ನವದೆಹಲಿ: ರಾಜಕೀಯ ಪಕ್ಷಗಳಿಗೆ (Lok Sabha Election) ಅನಾಮಧೇಯವಾಗಿ ದೇಣಿಗೆ ನೀಡಲು ವ್ಯಕ್ತಿಗಳು ಮತ್ತು ಉದ್ಯಮಗಳಿಗೆ ಅವಕಾಶ ನೀಡುವ ಚುನಾವಣಾ ಬಾಂಡ್‌ಗಳ (Electoral Bond) ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸರ್ವೋಚ್ಛ ನ್ಯಾಯಾಲಯವು ಈ ಯೋಜನೆಯನ್ನು ಕೆಲವು ದಿನಗಳ ಹಿಂದೆ ರದ್ದುಗೊಳಿಸಿತ್ತು. ಕಳೆದ 5 ವರ್ಷಗಳಲ್ಲಿ ಮಾಡಿದ ದೇಣಿಗೆಗಳ ಬಗ್ಗೆ ಎಲ್ಲಾ ವಿವರಗಳನ್ನು ಹಂಚಿಕೊಳ್ಳುವಂತೆ ಬ್ಯಾಂಕಿಗೆ ನಿರ್ದೇಶನ ನೀಡಿತ್ತು.
The Supreme Court on Friday (March 15) categorically stated that the State Bank of India (SBI) has to disclose electoral bonds numbers as well, in addition to the details it has already disclosed regarding the purchase and redemption of the bonds.
— Live Law (@LiveLawIndia) March 15, 2024
Read more:… pic.twitter.com/xALHQeZelu
ಚುನಾವಣಾ ಆಯೋಗದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್, ಸುಪ್ರೀಂ ಕೋರ್ಟ್ ಒದಗಿಸಿದ ದತ್ತಾಂಶವು ಅಪೂರ್ಣವಾಗಿದೆ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆ ಸೇರಿದಂತೆ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ಎಸ್ಬಿಐಗೆ ನಿರ್ದೇಶನ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಇದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಲೇಬೇಖು ” ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ವಿಚಾರಣೆಯ ಆರಂಭದಲ್ಲಿ ಹೇಳಿದರು.
ಇದನ್ನೂ ಓದಿ: Electoral Bonds: ಚುನಾವಣಾ ಬಾಂಡ್ ಗಳಿಕೆಯಲ್ಲಿ ಕಾಂಗ್ರೆಸ್ ಅನ್ನೂ ಹಿಂದಿಕ್ಕಿದ ಟಿಎಂಸಿ! ಬಿಜೆಪಿ ಪಡೆದದ್ದೆಷ್ಟು?
ಚುನಾವಣಾ ಬಾಂಡ್ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ.
ಚುನಾವಣಾ ಬಾಂಡ್‌ಗಳ ವಿವರ ಬಹಿರಂಗಪಡಿಸಿದ ಆಯೋಗ; ಡೇಟಾದಲ್ಲಿ ಏನೇನಿದೆ?
ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ಭಾರತದ ಚುನಾವಣಾ ಆಯೋಗ (Election Commission of India)ವು ಗುರುವಾರ ಎಸ್‌ಬಿಐನಿಂದ ಪಡೆದ ಚುನಾವಣಾ ಬಾಂಡ್ (Electoral Bond)ಗಳ ಮಾಹಿತಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ (ಮಾರ್ಚ್ 15) ಸಂಜೆ 5 ಗಂಟೆಯೊಳಗೆ ಚುನಾವಣಾ ಆಯೋಗವು ಮಾಹಿತಿಗಳನ್ನು ಪ್ರಕಟಿಸಬೇಕಿತ್ತು. ಆದರೆ ಅದಕ್ಕಿಂತಲೇ ಮೊದಲೇ ವಿವರಗಳನ್ನು ಬಹಿರಂಗಪಡಿಸಿದೆ.
ಚುನಾವಣಾ ಆಯೋಗವು ಎಸ್‌ಬಿಐ ಸಲ್ಲಿಸಿದ ಚುನಾವಣಾ ಬಾಂಡ್‌ಗಳ ಡೇಟಾವನ್ನು ಎರಡು ಭಾಗಗಳಲ್ಲಿ ಬಹಿರಂಗಪಡಿಸಿದೆ. ಮೊದಲ ಭಾಗದಲ್ಲಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಘಟಕಗಳ ವಿವರವನ್ನು ನೀಡಲಾಗಿದೆ. ಇನ್ನು ಎರಡನೇ ಭಾಗದಲ್ಲಿ ರಾಜಕೀಯ ಪಕ್ಷಗಳ ವಿವರವನ್ನು ಒದಗಿಸಲಾಗಿದೆ.
ವೇದಾಂತ, ಸನ್ ಫಾರ್ಮಾ, ಬಜಾಜ್ ಆಟೋ, ಗ್ರಾಸಿಮ್ ಇಂಡಸ್ಟ್ರೀಸ್, ಮೇಘಾ ಎಂಜಿನಿಯರಿಂಗ್, ಪಿರಮಾಲ್ ಎಂಟರ್ಪ್ರೈಸಸ್, ಟೊರೆಂಟ್ ಪವರ್, ಭಾರ್ತಿ ಏರ್‌ಟೆಲ್, ಡಿಎಲ್ಎಫ್ ಕಮರ್ಷಿಯಲ್ ಡೆವಲಪರ್ಸ್, ವೇದಾಂತ ಲಿಮಿಟೆಡ್, ಅಪೊಲೊ ಟೈಯರ್ಸ್, ಲಕ್ಷ್ಮಿ ಮಿತ್ತಲ್, ಎಡೆಲ್ವೀಸ್, ಪಿವಿಆರ್, ಕೆವೆಂಟರ್, ಸುಲಾ ವೈನ್ ಮತ್ತು ವೆಲ್‌ಸ್ಪನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಪ್ರಮುಖ ಕಂಪೆನಿಗಳು ಎಂದು ಡೇಟಾ ತಿಳಿಸಿದೆ.
ಯಾವೆಲ್ಲ ಪಕ್ಷಗಳಿಗೆ ದೇಣಿಗೆ?
ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ, ಬಿಆರ್‌ಎಸ್, ಶಿವಸೇನೆ, ಟಿಡಿಪಿ, ವೈಎಸ್ಆರ್ ಕಾಂಗ್ರೆಸ್, ಡಿಎಂಕೆ, ಜೆಡಿಎಸ್, ಎನ್‌ಸಿಪಿ, ತೃಣಮೂಲ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎಎಪಿ ಮತ್ತು ಸಮಾಜವಾದಿ ಪಕ್ಷವು ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸಿದೆ.
ನ್ಯಾಯಾಲಯದ ನಿರ್ದೇಶನದ ಪ್ರಕಾರ ಮಾರ್ಚ್ 12ರಂದು ವ್ಯವಹಾರ ಸಮಯ ಮುಗಿಯುವ ಮೊದಲು ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಲಭ್ಯವಾಗುವಂತೆ ಮಾಡಿತ್ತು. 2019ರ ಏಪ್ರಿಲ್ 1ರಿಂದ ಈ ವರ್ಷದ ಫೆಬ್ರವರಿ 15ರ ನಡುವೆ ಒಟ್ಟು 22,217 ಚುನಾವಣಾ ಬಾಂಡ್‌ಗಳನ್ನು ರಾಜಕೀಯ ಪಕ್ಷಗಳು ಖರೀದಿಸಿವೆ ಮತ್ತು 22,030 ಅನ್ನು ರಿಡೀಮ್ ಮಾಡಿವೆ ಎಂದು ಎಸ್‌ಬಿಐ ಅಫಿಡವಿಟ್‌ನಲ್ಲಿ ತಿಳಿಸಿತ್ತು. ಪ್ರತಿ ಚುನಾವಣಾ ಬಾಂಡ್ ಖರೀದಿಸಿದ ದಿನಾಂಕ, ಖರೀದಿದಾರರ ಹೆಸರು ಮತ್ತು ಖರೀದಿಸಿದ ಬಾಂಡ್‌ಗಳ ಮೌಲ್ಯ ಸೇರಿದಂತೆ ಎಲ್ಲ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸಲಾಗಿದೆ ಎಂದು ಬ್ಯಾಂಕ್ ಸುಪ್ರೀಂ ಕೋಟ್‌ಗೆ ಮಾಹಿತಿ ನೀಡಿತ್ತು.
ಫೆಬ್ರವರಿ 15ರಂದು ನೀಡಿದ ಐತಿಹಾಸಿಕ ತೀರ್ಪಿನಲ್ಲಿ, ಐದು ನ್ಯಾಯಾಧೀಶರ ಸಂವಿಧಾನ ಪೀಠವು ಅನಾಮಧೇಯ ರಾಜಕೀಯ ಧನಸಹಾಯವನ್ನು ಅನುಮತಿಸುವ ಕೇಂದ್ರದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು. ಇದನ್ನು “ಅಸಂವಿಧಾನಿಕ” ಎಂದು ಕರೆದಿತ್ತು ಮತ್ತು ದಾನಿಗಳು ಮತ್ತು ಸ್ವೀಕರಿಸುವವರ ಮೊತ್ತವನ್ನು ಮಾರ್ಚ್ 13ರೊಳಗೆ ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು. ಎರಡು ವಿಭಾಗಗಳಲ್ಲಿ ಎಸ್‌ಬಿಐ ಮಾಹಿತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಒಂದು ವಿಭಾಗದಲ್ಲಿ, ಚುನಾವಣೆ ಬಾಂಡ್‌ಗಳನ್ನು ಖರೀದಿಸಿ ದೇಣಿಗೆ ನೀಡಿದವರ ಮಾಹಿತಿ, ಹೆಸರು, ಅವರು ನೀಡಿದ ಮೊತ್ತದ ದಾಖಲೆ ಇರಬೇಕು. ಇನ್ನು, ಎರಡನೇ ಭಾಗದಲ್ಲಿ ರಾಜಕೀಯ ಪಕ್ಷಗಳು ಬಾಂಡ್‌ಗಳ ಮೂಲಕ ದೇಣಿಗೆಯನ್ನು ನಗದೀಕರಣ ಮಾಡಿಕೊಂಡಿರುವ ಕುರಿತು ಮಾಹಿತಿ ಇರಬೇಕು ಎಂದು ಸೂಚಿಸಿತ್ತು.