ಬಳ್ಳಾರಿ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಏರ್ ಕಂಡೀಷನರ್ ಯಂತ್ರ (AC Blast) ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡಿದೆ. ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ಘಟನೆ ನಡೆದಿದೆ. ಬಳ್ಳಾರಿಯ ತೇರು ಬೀದಿಯ ರಸ್ತೆಯಲ್ಲಿ ಇರುವ ಕಲ್ಯಾಣ ಜ್ಯುವೆಲರ್ಸ್ನಲ್ಲಿ ಶಾ್ಟ್ ಸರ್ಕೀಟ್ನಿಂದಾಗಿ ಎಸಿ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್ ಸರ್ಕೀಟ್ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.
ಗಾಯಗಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲಿ ದಟ್ಟ ಹೊಗೆ ಆವರಿಸಿತ್ತು.
ಪೊಲೀಸ್ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್ ಕಪಾಳಕ್ಕೆ ಹೊಡೆದ ಮಹಿಳೆ
ಬೆಂಗಳೂರು: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ (Assault Case) ಮಾಡಿದ್ದಾಳೆ. ಸೈಟು ವಿಚಾರಕ್ಕೆ (Site Dispute) ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು. ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ.
ಇದನ್ನೂ ಓದಿ: Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ
ನಿನ್ನೆ ಬುಧವಾರ ಸಂಜೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು.
ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.