Site icon Vistara News

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Maarige Daari

ಬೆಂಗಳೂರು: ಕನ್ನಡ ಸಿನಿ ಕ್ಷೇತ್ರಕ್ಕೆ (Sandalwood) ಮತ್ತೊಂದು ಹೊಸ ತಂಡದ ಆಗಮನವಾಗಿದೆ. `ಮಾರಿಗೆ ದಾರಿ’ (Maarige Daari) ಶೀರ್ಷಿಕೆಯ ಈ ಸಿನಿಮಾವೀಗ ಸದ್ದಿಲ್ಲದೆ ಚಿತ್ರೀಕರಣ (Cinema Shooting) ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸತೇನನ್ನೋ ಹೇಳ ಹೊರಟಿರುವಂತೆ ಭಾಸವಾಗುವ ಈ ಟೀಸಸ್​​ನಲ್ಲಿ ಕಥೆಯ ಕುರಿತು ಒಂಚೂರು ಸುಳಿವನ್ನೂ ಬಿಟ್ಟು ಕೊಡದೆ, ಹೀರೋ ಕ್ಯಾರೆಕ್ಟರಿನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದಿಡಲಾಗಿದೆ. ಸದರಿ ಫಸ್ಟ್ ಲುಕ್ ಟೀಸರ್ ಮೂಲಕ ಮಾರಿಗೆ ದಾರಿ ಪಕ್ಕಾ ಮಾಸ್ ಕಂಟೆಂಟ್ ಹೊಂದಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ.

ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಅವರ ಒಂದಷ್ಟು ಲುಕ್ಕುಗಳ ಝಲಕ್ಕುಗಳು ಫಸ್ಟ್ ಲುಕ್ ಟೀಸರ್ ಮೂಲಕ ಜಾಹೀರಾಗಿವೆ. ನೆಲಮೂಲದ ಕಥೆ, ಮಾಸ್ ದೃಷ್ಯಾವಳಿಗಳ ಸುಳಿವಿನೊಂದಿಗೆ ಮೂಡಿ ಬಂದಿರೋ ಈ ಫಸಟ್ ಲುಕ್ ಟೀಸರ್ ಒಂದಷ್ಟು ಆಲೋಚೆನೆಗೆ ಹಚ್ಚುವಂತಿದೆ. ಈ ಮೂಲಕ ಹೊಸಬರೇ ಸೇರಿಕೊಂಡು ರೂಪಿಸಿರುವ ಮಾರಿಗೆ ದಾರಿ ಪ್ರೇಕ್ಷಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ರಾಧಾ ಫಿಲಂಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಕನ್ನಡದ ಪ್ರೇಕ್ಷಕರಿಗೆ ತೀರಾ ಫ್ರೆಶ್ ಅನ್ನಿಸುವಂಥಾ ಕಥೆಯೊಂದಿಗೆ ಈ ಸಿನಿಮಾವನ್ನು ರೂಪಿಸಿರೋದಾಗಿ ನಿರ್ದೇಶಕರು ಹೇಳಿಕೊಂಡಿದ್ದಾರೆ. ಅದಕ್ಕೆ ತಕ್ಕುದಾದ ಒಂದಷ್ಟು ಅಂಶಗಳು ಈ ಟೀಸರಿನಲ್ಲಿ ಕಾಣಿಸಿವೆ. ಇನ್ನುಳಿದಂತೆ, ಅಗಸ್ತ್ಯ, ಮಹಾಲಕ್ಷ್ಮಿ, ಕಾಕ್ರೋಚ್ ಸುಧಿ, ವರ್ಧನ್, ಪ್ರದೀಪ್ ಪೂಜಾರಿ, ಬೆನಕ ನಂಜಪ್ಪ, ಬಾಲ ರಾಜವಾಡಿ ಮುಂತಾದವರ ತಾರಾಗಣದೊಂದಿಗೆ ಮಾರಿಗೆ ದಾರಿ ಕಳೆಗಟ್ಟಿಕೊಂಡಿದೆ. ಜಗದೀಶ್ ಗೌಡ ಛಾಯಾಗ್ರಹಣ, ಸ್ವಾಮಿನಾಥನ್ ಆರ್.ಕೆ ಸಂಗೀತ ನಿರ್ದೇಶನ, ಜಗದೀಶ್ ಗೌಡ ಸಂಕಲನ ಈ ಚಿತ್ರಕ್ಕಿದೆ.

ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ (koti kannada movie) ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ.

ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.
ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ ಹಾಡಿನ ಬಗ್ಗೆ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ಎಕ್ಸೈಂಟಿಂಗ್ ಮತ್ತು ಚಾಲೆಂಜಿಂಗ್ ಆಗಿತ್ತು. ಸಖತ್ ಮಜಾ ಮಾಡಿದೀನಿ ಈ ಹಾಡನ್ನು ಮಾಡುವ ಪ್ರಕ್ರಿಯೆಯಲ್ಲಿ” ಎಂದು ಹೇಳಿದರು.

Exit mobile version