Site icon Vistara News

Teachers Recruitment: ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರ ನೇಮಕಾತಿ: ಕೌನ್ಸೆಲಿಂಗ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Teachers Recruitment

ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡಲು (Teachers Recruitment) ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ, ಸ್ಥಳ ನಿಯುಕ್ತಿಗೊಳಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಲೋಕಸಭಾ ಚುನಾವಣಾ ಮಾದರಿ ನೀತಿ ಸಹಿತೆ ಹಿನ್ನೆಲೆ ಕೌನ್ಸೆಲಿಂಗ್ ದಿನಾಂಕ ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ ನಡೆಸಲು ಇದೀಗ ಪರಿಷ್ಕೃತ ವೇಳಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಡೆದ ಪರೀಕ್ಷೆಯ ಫಲಿತಾಂಶ ಪಟ್ಟಿ ಪ್ರಕಟಣೆ (ಪರೀಕ್ಷಾ ಅಂಕಗಳ ಜತೆಗೆ ಅಭ್ಯರ್ಥಿಗಳ ಸೇವಾ ಅನುಭವ ಹಾಗೂ ಹೆಚ್ಚಿನ ವಿದ್ಯಾರ್ಹತೆಗೆ ನಿಗದಿಪಡಿಸಿರುವ ಅಂಕಗಳ ಕ್ರೋಡೀಕರಣದೊಂದಿಗೆ) ಮಾಡಲು ಜೂನ್‌ 11 ನಿಗದಿ ಮಾಡಲಾಗಿದೆ. ಪ್ರಕಟಿತ ಫಲಿತಾಂಶ ಪಟ್ಟಿಗೆ ಸೇವಾನುಭವ ಹಾಗೂ ವಿದ್ಯಾರ್ಹತೆ ಸಂಬಂಧ ಅಂಕಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಜೂನ್‌ 11ರಿಂದ 14ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಆಕ್ಷೇಪಣೆಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಸರಿಪಡಿಸಿ ಸರಿಪಡಿಸಲು ಜೂನ್‌ 15ರಿಂದ 19ರವರೆಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಜೂನ್‌ 24ರಂದು ಅಂತಿಮ ಅರ್ಹತಾ ಪಟ್ಟಿ ಪ್ರಕಟಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Exit mobile version