ಹಾಸನ: ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಸೂರಜ್ ರೇವಣ್ಣ (Suraj Revanna Case) ಪರವಾಗಿ ನಿಂತು ಸಂತ್ರಸ್ತರ ವಿರೋಧ ಕಟ್ಟಿಕೊಂಡಿದ್ದ ಶಿವಕುಮಾರ್ ದಿಢೀರ್ ತಮ್ಮ ನಿಲುವು ಬದಲಾಯಿಸಿದ್ದಾರೆ. ಇದೀಗ ಅವರು ಹೊಳೆನರಸೀಪುರ ಪೊಲೀಸ್ ಠಾಣೆಗೆ ಬಂದು ಸೂರಜ್ ರೇವಣ್ಣ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಶಿವಕುಮಾರ್ ಈ ಹಿಂದೆ ಸಂತ್ರಸ್ತರ ವಿರುದ್ಧವಾಗಿದ್ದರು. ಹೀಗಾಗಿ ಸಂತ್ರಸ್ತರು ಶಿವಕುಮಾರ್ ವಿರುದ್ಧವೇ ದೂರು ದಾಖಲಿಸಿದ್ದರು. ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಇದೀಗ ದಿಢೀರ್ ಪ್ರತ್ಯಕ್ಷಗೊಂಡ ಸೂರಜ್ ವಿರುದ್ಧ ದೂರು ದಾಖಲಿಸಿದ್ದಾರೆ.
ಶಿವಕುಮಾರ್ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ವಿರುದ್ದ ದೂರು ನೀಡಲು ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಶಿವಕುಮಾರ್ ಶಿವಕುಮಾರ್ ಹೊಳೆನರಸೀಪುರ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದವರಾಗಿದ್ದಾರೆ. ಹಿಂದೆ ಸೂರಜ್ ಪರವಾಗಿ ಸಂತ್ರಸ್ತನ ವಿರುದ್ಧ ದೂರು ನೀಡಿ ಗಮನ ಸೆಳೆದಿದ್ದರು.
ಶಿವಕಮಾರ ವಿರುದ್ಧವೂ ದಾಖಲಾಗಿದೆ ದೂರು
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ (Suraj Revanna Case) ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ದೂರು ದಾಖಲಿಲಾಗಿತ್ತು. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದರು.
ಹೀಗಾಗಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿತ್ತು. ಸೂರಜ್‌ಗೆ 5 ಕೋಟಿ ರೂ. ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ನೀಡಿದ್ದರು. ಆ ಬಳಿಕ ಶಿವಕುಮಾರ್ ಹಾಗೂ ಸಂತ್ರಸ್ತ ಇಬ್ಬರೂ ಸೇರಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
ಇದನ್ನೂ ಓದಿ: Suraj Revanna Case: ತಮ್ಮನಿಗೆ ಮೂರು ಸಲ; ಈಗ ಅಣ್ಣನಿಗೂ ಪುರುಷತ್ವ ಪರೀಕ್ಷೆ! ಇದೇ ಬೇರೆ ಥರ!
ಅಣ್ಣ ಸೂರಜ್ 8 ದಿನ ಸಿಐಡಿ ಕಸ್ಟಡಿಗೆ
ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಬುಧವಾರ ಆದೇಶ ಹೊರಡಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, 10 ದಿನಕ್ಕೆ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಲು ಸೂಚಿಸಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.
ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ
ಬುಧವಾರ ನ್ಯಾಯಾಲಯದಲ್ಲಿ ಅಣ್ಣ ಸೂರಜ್ ರೇವಣ್ಣ ಅಸಹಜ ಲೈಂಗಿಕ ಕಿರುಕುಳದ ಪ್ರಕರಣದ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು (Prajwal Revanna) ಕೋರ್ಟ್‌ಗೆ ಎಸ್ಐಟಿ ಟೀಂ ಹಾಜರುಪಡಿಸಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತ್ತು.
ಸೋದರ ಸೂರಜ್ ರೇವಣ್ಣ ಕೇಸ್‌ನ ಆದೇಶ ಬರೆಸುತ್ತಿರುವುದನ್ನು ನೋಡಿದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸಿಐಡಿ ಕಸ್ಟಡಿಗೆ ಹೋಗಲಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಅಣ್ಣನನ್ನು ಎಷ್ಟು ದಿನ ಕಸ್ಟಡಿಗೆ ನೀಡಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಜ್ವಲ್ ಕೇಳಿದ್ದಾರೆ.