ನವದೆಹಲಿ: “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು” (Sanatana Dharma) ಎಂಬ ತಮಿಳುನಾಡು ಸಚಿವ (Tamilnadu Minister) ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ವಿವಾದಾತ್ಮಕ ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ಆಕ್ಷೇಪ ವ್ಯಕ್ತಪಡಿಸಿದೆ. ಡಿಎಂಕೆ ನಾಯಕನನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, ಸಚಿವರಾಗಿ ಅವರು ತಮ್ಮ ಹೇಳಿಕೆಗಳ ಬಗ್ಗೆ ಜಾಗರೂಕರಾಗಿರಬೇಕು ಹಾಗೂ ಹೇಳಿಕೆಗಳ ಪರಿಣಾಮಗಳ ಬಗ್ಗೆಯೂ ಅವರು ತಿಳಿದಿರಬೇಕು ಎಂದು ಅಭಿಪ್ರಾಯಪಟ್ಟಿದೆ.
Supreme Court questions Tamil Nadu minister Udhayanidhi Stalin over his remarks about 'Sanatana Dharma'.
— ANI (@ANI) March 4, 2024
"You are not a layman. You are a minister. You should know the consequences," Supreme Court tells Stalin‘s lawyer, who moved apex court seeking clubbing of multiple FIRs… pic.twitter.com/dQExYzdyEU
ನೀವು ಜನಸಾಮಾನ್ಯರೇನೂ ಅಲ್ಲ. ನೀವು ರಾಜ್ಯವೊಂದರಲ್ಲಿ ಮಂತ್ರಿಯಾಗಿದ್ದೀರಿ. ಹೀಗಾಗಿ ಹೇಳಿಕೆಗಳನ್ನು ನೀಡುವಾಗ ಅದರ ಪರಿಣಾಮಗಳನ್ನು ತಿಳಿದುಕೊಳ್ಳಬೇಕು” ಎಂದು ಸ್ಟಾಲಿನ್ ಅವರ ವಕೀಲರಿಗೆ ಸುಪ್ರೀಂ ಕೋರ್ಟ್ ಹೇಳಿದೆ, ಅವರು ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ಹಲವಾರು ರಾಜ್ಯಗಳಲ್ಲಿ ಅವರ ವಿರುದ್ಧ ದಾಖಲಾದ ಅನೇಕ ಎಫ್ಐಆರ್ಗಳನ್ನು ಒಟ್ಟುಗೂಡಿಸುವಂತೆ ಕೋರಿ ಉದಯನಿಧಿ ಸ್ಟಾಲಿನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ವೇಳೆ ಕೋರ್ಟ್ ಸ್ಟಾಲಿನ್ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿದೆ.
ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 15ಕ್ಕೆ ಮುಂದೂಡಿದೆ.
ಸ್ವಾಗತಂ; ಸುಪ್ರೀಂ ಕೋರ್ಟ್ ಯಾವ ತೀರ್ಪಿಗೆ ಮೋದಿ ಹೀಗೆ ಹೇಳಿದ್ದು?
ನವದೆಹಲಿ: ವಿಧಾನಸಭೆ ಅಥವಾ ಸಂಸತ್ನಲ್ಲಿ ಭಾಷಣ ಮಾಡಲು ಅಥವಾ ಮತ ಚಲಾಯಿಸಲು ಲಂಚ ಪಡೆದ ಸಂಸದರು (Vote for bribe) ಮತ್ತು ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠವು 1998 ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಐದು ನ್ಯಾಯಾಧೀಶರ ಪೀಠವು ನೀಡಿದ ತೀರ್ಪನ್ನು ಸರ್ವಾನುಮತದಿಂದ ರದ್ದುಗೊಳಿಸಿತು. ಹಳೆ ತೀರ್ಪಿನಲ್ಲಿ ಸಂಸದರು ಮತ್ತು ಶಾಸಕರಿಗೆ ಶಾಸಕಾಂಗದಲ್ಲಿ ಭಾಷಣ ಮಾಡಲು ಅಥವಾ ಮತ ಚಲಾಯಿಸಲು ಲಂಚ ತೆಗೆದುಕೊಂಡಿದ್ದಕ್ಕಾಗಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.
ಇದನ್ನೂ ಓದಿ: ಇದನ್ನೂ ಓದಿ : ಕೊನೆಗೂ ಇ.ಡಿ ವಿಚಾರಣೆಗೆ ಒಪ್ಪಿದ ದೆಹಲಿ ಸಿಎಂ ಕೇಜ್ರಿವಾಲ್; ಕಂಡೀಷನ್ಸ್ ಅಪ್ಲೈ!
“ಸ್ವಾಗತಂ. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ಉತ್ತಮ ತೀರ್ಪು ನೀಡಿದೆ. ಇದು ಶುದ್ಧ ರಾಜಕೀಯಕ್ಕೆ ಖಾತರಿ ನೀಡುತ್ತದೆ. ವ್ಯವಸ್ಥೆ ಕುರಿತ ಜನರ ನಂಬಿಕೆಯನ್ನು ದೃಢಪಡಿಸುತ್ತದೆ ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಲಂಚ ಪಡೆಯುವುದನ್ನು ಸಂಸದೀಯ ಅಧಿಕಾರದಿಂದ ರಕ್ಷಿಸಲಾಗುವುದಿಲ್ಲ ಮತ್ತು 1998 ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ : ಕೊನೆಗೂ ಇ.ಡಿ ವಿಚಾರಣೆಗೆ ಒಪ್ಪಿದ ದೆಹಲಿ ಸಿಎಂ ಕೇಜ್ರಿವಾಲ್; ಕಂಡೀಷನ್ಸ್ ಅಪ್ಲೈ!
ಸಂವಿಧಾನದ 105 ಮತ್ತು 194ನೇ ವಿಧಿಯು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಸಂಸದರು ಮತ್ತು ಶಾಸಕರ ಅಧಿಕಾರಗಳು ಮತ್ತು ಸವಲತ್ತುಗಳಿಗೆ ಸಂಬಂಧಿಸಿದ್ದಾಗಿದೆ.