ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ನಲ್ಲಿ (Union Budget 2024) ಕರ್ನಾಟಕದ ಜನತೆಗೆ ‘ಚೊಂಬು’ ಕೊಟ್ಟಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಜೆಟ್ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾಗಿರುವ ಹೊರತಾಗಿಯೂ ತಮ್ಮ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಬೆಂಗಳೂರಿನವರಾಗಿದ್ದು, ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ. ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಅವರು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಭರಪೂರ ಅನುದಾನ ನೀಡಿದ್ದಾರೆ. ಅವರು ತಮ್ಮ ಮೈತ್ರಿಯ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದಾರೆ. ಹೀಗಾಗಿ ಇಂಡಿಯಾ ಮೈತ್ರಿಕೂಟ ಇರುವ ರಾಜ್ಯಗಳಿಗೆ ಅನ್ಯವಾಯವಾಗಿದೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದ ಜನರ ಬಗ್ಗೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದೆ. ಇದರ ಜೆತಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬಜೆಟ್ ಅನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ‘ಕುರ್ಚಿ ಉಳಿಸುವ ಕಸರತ್ತು’ ಎಂದು ಹೇಳಿದ್ದಾರೆ.
ಜೆಟ್ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಈ ಕಲ್ಪನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯ ನಕಲು ಎಂದು ಹೇಳಿದ್ದಾರೆ, ಚುನಾವಣಾ ಫಲಿತಾಂಶದ ನಂತರ ಹಣಕಾಸು ಸಚಿವರು ಕಾಂಗ್ರೆಸ್ನ ಲೋಕಸಭಾ ಪ್ರಣಾಳಿಕೆಯನ್ನು ಓದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ 30ನೇ ಪುಟದಲ್ಲಿ ವಿವರಿಸಿರುವ ಉದ್ಯೋಗ-ಸಂಬಂಧಿತ ಪ್ರೋತ್ಸಾಹ ಧನವನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಟಿಎಂಸಿ ಹೇಳಿದ್ದೇನು?
ಪಶ್ಚಿಮ ಬಂಗಾಳದ ಪ್ರತಿವರ್ಷ ಪ್ರವಾಹವನ್ನು ಎದುರಿಸುತ್ತಿದ್ದರೂ ಪಶ್ಚಿಮ ಬಂಗಾಳಕ್ಕೆ ಪ್ರವಾಹ ಪರಿಹಾರ ಕಾರ್ಯಕ್ರಮವನ್ನು ಘೋಷಿಸಿಲ್ಲ. ಟಿಎಂಸಿ ಸಂಸದ ಸಾಕೇತ್ ಗೋಖಲೆ ಮಾತನಾಡಿ ಕೇಂದ್ರವು ಉದ್ದೇಶಪೂರ್ವಕವಾಗಿ ಬಂಗಾಳದ ಜನರನ್ನು ನಿರ್ಲಕ್ಷಿಸುತ್ತಿದೆ ಮತ್ತು ಹೊರಹಾಕುತ್ತಿದೆ ಎಂದು ಆರೋಪಿಸಿದರು.
ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ, ಮಾತನಾಡಿ, ಬಿಹಾರಕ್ಕೆ ನೆರವು ಅಗತ್ಯವಿತ್ತು. ಅದಕ್ಕೆ ಬೇಡಿಕೆಯೂ ಇತ್ತು.
ಆಂಧ್ರಪ್ರದೇಶಕ್ಕೂ ನೀಡಿರುವುದು ಸರಿಯಾಗಿದೆ. ಆದರೆ ತೆಲಂಗಾಣ, ಪಂಜಾಬ್ ಮತ್ತು ಪಶ್ಚಿಮ ಬಂಗಾಳಕ್ಕೆ ನೀವು ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಪಂಜಾಬ್ ನಾಯಕರ ಪ್ರತಿಭಟನೆ
#WATCH | Delhi | Members of Parliament from Punjab protest alleging Punjab ignored in allocation of funds in Union Budget 2024 pic.twitter.com/GIJuAiok4J
— ANI (@ANI) July 23, 2024
ಕೇಂದ್ರ ಬಜೆಟ್ 2024 ರಲ್ಲಿ ಕೇಂದ್ರ ಸರ್ಕಾರವು ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಪಂಜಾಬ್ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ಪಂಜಾಬ್ ಕುರಿತು ತಾರತಮ್ಯ ನಿಲ್ಲಿಸಬೇಕು ಎಂದು ಆರೋಪಿಸಿದರು.
ಬಿಹಾರ, ಆಂಧ್ರ ದೊಡ್ಡ ಫಲಾನುಭವಿ
ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಕ್ರಮವಾಗಿ 26,000 ಕೋಟಿ ಮತ್ತು 15,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಬಿಹಾರ ಮುಖ್ಯಮಂತ್ರಿ ನೇತೃತ್ವದ ಜನತಾದಳ (ಯುನೈಟೆಡ್) ಕೇಂದ್ರದಲ್ಲಿ ಬಿಜೆಪಿಯ ಪ್ರಮುಖ ಮಿತ್ರಪಕ್ಷಗಳಾಗಿವೆ. ಆಂಧ್ರಪ್ರದೇಶ ಮತ್ತು ಬಿಹಾರದ ರಾಜಕೀಯ ಪಕ್ಷಗಳು 2014 ರಿಂದ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿವೆ.
ಇದನ್ನೂ ಓದಿ: Union Budget 2024 : ಬಜೆಟ್ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!
ಹಿಮಾಚಲ, ಅಸ್ಸಾಂ, ಉತ್ತರಾಖಂಡಕ್ಕೆ ಪ್ರವಾಹ ಪರಿಹಾರ
ಹಲವಾರು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಕ್ರಮಗಳು ಮತ್ತು ನೀರಾವರಿ ಯೋಜನೆಗಳನ್ನು ಹೆಚ್ಚಿಸಲು. ಸಚಿವೆ ನಿರ್ಮಲಾ ಸೀತಾರಾಮನ್ 11,500 ಕೋಟಿ ರೂ.ಗಳ ಸಮಗ್ರ ಆರ್ಥಿಕ ಬೆಂಬಲ ಯೋಜನೆ ಘೋಷಿಸಿದ್ದಾರೆ. ಬಿಹಾರವು ಆಗಾಗ್ಗೆ ಪ್ರವಾಹದಿಂದ ಬಳಲುತ್ತಿದೆ. ಪ್ರತಿ ವರ್ಷ ಪ್ರವಾಹದಿಂದ ತತ್ತರಿಸುವ ಅಸ್ಸಾಂ, ಪ್ರವಾಹ ನಿರ್ವಹಣೆ ಮತ್ತು ಸಂಬಂಧಿತ ಯೋಜನೆಗಳಿಗೆ ನೆರವು ಪಡೆಯಲಿದೆ ಎಂದು ಹೇಳಿದ್ದಾರೆ.
ಕಂಗಾನಾ ಏನಂದರು?
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿರುವ ಹಿಮಾಚಲ ಪ್ರದೇಶಕ್ಕೆ ಆರ್ಥಿಕ ನೆರವು ನೀಡಿರುವುದನ್ನು ಶ್ಲಾಘಿಸಿದ ಮಂಡಿ ಸಂಸದೆ ಕಂಗನಾ ರಣಾವತ್ , “ಹಿಮಾಚಲ ಪ್ರದೇಶಕ್ಕೆ ಪರಿಹಾರ ನಿಧಿಯ ಭರವಸೆ ನೀಡಲಾಗಿದೆ. ಬಜೆಟ್ ಬಗ್ಗೆ ನಮಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.