತರ ಒಂದೇ ಋತುವಿನಲ್ಲಿ 400 ರನ್ ಮತ್ತು 15 ವಿಕೆಟ್ ಪಡೆದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈಡನ್ ಗಾರ್ಡನ್ಸ್​ ಸ್ಟೇಡಿಯಮ್​ನಲ್ಲಿ ಶನಿವಾರ ನಡೆದ ಐಪಿಎಲ್ 2024 ರ ಮುಖಾಮುಖಿಯಲ್ಲಿ ಕೆಕೆಆರ್ ಸ್ಪಿನ್ನರ್​​​ಗಳು ಅದ್ಭುತ ಪ್ರಯತ್ನ ನಡೆಸಿದರು ಈ ವೇಳೆ ಸುನೀಲ್​ ನರೈನ್ ಅಮೋಘ ಸಾಧನೆ ಮಾಡಿದರು.

ಮುಂಬೈ ಇಂಡಿಯನ್ಸ್ 158 ರನ್​​ಗಳ ರನ್ ಚೇಸ್ ಮಾಡಲು ಮುಂದಾದಾಗ ನರೈನ್ ಸೇರದಂತೆ ಸ್ಪಿನ್ನರ್​ಗಳು ಹಳಿ ತಪ್ಪಿಸಿದರು. ಅವರನ್ನು 16 ಓವರ್ಗಳಲ್ಲಿ 139/8 ಕ್ಕೆ ಸೀಮಿತಗೊಳಿಸಿದರು. ಮತ್ತು ಎರಡು ಬಾರಿಯ ಚಾಂಪಿಯನ್ಸ್ ಕೆಕೆಆರ್​ ಪ್ಲೇಆಫ್ ತಲುಪಿದ ಮೊದಲ ತಂಡವಾಯಿತು.

ಈ ಮೊದಲು ಮಳೆಯಿಂದ ಪಂದ್ಯವನ್ನು 16 ಓವರ್​ಗಳ ಪಂದ್ಯವನ್ನಾಗಿ ಮಾಡಲು ನಿರ್ಧರಿಸಲಾಗಿತ್ತು. ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ವಿರುದ್ಧ ನರೈನ್ ತಮ್ಮ ಮೂರು ಓವರ್​ಗಳಲ್ಲಿ ಒಂದು ವಿಕೆಟ್ ಪಡೆದರು. ಪವರ್​​ಪ್ಲೇನಲ್ಲಿ ಆರಂಭಿಕ ಆಟಗಾರ ಇಶಾನ್ ಕಿಶನ್ ಅವರ ವಿಕೆಟ್ ಪಡೆದ ನಂತರ, ಸ್ಪಿನ್ನರ್ ಐಪಿಎಲ್ ಇತಿಹಾಸದಲ್ಲಿ 400 ರನ್ ಮತ್ತು 15 ವಿಕೆಟ್ ಪಡೆದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸಕ್ತ ಋತುವಿನಲ್ಲಿ ನರೈನ್ 461 ರನ್ ಮತ್ತು 15 ವಿಕೆಟ್ ಪಡೆದಿದ್ದಾರೆ.

ಐಪಿಎಲ್ 2008ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವಾಟ್ಸನ್ (472 ರನ್, 17 ವಿಕೆಟ್) ಹಾಗೂ 2012ರ ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರ ಕಾಲಿಸ್ (409 ರನ್, 15 ವಿಕೆಟ್) ಈ ಸಾಧನೆ ಮಾಡಿದ್ದಾರೆ.

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

ಇಲ್ಲಿನ ಈಡನ್ ಗಾರ್ಡನ್ಸ್​ನಲ್ಲಿ ಮೇ 11 ರಂದು ನಡೆದ ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್​ಗಳ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ರಮಣ್​ದೀಪ್​ ಸಿಂಗ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಪ್ರಕಾರ ರಮಣ್​​ದೀಪ್​ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ. ಈ ಅಪರಾಧಕ್ಕಾಗಿ ಕೆಕೆಆರ್ ಬ್ಯಾಟರ್​ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದೆ.

27 ವರ್ಷದ ಆಟಗಾರ ಅಪರಾಧ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ತೆಗೆದುಕೊಂಡ ನಿರ್ಧಾರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ.

Exit mobile version