ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ
ರಾಜ್ಯದ ಬಹುತೇಕ ಜನ ಈಗ ತಮ್ಮ ಕೆಲಸ ಕಾರ್ಯ ಮರೆತು ಕಾಂಗ್ರೆಸ್ ಘೋಷಿಸಿದ ಉಚಿತ ಯೋಜನೆಗಳ ಪ್ರಯೋಜನ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ. ಇದರ ಕುರಿತು ಅಶಾಂತಿಯೂ ಸೃಷ್ಟಿಯಾಗಿದೆ. ಹೊಸ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು.
ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಹಲವಾರು ಉಚಿತ ಘೋಷಣೆಗಳನ್ನು ಪ್ರಕಟಿಸಿತ್ತು. ರಾಜ್ಯದ ಜನ ಈಗ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಮೊದಲ ಸಂಪುಟ ಸಭೆಯಲ್ಲೇ ಎಲ್ಲ ಭರವಸೆಗಳನ್ನು ಈಡೇರಿಸುವುದಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಹಿರಿಯ ಮುಖಂಡರು ಬಾಂಡ್ ಸಮೇತ ಭರವಸೆ ನೀಡಿದ್ದರು. ಆದರೆ, ಸರ್ಕಾರ ಅಸ್ತಿತ್ವಕ್ಕೆ ಬಂದು ವಾರ ಕಳೆದರೂ, ಮೊದಲ ಸಂಪುಟ ಸಭೆ ಮುಗಿದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ಕನಿಷ್ಠ, ಈ ಉಚಿತ ಯೋಜನೆಗಳು ಯಾರಿಗೆ ಸಿಗುತ್ತವೆ, ಯಾರಿಗೆ ಸಿಗುವುದಿಲ್ಲ ಎಂಬ ಬಗ್ಗೆಯೂ ಮಾಹಿತಿ ನೀಡುತ್ತಿಲ್ಲ. ಪ್ರಮಾಣ ವಚನ ಸ್ವೀಕಾರದ ದಿನ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು.
ಆದರೆ ಎರಡನೇ ಹಂತದ ಸಂಪುಟ ರಚನೆ ಗೊಂದಲದಲ್ಲಿರುವ ಸಿಎಂ ಮತ್ತು ಡಿಸಿಎಂ ಎರಡನೇ ಸಭೆ ನಡೆಸಿಲ್ಲ; ಹೀಗಾಗಿ ಯಾವುದೇ ತೀರ್ಮಾನಕ್ಕೂ ಸರ್ಕಾರ ಬಂದಿಲ್ಲ. ಹಾಗಾಗಿ ಜನ ಗೊಂದಲಕ್ಕೊಳಗಾಗಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ, ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ಈ ಭರವಸೆಗಳಾಗಿವೆ. ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ನನಗೂ ಫ್ರೀ, ನಿಮಗೆಲ್ಲರಿಗೂ ಫ್ರೀ ಎಂದು ಘಂಟಾಘೋಷವಾಗಿ ಸಾರಿದ್ದರಿಂದ ಜನ ಎಲ್ಲರಿಗೂ ಉಚಿತ ಎಂದುಕೊಂಡುಬಿಟ್ಟಿದ್ದಾರೆ! ಈ ಉಚಿತ ಯೋಜನೆಗಳ ಬಗ್ಗೆ ರಾಜ್ಯದ ಮೂಲೆಮೂಲೆಗಳಲ್ಲಿ ಈಗ ಗದ್ದಲವೋ ಗದ್ದಲ ನಡೆಯುತ್ತಿದೆ. ಬಸ್ ಹತ್ತಿದ ಮಹಿಳೆಯರನೇಕರು ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ಇನ್ನೊಂದೆಡೆ, ಕರೆಂಟ್ ಬಿಲ್ ಕಟ್ಟಲು ನಿರಾಕರಿಸಿ, ಬಿಲ್ ಕೊಡಲು ಹೋದವರ ಮೇಲೆಯೇ ಹಲ್ಲೆ ನಡೆಸುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಪಡೆಯಲು ಜನ ನೆಮ್ಮದಿ ಕೇಂದ್ರಗಳಿಗೆ ಮುಗಿಬಿದ್ದಿದ್ದಾರೆ. ನಾಡಿನ ಬಹುತೇಕ ಜನ ಈಗ ತಮ್ಮ ಕೆಲಸ ಕಾರ್ಯ ಮರೆತು ಈ ಉಚಿತ ಯೋಜನೆಗಳ ಪ್ರಯೋಜನ ಪಡೆಯುವುದು ಹೇಗೆ ಎಂಬ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ.
ಇದನ್ನೂ ಓದಿ: Congress Guarantee: ಗ್ಯಾರಂಟಿ ಸ್ಕೀಮ್ ಜಾರಿಗೆ ಬರದಿದ್ದರೆ ರಾಜಕೀಯ ನಿವೃತ್ತಿ; ಕೈ ಶಾಸಕ ಕೋನರೆಡ್ಡಿ ಗ್ಯಾರಂಟಿ
ಈ ಗ್ಯಾರಂಟಿ ಸ್ಕೀಮ್‌ಗಳನ್ನು ಘೋಷಿಸುವ ಮುನ್ನ ರಾಜ್ಯದ ವಿತ್ತೀಯ ಸ್ಥಿತಿಗತಿ, ವಿತ್ತೀಯ ಕೊರತೆಯ ಸ್ಥಿತಿಗಳ ಬಗ್ಗೆ ಕಾಂಗ್ರೆಸ್ ಯೋಚಿಸಿದಂತಿಲ್ಲ. ಯೋಚಿಸಿದ್ದರೆ, ಈ ಗ್ಯಾರಂಟಿಗಳನ್ನು ಯಾರಿಗೆ ಸೀಮಿತಗೊಳಿಸಬೇಕು ಎಂಬ ನೆಲೆಯಲ್ಲಿ ಚಿಂತಿಸಿ ಹಾಗೆಯೇ ಘೋಷಿಸುತ್ತಿತ್ತೋ ಏನೋ. ಆದರೆ ಅದು ಹೆಚ್ಚಿನ ಮತಗಳನ್ನು ತರಲಾರದು ಎಂಬುದು ಖಾತ್ರಿಯಿರುವುದರಿಂದ, ಉಚಿತಗಳು ಎಲ್ಲರಿಗೂ ಹೇಳಲಾಗಿತ್ತು. ಅದೇ ಈಗ ಸರ್ಕಾರ ಟೇಕ್‌ಆಫ್ ಆಗುವ ಮುನ್ನವೇ ಕಿರಿಕಿರಿ ಸೃಷ್ಟಿಸಿದೆ. ಎಲ್ಲ ಗ್ಯಾರಂಟಿಗಳನ್ನೂ ಅಕ್ಷರಶಃ ಈಡೇರಿಸಲು ಬೊಕ್ಕಸ ಸಶಕ್ತವಾಗಿಲ್ಲ; ಈಡೇರಿಸದೆ ಇದ್ದರೆ ವಚನಭಂಗದ ಅಪಖ್ಯಾತಿಗಳು ಕಾಂಗ್ರೆಸ್‌ನ ಹೆಗಲೇರಲಿವೆ. ಪ್ರಸ್ತುತ ಸನ್ನಿವೇಶದಲ್ಲಿ ಜನರಲ್ಲಿ ಸೃಷ್ಟಿಯಾಗಿರುವ ಗೊಂದಲವನ್ನು ನಿವಾರಿಸುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಈ ಉಚಿತಗಳನ್ನು ಬಯಸುತ್ತಿರುವ ಜನರಿಗೂ ಸರ್ಕಾರಿ ಸಿಬ್ಬಂದಿಗೂ ಎಲ್ಲ ಕಡೆಗಳಲ್ಲೂ ಸಂಘರ್ಷ ಏರ್ಪಡಬಹುದು. ಸಾರ್ವಜನಿಕ ಶಾಂತಿ ಕದಡುವ ಇಂಥ ಸನ್ನಿವೇಶಕ್ಕೆ ಮುನ್ನ ಸರ್ಕಾರ ಎಚ್ಚೆತ್ತುಕೊಂಡು ಈ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಿ.
ಕರ್ನಾಟಕ
Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್ ಪ್ರಹಾರ
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ ಎಂದಿದ್ದಾರೆ.
ಬೆಂಗಳೂರು: ಚುನಾವಣೆಯುದ್ದಕ್ಕೂ ಒಗ್ಗಟ್ಟಿನ ಮಂತ್ರವನ್ನು ಜಪಿಸಿಕೊಂಡು ಸರಳ ಬಹುಮತ ಪಡೆದ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ವಿಸ್ತರಣೆ ನಂತರ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ.
ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು.
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ. ನಾನು ಸ್ವಂತ ಮನೆಯಲ್ಲಿ ಇರುವವನು, ಬಾಡಿಗೆ ಮನೆಯಲ್ಲಿ ಇರುವವನು ಅಲ್ಲ. ನನ್ನ ಸಾಮಾಜಿಕ ನ್ಯಾಯಕ್ಕೂ ಅಹಿಂದಕ್ಕೂ ವ್ಯತ್ಯಾಸ ಇದೆ. ನಾನು ಅಹಿಂದ ಅಂತಾ ಹೇಳೋನಲ್ಲಾ. ನಾನು ಅಧಿಕಾರ ಕೊಡಿ ಅಂತಾ ಎಂದೂ ಕಾಲು ಹಿಡಿದವನಲ್ಲ. ನಾನು ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: Karnataka Election : ಮಂಕಾಳ ವೈದ್ಯಗೆ ಗೆಲುವು ಮಾತ್ರವಲ್ಲ ಮಂತ್ರಿಗಿರಿಯೂ ಗ್ಯಾರಂಟಿ ಎಂದ ಬಿ.ಕೆ. ಹರಿಪ್ರಸಾದ್
ಕರ್ನಾಟಕ
Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್; ಒಂದೇ ದಿನ 2 ಸಿಹಿ ಸುದ್ದಿ!
Karnataka Cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ಇದೇ ಮೊದಲ ಬಾರಿಗೆ ಮಂತ್ರಿ ಪಟ್ಟ ಗಿಟ್ಟಿಸಿಕೊಂಡ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಜ್ಜಿಯಾಗಿದ್ದಾರೆ. ಒಂದೇ ದಿನ ಎರಡು ಸಂತಸದ ಸುದ್ದಿಯನ್ನು ಅವರು ಪಡೆದಂತಾಗಿದೆ.
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರಿಗೆ ಇಂದು ಶುಭ ಶನಿವಾರ. ಅವರು ಶನಿವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಮೊದಲ ಬಾರಿಗೆ ಮಂತ್ರಿ ಪಟ್ಟವನ್ನು ಅಲಂಕರಿಸಿದ್ದಾರೆ. ಇದೇ ವೇಳೆ ಅವರು ಅಜ್ಜಿಯೂ ಆಗಿದ್ದಾರೆ.
ಪುತ್ರ ಮೃಣಾಲ್ ಹಾಗೂ ಹಿತಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮೂಲಕ ಇವರ ಮನೆಗೆ ಮತ್ತೊಂದು ಪುಟ್ಟ ಲಕ್ಷ್ಮಿ ಪ್ರವೇಶ ಆದಂತೆ ಆಗಿದೆ. ಒಂದು ಕಡೆ ಸಚಿವರಾಗಿರುವ ಖುಷಿಯಲ್ಲಿದ್ದ ಲಕ್ಷ್ಮಿ ಅವರಿಗೆ ಈ ಸುದ್ದಿಯು ಸಖತ್ ಖುಷಿ ಕೊಟ್ಟಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೊಸೆ ಹಿತಾ ಮೃಣಾಲ್ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವಾಗಿ ಅವರು ತಮ್ಮ ಆಪ್ತರ ಬಳಿ ಖುಷಿಯನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ
ಎರಡನೇ ಬಾರಿಯೇ ಬಂಪರ್
ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಎರಡನೇ ಬಾರಿಗೆ ವಿಜಯ ಸಾಧಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಅವರ ಸಂಪುಟ ಸೇರುವ ಅವಕಾಶ ಒದಗಿ ಬಂದಿದೆ. ಲಿಂಗಾಯತ ಕೋಟಾದಡಿ ಹೆಬ್ಬಾಳ್ಕರ್ ಅವರು ಸಂಪುಟ ಸೇರಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಏರ್ಪಟ್ಟಿದ್ದ ತೀವ್ರ ಪೈಪೋಟಿಯ ಮಧ್ಯೆಯೂ ರಮೇಶ್ ಬೆಂಬಲಿಗ ಹಾಗೂ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರನ್ನು ಮಣಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದರು.
ಅಲ್ಲದೆ, ತಮ್ಮ ಕ್ಷೇತ್ರದಲ್ಲಿ ಪ್ರಭಾವವನ್ನು ಹೊಂದಿಲ್ಲದೆ, ಕಾಂಗ್ರೆಸ್ ಮಟ್ಟಿಗೆ ಬೆಳಗಾವಿ ಜಿಲ್ಲೆಯಲ್ಲಿ ಹಿಡಿತವನ್ನು ಸಾಧಿಸಿದ್ದಾರೆ. ಚುನಾವಣೆಗೂ ಪೂರ್ವದಲ್ಲಿ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಥಣಿಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಲ್ಲದೆ, ಬೆಂಬಲಿಗರ ಸಭೆಯನ್ನೂ ನಡೆಸಿದ್ದರು. ಕೊನೆಗೆ ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರ ಒತ್ತಡಕ್ಕೆ ಮಣಿದು ಅವರ ಬೆಂಬಲಿಗ ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸವದಿ ಮುಂದಾಗಿದ್ದರು. ಆದರೆ, ಈ ವೇಳೆ ಮಧ್ಯ ಪ್ರವೇಶ ಮಾಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತಂದು ಪಕ್ಷ ಸೇರ್ಪಡೆ ಮಾಡಿಸಿದ್ದರು. ಅಲ್ಲದೆ, ಲಕ್ಷ್ಮಣ ಸವದಿ ಅವರು ಈಗ ಗೆದ್ದು ಬೀಗಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಪದಗ್ರಹಣ; ವಿಡಿಯೊ ಇಲ್ಲಿದೆ
ಇದನ್ನೂ ಓದಿ: Electricity Bill: ಇವತ್ತಿಂದ ಕರೆಂಟ್ ಬಿಲ್ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆರ್ಡರ್!
ಜಗದೀಶ್ ಶೆಟ್ಟರ್ ಸೇರ್ಪಡೆಯಲ್ಲೂ ಮಹತ್ವದ ಪಾತ್ರ
ಜಗದೀಶ್ ಶೆಟ್ಟರ್ ಅವರು ಬಿಜೆಪಿಯಲ್ಲಿದ್ದಾಗ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಮಹೇಶ್ ನಲವಾಡ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಇದಾದ ಬಳಿಕ ತಕ್ಷಣವೇ ಕಾರ್ಯಪ್ರವೃತ್ತರಾದ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಅಳಿಯ, ಕಾಂಗ್ರೆಸ್‌ನ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ ಅವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರವಂತೆ ಸೂಚಿಸಿದರು. ಅವರು ಈ ನಿಟ್ಟಿನಲ್ಲಿ ಸಕಲ ಪ್ರಯತ್ನವನ್ನು ಮಾಡುತ್ತಿರುವಾಗಲೇ ಬಿಜೆಪಿಯಿಂದ ಶೆಟ್ಟರ್‌ಗೆ ಟಿಕೆಟ್ ಕೈತಪ್ಪಿತ್ತು. ಆಗ ಅವರ ಮಾಸ್ಟರ್ ಪ್ಲ್ಯಾನ್ ಮಾಡುವ ಲಕ್ಷ್ಮಿ ಹೆಬ್ಬಾಳ್ಕರ್, ಅಳಿಯನ ಮೂಲಕ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತಂದರು. ಈ ಮೂಲಕ ಲಿಂಗಾಯತ ಮತ ಕ್ರೋಢೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.
ದೇಶ
NITI Aayog Meeting: ನೀತಿ ಆಯೋಗದ ಸಭೆಗೆ ಸಿದ್ದು ಸೇರಿ 10 ಸಿಎಂಗಳು ಗೈರು; ರಾಜ್ಯಗಳಿಗೆ ನಷ್ಟವೇನು?
NITI Aayog Meeting: ಕೇಂದ್ರ ಸರ್ಕಾರದ ಮೇಲಿನ ಮುನಿಸು, ಆಕ್ರೋಶದಿಂದಾಗಿ ನೀತಿ ಆಯೋಗದ ಸಭೆಗೆ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಆದರೆ, ಸಭೆಗೆ ಗೈರಾಗುವುದರಿಂದ ರಾಜ್ಯಗಳಿಗೇ ನಷ್ಟ ಎನ್ನಲಾಗುತ್ತಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಎಂಟನೇ ಗವರ್ನಿಂಗ್ ಸಮಿತಿ ಸಭೆ (Governing Council Meeting) ನಡೆದಿದ್ದು, ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದ ವಿರುದ್ಧದ ಆಕ್ರೋಶ, ಮುನಿಸಿನಿಂದಾಗಿ 10 ರಾಜ್ಯಗಳ ಮುಖ್ಯಮಂತ್ರಿಗಳು ಸಭೆಗೆ ಗೈರಾಗಿದ್ದಾರೆ. ಆದರೆ, ಅಭಿವೃದ್ಧಿ ದೃಷ್ಟಿಯಿಂದ ಮಹತ್ವ ಪಡೆದಿರುವ ಸಭೆಗೆ ಸಿಎಂಗಳು ಗೈರಾಗಿರುವುದು ಆಯಾ ರಾಜ್ಯಗಳಿಗೇ ನಷ್ಟ ಎಂದು ವಿಶ್ಲೇಷಿಸಲಾಗುತ್ತಿದೆ.
ನೀತಿ ಆಯೋಗದ ಸಭೆಯಲ್ಲಿ ದೇಶದ ಅಭಿವೃದ್ಧಿಯ ದೃಷ್ಟಿಯಿಂದ 100 ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲಾಗಿದೆ. ಎಂಎಸ್‌ಎಂಇ, ಮೂಲ ಸೌಕರ್ಯ, ಹೂಡಿಕೆ, ಮಹಿಳಾ ಸಬಲೀಕರಣ, ಆರೋಗ್ಯ, ಕೌಶಲಾಭಿವೃದ್ಧಿ ಸೇರಿ ವಿವಿಧ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಕೆಲವು ರಾಜ್ಯಗಳು ಕೂಡ ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿವೆ. ಏಳಿಗೆ ದಿಸೆಯಲ್ಲಿಯೇ ಪ್ರಮುಖ ತೀರ್ಮಾನಗಳನ್ನೂ ತೆಗೆದುಕೊಳ್ಳಲಾಗಿದೆ. ಈಗ ಗೈರಾದ ರಾಜ್ಯಗಳಿಗೆ ಈ ವಿಷಯಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ. ತೀರ್ಮಾನಗಳ ಜಾರಿಗೆ ಕಷ್ಟವಾಗಲಿದೆ ಎನ್ನಲಾಗುತ್ತಿದೆ.
🎥Visuals of the @NITIAayog Governing Council meeting underway pic.twitter.com/KihqOZ36ZP
— PIB India (@PIB_India) May 27, 2023
ಗೈರಾದ ಸಿಎಂಗಳು ಯಾರು? ಏಕೆ?
ದೆಹಲಿಯಲ್ಲಿ ಆಡಳಿತ ಸೇವೆಗಳ ಮೇಲಿನ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಗೆ ಹಾಜರಾಗಿಲ್ಲ. ಇನ್ನು, ಕೇಂದ್ರದಿಂದ ಅನುದಾನ ಸಿಗುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಕೂಡ ಗೈರಾಗಿದ್ದಾರೆ. ಕರ್ನಾಟಕದಲ್ಲಿ ಸಚಿವರ ಪ್ರಮಾಣವಚನ, ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬೇರೆ ಕಾರ್ಯಕ್ರಮದಿಂದಾಗಿ ಒಡಿಶಾ ಸಿಎಂ ನವೀನ್ ಪಾಟ್ನಾಯಕ್, ಕೇಂದ್ರದ ಮೇಲಿನ ಅಸಮಾಧಾನದಿಂದಾಗಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್ ಕುಮಾರ್, ತೆಲಂಗಾಣದ ಕೆ.ಚಂದ್ರಶೇಖರ ರಾವ್ ಹಾಗೂ ಯಾವುದೇ ಕಾರಣ ನೀಡದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಪಾಲ್ಗೊಂಡಿಲ್ಲ.
ಇದನ್ನೂ ಓದಿ: NITI Aayog Meeting: ಕೇಂದ್ರಕ್ಕೆ ಬಾಯ್ಕಾಟ್ ಬಿಸಿ; ದೀದಿ ಬಳಿಕ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಕೇಜ್ರಿವಾಲ್
ಉದ್ಯೋಗ
ISRO Recruitment 2023 : ಇಸ್ರೊದಲ್ಲಿ ವಿಜ್ಞಾನಿಯಾಗಬೇಕೇ? ಈಗ ಒದಗಿ ಬಂದಿದೆ ಅವಕಾಶ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 303 ಸೈಂಟಿಸ್ಟ್/ಎಂಜಿನಿಯರ್-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದ್ದು ಈ ನೇಮಕದ ಮಾಹಿತಿ ಇಲ್ಲಿದೆ.
ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯ ಸಾಧನೆ ಮಾಡುತ್ತಿರುವ ನಮ್ಮ ದೇಶದ ಹೆಮ್ಮೆಯ ʻಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆʼ (ಇಸ್ರೊ) 303 ಸೈಂಟಿಸ್ಟ್/ಎಂಜಿನಿಯರ್-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದೆ.
ಮುಖ್ಯವಾಗಿ ಉಪಗ್ರಹಗಳ ನಿರ್ಮಾಣ, ಉಪಗ್ರಹಗಳ ಉಡಾವಣೆ, ಬಾಹ್ಯಾಕಾಶದಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿರುವ ಇಸ್ರೊ, ಗ್ರೂಪ್ ʻಎʼಗೆ ಸೇರಿದ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಇ/ಬಿಟೆಕ್ ಮಾಡಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯಾವೆಲ್ಲಾ ಹುದ್ದೆಗಳಿಗೆ ನೇಮಕ?
1. ಸೈಂಟಿಸ್ಟ್/ಎಂಜಿನಿರ್-ಎಸ್‌ಸಿ (ಎಲೆಕ್ಟ್ರಾನಿಕ್ಸ್) – 90 ಹುದ್ದೆ
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
2. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಮೆಕ್ಯಾನಿಕಲ್)- 160 ಹುದ್ದೆ
ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
3. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್ ಸೈನ್ಸ್)- 47 ಹುದ್ದೆ
ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
4. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಎಲೆಕ್ಟ್ರಾನಿಕ್ಸ್)- 2 ಹುದ್ದೆ (Autonomous Body)
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
5. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್ ಸೈನ್ಸ್)- 01 ಹುದ್ದೆ (Autonomous Body)
ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
ಮಾಹಿತಿ ಪಡೆಯಲು ಇ-ಮೇಲ್ ವಿಳಾಸ: [email protected]
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: www.isro.gov.in
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ.
ವಯೋಮಿತಿ ಎಷ್ಟು?
ಈ ಎಲ್ಲ ಹುದ್ದೆಗಳಿಗೂ ಗರಿಷ್ಠ ವಯೋಮಿತಿ 28 ವರ್ಷ. ವಯೋಮಿತಿಯನ್ನು ದಿನಾಂಕ 14-06-2023ಕಕ್ಕೆ ಲೆಕ್ಕ ಹಾಕಲಾಗುತ್ತದೆ.
ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ.
ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಒಂದು ವೇಳೆ ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಎಸ್‌ಬಿಐ ಶಾಖೆಗಳ ಮೂಲಕವೂ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ಅಭ್ಯರ್ಥಿಗಳು ಈ ಮೇಲಿನ ಯಾವುದಾದರೂ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆದರೆ ಒಂದೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.
ನೇಮಕ ಹೇಗೆ?
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಿರುತ್ತದೆ. ಪರೀಕ್ಷೆಯ ಕುರಿತು ಅಭ್ಯರ್ಥಿಯ ಇ-ಮೇಲ್ ವಿಳಾಸಕ್ಕೆ ಮಾಹಿತಿ ನೀಡಲಾಗುತ್ತದೆ.
ಅಬ್ಜೆಕ್ಟೀವ್ ಮಾದರಿಯಲ್ಲಿ ಲಿಖಿತ ಪರೀಕ್ಷೆಯು ನಡೆಯಲಿದ್ದು, ಪ್ರಶ್ನೆ ಪತ್ರಿಕೆಯು ಎರಡು ಭಾಗಗಳನ್ನು ಒಳಗೊಂಡಿರಲಿದೆ. 120 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.
ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ5 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ20 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
Live News8 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ20 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕ್ರಿಕೆಟ್21 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ19 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ದೇಶ24 hours ago
9 Saal 9 Sawaal: 9 ವರ್ಷದ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಕೇಳಿದ 9 ಪ್ರಶ್ನೆಗಳು ಯಾವವು?; ’ಏಕೆ’ಗಳ ಸುರಿಮಳೆ!