Madrasa: ಉತ್ತರ ಪ್ರದೇಶದಲ್ಲಿ ಮದರಸಾ ಶಿಕ್ಷಣ ರದ್ದುಪಡಿಸುವ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ - Vistara News

ಪ್ರಮುಖ ಸುದ್ದಿ

Madrasa: ಉತ್ತರ ಪ್ರದೇಶದಲ್ಲಿ ಮದರಸಾ ಶಿಕ್ಷಣ ರದ್ದುಪಡಿಸುವ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Madrasa: ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸಿದ್ದಕ್ಕಾಗಿ 2004ರ ಕಾನೂನನ್ನು “ಅಸಾಂವಿಧಾನಿಕ” ಎಂದು ಕಳೆದ ತಿಂಗಳು ಹೈಕೋರ್ಟ್ ಘೋಷಿಸಿತ್ತು

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯಿದೆ- 2004 (UP Board of Madrasa Education Act, 2004) ಅನ್ನು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ (Allahabad High Court) ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಇಂದು ತಡೆಯಾಜ್ಞೆ ನೀಡಿದೆ. ಇದು ರಾಜ್ಯದಲ್ಲಿ ಸುಮಾರು 16,000 ಮದರಸಾಗಳು ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಉತ್ತರ ಪ್ರದೇಶದ ಸುಮಾರು 17 ಲಕ್ಷ ಮದರಸಾ ವಿದ್ಯಾರ್ಥಿಗಳು ಇದರಿಂದ ನಿಟ್ಟುಸಿರು ಬಿಡುವಂತಾಗಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಪೀಠವು, ಹೈಕೋರ್ಟ್ ತೀರ್ಪು ಮೂಲಭೂತವಾಗಿ ತಪ್ಪು ಎಂದು ಹೇಳಿದೆ. ಯುಪಿ ಮತ್ತು ಕೇಂದ್ರ ಸರ್ಕಾರಗಳು ಮತ್ತು ಮದರಸಾ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸಿದ್ದಕ್ಕಾಗಿ 2004ರ ಕಾನೂನನ್ನು “ಅಸಾಂವಿಧಾನಿಕ” ಎಂದು ಕಳೆದ ತಿಂಗಳು ಹೈಕೋರ್ಟ್ ಘೋಷಿಸಿತ್ತು ಮತ್ತು ಔಪಚಾರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಮದ್ರಸಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಮದರಸಾ ಮಂಡಳಿಯ ಗುರಿಗಳು ಮತ್ತು ಉದ್ದೇಶಗಳು ನಿಯಂತ್ರಕ ಸ್ವರೂಪದ್ದಾಗಿದ್ದು, ಮಂಡಳಿಯ ಸ್ಥಾಪನೆಯು ಜಾತ್ಯತೀತತೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. “ಹೈಕೋರ್ಟ್, ಕಾಯಿದೆಯ ನಿಬಂಧನೆಗಳನ್ನು ರದ್ದುಪಡಿಸಿ, ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ನಿರ್ದೇಶನ ನೀಡಿದೆ. ಇದು 17 ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿರ್ದೇಶನವನ್ನು ಸಮರ್ಥಿಸಲಾಗುವುದಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಪಿಐಎಲ್‌ನ ಉದ್ದೇಶವು ಮದರಸಾಗಳು ಗಣಿತ, ವಿಜ್ಞಾನ, ಇತಿಹಾಸ ಮತ್ತು ಭಾಷೆಗಳಂತಹ ಪ್ರಮುಖ ವಿಷಯಗಳಲ್ಲಿ ಜಾತ್ಯತೀತ ಶಿಕ್ಷಣವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಆಗಿದ್ದರೆ, ಮದರಸಾ ಕಾಯಿದೆ 2004ರ ನಿಬಂಧನೆಗಳನ್ನು ರದ್ದುಗೊಳಿಸುವುದು ಅದಕ್ಕೆ ಪರಿಹಾರವಲ್ಲ ಎಂದು ಕೋರ್ಟ್‌ ಹೇಳಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್ ತೀರ್ಪನ್ನು ಬೆಂಬಲಿಸಿದವು. ಧರ್ಮ ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚೆಯಾಗಬೇಕು ಎಂದು ಕೇಂದ್ರ ಹೇಳಿದೆ. ಮುಖ್ಯ ನ್ಯಾಯಮೂರ್ತಿಗಳು ಜುಲೈ ಎರಡನೇ ವಾರದಲ್ಲಿ ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿದರು.

ಮದರಸಾಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಧಾರ್ಮಿಕ ಶಿಕ್ಷಣ ಎಂದರೆ ಧಾರ್ಮಿಕ ನಿಯಮಗಳ ಹೇರಿಕೆ ಎಂದು ಅರ್ಥವಲ್ಲ. ಹೈಕೋರ್ಟ್ ಆದೇಶದಿಂದ 10,000 ಮದರಸಾ ಶಿಕ್ಷಕರು ಮತ್ತು 17 ಲಕ್ಷ ವಿದ್ಯಾರ್ಥಿಗಳು ನೆಲೆ ಕಳೆದುಕೊಳ್ಳುತ್ತಾರೆ. ಮದ್ರಸಾ ಶಿಕ್ಷಣವು ಗುಣಮಟ್ಟವನ್ನು ಹೊಂದಿಲ್ಲ ಎಂದು ಹೇಳುವುದು ತಪ್ಪು ಎಂದು ವಾದಿಸಿದರು.

ಇದನ್ನೂ ಓದಿ: Baba Ramdev: ಸುಪ್ರೀಂ ಕೋರ್ಟ್‌ ತಪರಾಕಿ, ಬಾಬಾ ರಾಮದೇವ್‌ ಬೇಷರತ್‌ ಕ್ಷಮೆಯಾಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Hassan pen drive case: ಇದುವರೆಗೆ ಕ್ರಮ ಕೈಗೊಳ್ಳದಿರುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೂಡ ಗೃಹ ಸಚಿವರು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. “ಚುನಾವಣೆಯ ಸಂದರ್ಭದಲ್ಲಿಯೇ ಈ ವಿಡಿಯೋ ಯಾಕೆ ಹರಿದಾಡಬೇಕು? ಈ ಸಮಯಸಾಧಕತನ ಸಂಶಯ ಮೂಡಿಸುತ್ತಿದೆ” ಎಂದವರು ಹೇಳಿದ್ದಾರೆ.

VISTARANEWS.COM


on

amith shah
Koo

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (JDS MP Prajwal Revanna) ಅವರ ಅಶ್ಲೀಲ ಟೇಪ್ ವಿವಾದಕ್ಕೆ (Hassan pen drive case) ಕೇಂದ್ರ ಗೃಹ ಸಚಿವ ಅಮಿತ್ ಶಾ (Home minister Amit Shah) ಅವರು ಮಂಗಳವಾರ ಪ್ರತಿಕ್ರಿಯಿಸಿದ್ದು, “ಇದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಹಾಗೆಯೇ ಈ ಪ್ರಕರಣದಲ್ಲಿ ರಾಜಕೀಯ ಕೈವಾಡದ ಬಗೆಗೂ ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

“ಇದನ್ನು ಸಹಿಸಲು ಸಾಧ್ಯವಿಲ್ಲ. ಬಿಜೆಪಿಯ ನಿಲುವು ಈ ವಿಚಾರದಲ್ಲಿ ಸ್ಪಷ್ಟವಾಗಿದೆ- ನಾವು ನಾರಿ ಶಕ್ತಿಯೊಂದಿಗೆ ನಿಲ್ಲುತ್ತೇವೆ” ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ಇದುವರೆಗೆ ಕ್ರಮ ಕೈಗೊಳ್ಳದಿರುವ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಕೂಡ ಗೃಹ ಸಚಿವರು ಮತ್ತಷ್ಟು ತರಾಟೆಗೆ ತೆಗೆದುಕೊಂಡರು. “ಚುನಾವಣೆಯ ಸಂದರ್ಭದಲ್ಲಿಯೇ ಈ ವಿಡಿಯೋ ಯಾಕೆ ಹರಿದಾಡಬೇಕು? ಈ ಸಮಯಸಾಧಕತನ ಸಂಶಯ ಮೂಡಿಸುತ್ತಿದೆ” ಎಂದವರು ಹೇಳಿದ್ದಾರೆ.

ಹಾಸನ ಸಂಸದರು ಭಾಗಿಯಾಗಿದ್ದಾರೆ ಎಂದು ಹೇಳಲಾದ ಸ್ಪಷ್ಟ ವೀಡಿಯೊಗಳು ಸೋರಿಕೆಯಾದ ಸಮಯದ ಬಗ್ಗೆಯೂ ಷಾ ಪ್ರಶ್ನೆಗಳನ್ನು ಎತ್ತಿದ್ದಾರೆ. ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಕೆಲವು ಸರ್ಕಾರಿ ನೌಕರರು ಸೇರಿದಂತೆ ಹಲವು ಮಹಿಳೆಯರೊಂದಿಗೆ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎನ್ನಲಾದ ವೀಡಿಯೋ ತುಣುಕುಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತ್ತು. ಅದನ್ನನುಸರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ ರಚಿಸಿದ್ದಾರೆ.

ಏಪ್ರಿಲ್ 26ರಂದು ಹಾಸನ ಕ್ಷೇತ್ರದಲ್ಲಿ ಮತದಾನ ನಡೆದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ. ರಾಜ್ಯದಲ್ಲಿ ಜೆಡಿಎಸ್‌, ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ. 33 ವರ್ಷದ ಪ್ರಜ್ವಲ್ ಅವರು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧವೂ ದೂರು ದಾಖಲಾಗಿದೆ.

ಸಿದ್ದರಾಮಯ್ಯ ಅವರು ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೀಡಿ ಆದೇಶಿಸಿದ್ದಾರೆ. ಲೈಂಗಿಕ ಅಪರಾಧ ಎಸಗಿದವರನ್ನು, ಅದನ್ನು ಚಿತ್ರೀಕರಿಸಿ ಸಾರ್ವಜನಿಕಗೊಳಿಸಿದವರನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಎಸ್‌ಐಟಿಯ ಸರ್ಕಾರಿ ಆದೇಶ ತಿಳಿಸಿದೆ. ಈಗಾಗಲೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ), 354 (ಡಿ) (ಹಿಂಬಾಲಿಸುವಿಕೆ) ಮತ್ತು 506 (ಅಪರಾಧ ಬೆದರಿಕೆ) ಮತ್ತು 509 (ಪದ, ಸನ್ನೆ ಅಥವಾ ಚಿತ್ರದ ಮೂಲಕ ಮಹಿಳೆಯ ಅವಮಾ) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರ ಅಡುಗೆಯವರು ನೀಡಿದ ದೂರಿನ ಮೇರೆಗೆ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆಯು ರೇವಣ್ಣ ಅವರ ಪತ್ನಿ ಭವಾನಿ ಅವರ ಸಂಬಂಧಿ ಎಂದು ದೂರುದಾರರು ತಿಳಿಸಿದ್ದಾರೆ. ತಾನು ಕೆಲಸ ಮಾಡಲು ಪ್ರಾರಂಭಿಸಿದ ನಾಲ್ಕು ತಿಂಗಳ ನಂತರ ರೇವಣ್ಣ ತನಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದರು. ಅವರ ಮಗ ಪ್ರಜ್ವಲ್ ತಮ್ಮ ಮಗಳಿಗೆ ವೀಡಿಯೊ ಕರೆಗಳನ್ನು ಮಾಡುತ್ತಿದ್ದರು ಮತ್ತು ಅವಳೊಂದಿಗೆ ಅಸಭ್ಯವಾಗಿ ಮಾತನಾಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

Continue Reading

ಪ್ರಮುಖ ಸುದ್ದಿ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ಬೆಲೆ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Gold Rate Today: ಬಂಗಾರ ಹಾಗೂ ಬೆಳ್ಳಿಯ ಬೆಲೆಗಳು ಇಂದು ನಿನ್ನೆಯಂತೆಯೇ ಯಥಾಸ್ಥಿತಿ ಕಾಪಾಡಿಕೊಂಡಿದ್ದು, ಒಂದು ಗ್ರಾಂ 22 ಕ್ಯಾರಟ್‌ ಚಿನ್ನದ ದರ ₹6,655 ಇದೆ. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,260 ಇದೆ.

VISTARANEWS.COM


on

gold rate today 34
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯದೇ ಮೌಲ್ಯವನ್ನು ಕಾಪಾಡಿಕೊಂಡಿದೆ. ನಿನ್ನೆ ಇವು ಕ್ರಮವಾಗಿ ₹30 ಹಾಗೂ ₹33 ಇಳಿಕೆಯಾಗಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,655ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,240 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,550 ಮತ್ತು ₹6,65,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,260 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,080 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,600 ಮತ್ತು ₹7,26,000 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84, ಎಂಟು ಗ್ರಾಂ ₹672 ಮತ್ತು 10 ಗ್ರಾಂ ₹840ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,70072,750
ಮುಂಬಯಿ66,55072,600
ಬೆಂಗಳೂರು66,55072,600
ಚೆನ್ನೈ67,40073,530

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕ್ರೀಡೆ

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

Paris Olympics: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಡಕ್ಕೆ ಮಹಿಳಾ ಡಬಲ್ಸ್​ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್​ ಟಿಕೆಟ್​ ಲಭಿಸಿದೆ.

VISTARANEWS.COM


on

Paris Olympics
Koo

ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಡಕ್ಕೆ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿವಿ ಸಿಂಧು(PV Sindhu) ಸೇರಿ 7 ಭಾರತೀಯ ಶಟ್ಲರ್​ಗಳು ಅರ್ಹತೆ ಪಡೆದಿದ್ದಾರೆ. ಮಹಿಳಾ ಡಬಲ್ಸ್​ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್​ ಟಿಕೆಟ್​ ಲಭಿಸಿದೆ. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್​ ಫೆಡರೇಷನ್​ನ ಒಲಿಂಪಿಕ್ಸ್​ ಅರ್ಹತಾ ರ್ಯಾಂಕಿಂಗ್​ ಅನ್ವಯ ಒಲಿಂಪಿಕ್ಸ್​ ಅರ್ಹತೆ ಸಂಪಾದಿಸಲು ಸೋಮವಾರ ಅಂತಿಮ ಗಡುವು ಆಗಿತ್ತು.

ಒಲಿಂಪಿಕ್ಸ್​ ಅರ್ಹತಾ ಶ್ರೇಯಾಂಕದ​ ಅನ್ವಯ ಸಿಂಗಲ್ಸ್​ ವಿಭಾಗದಲ್ಲಿ ಅಗ್ರ 16 ಶಟ್ಲರ್​ಗಳಿಗೆ ಅರ್ಹತೆ ನೀಡಲಾಗಿದೆ. ಮಹಿಳಾ ಸಿಂಗಲ್ಸ್​ನಲ್ಲಿ ಸಿಂಧು 12ನೇ ಸ್ಥಾನದಲ್ಲಿದ್ದರೆ, ಪುರುಷರ ಸಿಂಗಲ್ಸ್​ನಲ್ಲಿ ಪ್ರಣಯ್​ ಮತ್ತು ಲಕ್ಷ್ಯ ಸೇನ್ ಕ್ರಮವಾಗಿ 9 ಮತ್ತು 13ನೇ ಸ್ಥಾನದಲ್ಲಿದ್ದಾರೆ. ಕಳೆದ ಟೋಕಿಯ ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಸಿಂಧು ಅವರ ಮೇಲೆ ಈ ಬಾರಿಯೂ ಪದಲ ಬರವಸೆ ಇರಿಸಲಾಗಿದ್ದರೂ ಕಳೆದೊಂದು ವರ್ಷದಿಂದ ಸಿಂಧು ನಿರೀಕ್ಷಿತ ಪ್ರದರ್ಶನ ತೋರಿಲ್ಲ.

ಪುರುಷರ ಡಬಲ್ಸ್​ನಲ್ಲಿ ಸಾತ್ವಿಕ್​ ಸಾಯಿರಾಜ್​ ಮತ್ತು ಚಿರಾಗ್​ ಶೆಟ್ಟಿ ಈಗಾಗಲೇ ಹಲವು ಟೂರ್ನಿಗಳಲ್ಲಿ ಜಯ ಸಾಧಿಸಿ ಭಾರತಕ್ಕೆ ಐತಿಹಾಸಿಕ ಪದಕ ಕೂಡ ಗೆದ್ದು ಕೊಟ್ಟಿದ್ದಾರೆ. ಹೀಗಾಗಿ ಈ ಜೋಡಿಯ ಮೇಲೆ ಭಾರತ ಭಾರೀ ನಿರೀಕ್ಷೆಯೊಂದನ್ನು ಇಟ್ಟಿದೆ. ಮಹಿಳಾ ಡಬಲ್ಸ್​ನಲ್ಲಿ ಅಶ್ವಿನಿ ಪೊನ್ನಪ್ಪ ಮತ್ತು ತನಿಷಾ ಕ್ರಾಸ್ಟೋ ಜೋಡಿ ಕಣಕ್ಕಿಳಿಯಲಿದೆ. ಆದರೆ, ಭಾರತದ ಇನ್ನೊಂದು ಮಹಿಳಾ ಡಬಲ್ಸ್​ ಜೋಡಿಯಾದ ತ್ರಿಸಾ ಜೋಲಿ-ಗಾಯತ್ರಿ ಗೋಪಿಚಂದ್​ಗೆ ಅರ್ಹತೆ ಲಭಿಸಿಲ್ಲ.

ಇದನ್ನೂ ಓದಿ Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

ಅರ್ಹತೆ ಪಡೆದ ಶಟ್ಲರ್​ಗಳು

ಪಿವಿ ಸಿಂಧು, ಲಕ್ಷ್ಯ ಸೇನ್, ಎಚ್ ಎಸ್ ಪ್ರಣಯ್, ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ, ತನಿಶಾ ಕ್ರಾಸ್ಟೊ.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

Hassan Pen Drive Case: PSI, AE ಹೀಗೆ ವಿಡಿಯೋದಲ್ಲಿರುವ ಸುಮಾರು ಅರ್ಧದಷ್ಟು ಮಹಿಳೆಯರು ಸರ್ಕಾರಿ ಮಹಿಳಾ ಅಧಿಕಾರಿಗಳು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದರೊಂದಿಗೆ ಕೆಲಸ ಕೊಡಿಸುವ, ವರ್ಗಾವಣೆ ವಿಚಾರದಲ್ಲೂ ಈ ದಂಧೆ ಭಾಗಿಯಾಗಿರಬಹುದು ಎಂಬ ವ್ಯಾಪಕ ಅನುಮಾನ ವ್ಯಕ್ತವಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ.

ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕಾಗುತ್ತಿದ್ದು, ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಇನ್‌ಸ್ಪೆಪಕ್ಟರ್ ಸೇರಿ ನಾಲ್ವರ ಪ್ರತ್ಯೇಕ ತಂಡದಿಂದ ವಿಡಿಯೋ ಪರಿಶೀಲನೆ ಮಾಡಲಾಗುತ್ತಿದೆ. ಪೆನ್ ಡ್ರೈವ್‌ನಲ್ಲಿರುವ ಅಷ್ಟೂ ವಿಡಿಯೋ ಪರಿಶೀಲನೆ ಮಾಡಿ ಎಸ್ಐಟಿ ಮುಖ್ಯಸ್ಥರಿಗೆ ತಂಡ ವರದಿ ಕೊಡಲಿದೆ. ವಿಶೇಷ ಎಂದರೆ, ಪ್ರಾಥಮಿಕ ವರದಿಗಳ ಪ್ರಕಾರ, ವಿಡಿಯೋಗಳಲ್ಲಿರುವ ಮಹಿಳೆಯರಲ್ಲಿ ಬಹುತೇಕರು ಸರ್ಕಾರಿ ಅಧಿಕಾರಿಗಳು ಎಂಬ ಚಕಿತಗೊಳಿಸುವ ಅಂಶ ಬಯಲಾಗಿದೆ.

PSI, AE ಹೀಗೆ ವಿಡಿಯೋದಲ್ಲಿರುವ ಸುಮಾರು ಅರ್ಧದಷ್ಟು ಮಹಿಳೆಯರು ಸರ್ಕಾರಿ ಮಹಿಳಾ ಅಧಿಕಾರಿಗಳು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದರೊಂದಿಗೆ ಕೆಲಸ ಕೊಡಿಸುವ, ವರ್ಗಾವಣೆ ವಿಚಾರದಲ್ಲೂ ಈ ದಂಧೆ ಭಾಗಿಯಾಗಿರಬಹುದು ಎಂಬ ವ್ಯಾಪಕ ಅನುಮಾನ ವ್ಯಕ್ತವಾಗಿದೆ.

18 ಸಿಬ್ಬಂದಿ ನೇಮಕ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತಂಡಕ್ಕೆ ಸಿಐಡಿಯಿಂದ 18 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯದ ‌ವಿವಿಧ ಜಿಲ್ಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪರಿಣಿತರ ತಂಡ‌ವನ್ನು ರಚಿಸಲಾಗಿದ್ದು, ಇಂದಿನಿಂದಲೇ ಕಾರ್ಯಾಚರಣೆ ಆರಂಭ ಸಾಧ್ಯತೆ ಇದೆ.

ಎಸಿಪಿಗಳಾದ ಪ್ರಿಯದರ್ಶಿನಿ ಈಶ್ವರ್‌ ಸಾನಿಕೊಪ್ಪ, ಸತ್ಯನಾರಾಯಣ ಸಿಂಗ್‌, ಧನ್ಯ ಎನ್‌. ನಾಯ್ಕ್‌, ಪಿಐಗಳಾದ ಸುಮರಾಣಿ ಬಿ.ಎಸ್.‌, ಸ್ವರ್ಣ ಬಿ.ಎಸ್.‌, ಭಾರತಿ, ಹೇಮಂತ್‌ ಕುಮಾರ್‌, ರಾಜಾ ಜಿ.ಸಿ., ಪಿಎಸ್‌ಐಗಳಾದ ವೈಲೆಟ್‌ ಫ್ಲೆಮೀನಾ, ವಿನುತ, ನಂದೀಶ್‌, ಕುಮುದ, ಎಚ್‌ಸಿಗಳಾದ ಸುಮತಿ, ಮನೋಹರ, ಸುನೀಲ್‌ ಬೆಳವಲಗಿ, ಬಸವರಾಜ್‌ ಮೈಗೇರಿ, ಪಿಸಿಗಳಾದ ರಂಗಸ್ವಾಮಿ, ಸಿಂಧುರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ನಡುವೆ ಡಿಜಿ ಅಲೋಕ್ ಮೋಹನ್ ಅವರು, “ಪ್ರಕರಣ ತನಿಖೆಗೆ ಎಸ್‌ಐಟಿ ರಚನೆಯಾಗಿದೆ. ತನಿಖೆ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

ಕರೆದಾಗ ಬರುತ್ತಾನೆ: ರೇವಣ್ಣ

ಬೆಂಗಳೂರು: ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ (Hassan Pen Drive Case) ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ ಸಂಸದ ಹಾಗೂ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ನಂತರ ನಗರದಲ್ಲಿ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, 4-5 ವರ್ಷದ ಹಿಂದೆ ಘಟನೆ ನಡೆದಿದೆ ಎಂದು ಈಗ ಕೇಸ್‌ ಹಾಕಿದ್ದಾರೆ. ಇದು ಯಾವ ತರಹದ್ದು ಎಂದು ಏನೂ ಮಾತನಾಡಲ್ಲ. ವಿಡಿಯೊ ಸೇರಿ ಯಾವುದರ ಬಗ್ಗೆಯೂ ಮಾತನಾಡಲ್ಲ ಎಂದು ತಿಳಿಸಿದ್ದಾರೆ.

ಪಕ್ಷದಿಂದ ಉಚ್ಚಾಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ನಿರ್ಧಾರ ಪಕ್ಷಕ್ಕೆ ಸೇರಿದ್ದು, ಎಸ್‌ಐಟಿ ರಚನೆ ಮಾಡಿರುವುದರಿಂದ ತನಿಖೆಗೆ ತೊಂದರೆ ಆಗಬಾರದೆಂದು ನಾನೇನೂ ಮಾತನಾಡಲ್ಲ. ಇದೆಲ್ಲಾ ರಾಜಕೀಯ. ಸರ್ಕಾರ ಅವರದು ಇದೆ, ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಕರಣದ ಬಗೆ ಕಾನೂನು ರೀತಿಯಲ್ಲಿ ತನಿಖೆ ಆಗಲಿ ಎಂದು ಹೇಳಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗಿರುವ ವಿಚಾರಕ್ಕೆ ಸ್ಪಂದಿಸಿ, ಚುನಾವಣೆ ಮುಗಿದ ನಂತರ ಅವನು ಹೋಗಿದ್ದಾನೆ. ಯಾವುದೋ ಕೆಲಸಕ್ಕಾಗಿ ಹೋಗ್ಬೇಕಿತ್ತು ಹೋಗಿದ್ದಾನೆ. ಇವರು ಎಫ್‌ಐಆರ್‌ ಹಾಕುತ್ತಾರೆ ಅಂತ ಗೊತ್ತಿತ್ತಾ? ಎಸ್‌ಐಟಿ ತನಿಖೆ ಮಾಡುತ್ತಾರೆ ಅಂತ ಗೊತ್ತಿತ್ತಾ? ವಿಚಾರಣೆಗೆ ಕರೆದಾಗ ಬರುತ್ತಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಕರೆದಾಗ ವಿದೇಶದಿಂದ ಪ್ರಜ್ವಲ್ ಬರುತ್ತಾನೆ ಎಂದ ಎಚ್‌.ಡಿ.ರೇವಣ್ಣ

Continue Reading
Advertisement
amith shah
ಪ್ರಮುಖ ಸುದ್ದಿ12 mins ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

JNU Campus
ದೇಶ30 mins ago

Physical abuse: JNU ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಭುಗಿಲೆದ್ದ ಆಕ್ರೋಶ

LSG vs MI
ಕ್ರೀಡೆ36 mins ago

LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

gold rate today 34
ಪ್ರಮುಖ ಸುದ್ದಿ41 mins ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ಬೆಲೆ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Paris Olympics
ಕ್ರೀಡೆ1 hour ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ವಿದೇಶ1 hour ago

Pakistan: ಭಾರತ ಸೂಪರ್‌ ಪವರ್‌ ಆಗುತ್ತಿದೆ, ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡ್ತಿದೆ; ಪಾಕ್ ಸಂಸತ್ ನಲ್ಲೇ ರೋದನ!

IPL 2024
ಕ್ರೀಡೆ2 hours ago

IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

Hassan Pen Drive Case
ಪ್ರಮುಖ ಸುದ್ದಿ2 hours ago

Hassan Pen Drive Case: ಎಸ್‌ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?

T20 World Cup 2024
ಕ್ರೀಡೆ2 hours ago

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

Manipur Violence
ದೇಶ2 hours ago

Manipur Violence:ಮಹಿಳೆಯರ ವಿವಸ್ತ್ರ ಕೇಸ್‌; ಪೊಲೀಸರೆದುರೇ ನಡೆದಿತ್ತು ನೀಚ ಕೃತ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ7 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202423 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌