Site icon Vistara News

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade

Team India victory parade: Tight security in place for roadshow of T20 World Champions in Mumbai

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

https://twitter.com/BCCI/status/1808768308579348742

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Exit mobile version