CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ - Vistara News

ಪ್ರಮುಖ ಸುದ್ದಿ

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

CM Siddaramaiah: 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಂಪುಟ ನಿರ್ಧರಿಸಲಿದೆ.

VISTARANEWS.COM


on

CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ (Cabinet meeting) ನಡೆಯಲಿದ್ದು, ಗೆಜೆಟೆಡ್‌ ಹುದ್ದೆಗಳ ಪರೀಕ್ಷೆ ಸೇರಿದಂತೆ ಹಲವು ವಿಷಯಗಳು ಅಜೆಂಡಾದಲ್ಲಿವೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಂಪುಟ ನಿರ್ಧರಿಸಲಿದೆ.

KIADBಯು ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್‌ಗೆ ಹಂಚಿಕೆ ಮಾಡಲು ಮೊತ್ತಕ್ಕೆ ರಿಯಾಯತಿ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0. ʼಉತ್ಕೃಷ್ಟತಾ ಕೇಂದ್ರʼವನ್ನು ರೂ. 16.00 ಕೋಟೆಗಳ ಅಂದಾಜು ಮೊತ್ತದಲ್ಲಿ (CAPEX- ರೂ. 7.00 ಕೋಟಿಗಳು ಮತ್ತು OPEX-ರೂ. 9.00 ಕೋಟಿಗಳು) ಅನುಮೋದನೆ ನೀಡುವ ಬಗ್ಗೆ ಚರ್ಚಿಸಲಾಗುತ್ತದೆ.

ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲೂಕುಗಳಲ್ಲಿ ತಲಾ ಒಂದು ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು ರೂ. 105.00 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸಂಪುಟ ನಿರ್ಧರಿಸಲಿದೆ. ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ಸಂಬಂಧಿಸಿದಂತೆ ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ಅನುಮೋದನೆ ನೀಡುವ ಬಗ್ಗೆಯೂ ಚರ್ಚಿಸಲಿದೆ.

ನಾಲ್ಕನೇ ಅಧಿವೇಶನದಲ್ಲಿ ಏನೇನಾಯ್ತು?

16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನದ ನಡವಳಿಕೆಗಳು ಹೀಗಿವೆ:

8 ದಿನ – 37 ಗಂಟೆ ಕಾರ್ಯಕಲಾಪ ನಡೆಸಲಾಗಿದೆ
ಪೂರಕ ಅಂದಾಜುಗಳ ಮಂಡನೆ
ಲೆಕ್ಕಪರಿಶೋಧಕರ ವರದಿ ಮಂಡನೆ
ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜುಗಳ ಸಮಿತಿ, ಅನುಸೂಚಿತ ಜಾತಿ,ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ
12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದೆ
ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ
ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ
117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ
170 ಗಮನ ಸೆಳೆಯುವ ಸೂಚನೆಗಳಿಗೆ ಉತ್ತರ ನೀಡಲಾಗಿದೆ
ನಾಲ್ಕು ನಿರ್ಣಯ ಪಾಸ್
ಒನ್ ನೇಷನ್ ಒನ್ ಎಲೆಕ್ಷನ್‌ಗೆ ವಿರೋಧ
1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಿಸಬೇಕು
ನೀಟ್ ಪರೀಕ್ಷೆ ರದ್ದು
ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡಿಸುವ ನಿರ್ಣಯ

ಇದನ್ನೂ ಓದಿ: CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Kargil Vijay Diwas 2024: ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

VISTARANEWS.COM


on

Kargil Vijay Diwas 2024
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದಾರೆ.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಅಗ್ನಿಪಥ್‌ ಯೋಜನೆ ಬಗ್ಗೆ ಆರೋಪಕ್ಕೆ ಪ್ರಧಾನಿ ತಿರುಗೇಟು

ಸೈನ್ಯವನ್ನು ನಿರಂತರವಾಗಿ ಯುದ್ಧಕ್ಕೆ ಸಜ್ಜುಗೊಳಿಸುವುದು ಅಗ್ನಿಪಥ್‌ನ ಗುರಿಯಾಗಿದೆ. ದುರದೃಷ್ಟವಶಾತ್, ಕೆಲವರು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯವನ್ನು ರಾಜಕೀಯದ ವಿಷಯವನ್ನಾಗಿ ಮಾಡಿದ್ದಾರೆ. ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಸೇನೆಯಲ್ಲಿ ಸಾವಿರಾರು ಕೋಟಿ ಹಗರಣಗಳನ್ನು ಮಾಡಿ ನಮ್ಮ ಸೇನೆಯನ್ನು ದುರ್ಬಲಗೊಳಿಸಿದ್ದು ಇದೇ ಜನರು ಎಂದು ಕಿಡಿ ಕಾರಿದರು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading

ಪ್ರಮುಖ ಸುದ್ದಿ

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Murder in PG: ಆರೋಪಿ ಅಭಿಷೇಕ್‌ ಬಂಧನದಲ್ಲಿ ಇಟ್ಟಿದ್ದಆತನ ಪ್ರೇಯಸಿಯನ್ನು ಕೃತಿ ಕುಮಾರಿ ಬಿಡಿಸಿ ತನ್ನ ಪಿಜಿಗೆ ಕರೆತಂದಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

VISTARANEWS.COM


on

Murder in PG Case
Koo

ಬೆಂಗಳೂರು: ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ (Murder in PG) ಹೋದ ಕೃತಿ ಕುಮಾರಿ ಮರ್ಡರ್ (Krithi Kumari Murder) ಪ್ರಕರಣದಲ್ಲಿ ಪಾತಕಿಯ ಬರ್ಬರತೆಯ ಬಗ್ಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಮರ್ಡರ್‌ (Murder Case) ಆಗಿದ್ದಾಳೆ.

ಆರೋಪಿ ಅಭಿಷೇಕ್‌ ತಾನು ಪ್ರೀತಿಸಿದವಳನ್ನು ಗೃಹ ಬಂಧನದಲ್ಲಿಟ್ಟಿದ್ದ. ಆಕೆಯನ್ನು ಕಾಪಾಡಿದ ಆಕೆಯ ಗೆಳತಿಯೇ ಜೀವ ಕಳೆದುಕೊಂಡಿದ್ದಾಳೆ. ಅಭಿಷೇಕ್‌ ಯುವತಿಯೊಬ್ಬಳೊಂದಿಗೆ ಪ್ರೀತಿಯಲ್ಲಿದ್ದ. ತನ್ನ ಪ್ರೇಯಸಿಯನ್ನು ಬಲವಂತವಾಗಿ ಬಾಡಿಗೆ ರೂಮ್‌ನಲ್ಲಿ ಇರಿಸಿಕೊಂಡಿದ್ದ. ಕೊಲೆಗೂ ಮೂರು ದಿನದ ಹಿಂದೆ ಬಾಡಿಗೆ ರೂಮ್ ಮಾಡಿ, ಆಕೆಯನ್ನು ಕರೆದೊಯ್ದು ಬಲವಂತವಾಗಿ ರೂಮ್‌ನಲ್ಲಿಟ್ಟುಕೊಂಡಿದ್ದ.

ಆದರೆ ಪ್ರೇಯಸಿ ರೂಮ್‌ನಲ್ಲಿ ಇರಲಾಗದೆ ಒದ್ದಾಡಿದ್ದಳು. ರೂಮ್‌ಮೇಟ್ ಪಿಜಿಗೆ ಬರಲಿಲ್ಲ ಏಕೆಂದು ವಿಚಾರಿಸಿದಾಗ ಕೃತಿ ಕುಮಾರಿ, ಆರೋಪಿ ಆಕೆಯನ್ನು ಕೂಡಿ ಹಾಕಿದ್ದರ ಮಾಹಿತಿಯನ್ನು ಪಡೆದುಕೊಂಡಿದ್ದಳು. ನಂತರ ಸಮಯ ನೋಡಿ ಗೆಳತಿಯನ್ನು ರೂಮ್‌ನಿಂದ ಕರೆತರಲು ಪ್ಲ್ಯಾನ್ ಮಾಡಿದ್ದು, ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ಪಿಜಿಗೆ ಕರೆತಂದಿದ್ದಳು. ಕೊಲೆ‌ ನಡೆದ ಹಿಂದಿನ ದಿನ ಗೃಹಬಂಧನದಲ್ಲಿದ್ದ ಗೆಳತಿಯನ್ನು ಕೃತಿ ಪಾರುಮಾಡಿದ್ದಳು. ಈಕೆಯ ಈ ಮಾನವೀಯ ನಡತೆಯೇ ಆಕೆಯ ಜೀವ ತೆಗೆದಿದೆ.

ಈ ವಿಚಾರ ಗೊತ್ತಾಗಿದ್ದೇ ತಡ ಕೃತಿ ಮೇಲೆ ಆರೋಪಿ ಅಭಿಷೇಕ್‌ ತೀವ್ರವಾಗಿ ಕೋಪಗೊಂಡಿದ್ದ. ತನ್ನ ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ಕೋಪಗೊಂಡು ಮಂಗಳವಾರ ರಾತ್ರಿ‌ 11.10ರ ಸುಮಾರಿಗೆ ಏಕಾಏಕಿ ಪಿಜಿಗೆ ಹೋಗಿದ್ದ. ಒಳ ಹೋದವನೇ ಸೀದಾ ಕೃತಿ ಕುಮಾರಿಗೆ ಚಾಕುವಿನಿಂದ ಯದ್ವಾತದ್ವಾ ಇರಿದು ಎಸ್ಕೇಪ್ ಆಗಿದ್ದಾನೆ.

ಸದ್ಯ ಹೊರ ರಾಜ್ಯಕ್ಕೆ ಆರೋಪಿ ಅಭಿಷೇಕ್‌ ಪರಾರಿಯಾಗಿರುವ ಶಂಕೆ ಇದೆ. ಮೂಲತಃ ಮಧ್ಯಪ್ರದೇಶ ಮೂಲದವನು ಆಗಿರುವ ಆರೋಪಿ ಅಭಿಷೇಕ್, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ. ಕೊಲೆಯಾದ ಕೃತಿ ಕುಮಾರಿ ಬಿಹಾರದಾಕೆ ಎಂದು ಗೊತ್ತಾಗಿದೆ. ಸದ್ಯ ಆರೋಪಿಯ ಸ್ನೇಹಿತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೋರಮಂಗಲ ಪೊಲೀಸರು ಆರೋಪಿಯ ಬೆನ್ನು ಬಿದ್ದಿದ್ದು, ತನಿಖೆ ಮುಂದುವರಿದಿದೆ.

ಘಟನೆ ನಡೆದದ್ದು ಹೀಗೆ

ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನು ಎರಡೇ ನಿಮಿಷದಲ್ಲಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಕತ್ತನ್ನು ಕೋಳಿ ಕತ್ತಿನಂತೆ ಕೊಯಿದಿದ್ದಾನೆ. ಮೊದಲು ಪಿಜಿ ರೂಮಿನ ಬಾಗಿಲು ಬಡಿದ ಕೊಲೆಗಾರ, ಆಕೆ ಬಾಗಿಲು ತೆರೆದ ಕೂಡಲೇ ಒಳಹೋಗಿದ್ದಾನೆ. ನಂತರ ಕೆಲವು ಸೆಕೆಂಡ್‌ನಲ್ಲಿ ಆಕೆ ಆತನಿಂದ ಪಾರಾಗಲು ಹೊರಗೋಡಿ ಬಂದಿದ್ದು, ಆಕೆಯನ್ನು ಕಾರಿಡಾರ್‌ನಲ್ಲೇ ತಡೆದ ಪಾತಕಿ ಮನಬಂದಂತೆ ಇರಿದಿದ್ದಾನೆ.

ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಆರ್ತನಾದ ಮಾಡಿದರೂ ಪಿಜಿಯಲ್ಲಿದ್ದ ಮೂವರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ. ಮಾನವೀಯತೆಯನ್ನೇ ಮರೆತಂತೆ ವರ್ತಿಸಿದ ಇವರು ಕೃತಿ ಕುಮಾರಿಯ ಹತ್ತಿರ ಕೂಡ ಹೋಗಿಲ್ಲ. ಕೈಯಲ್ಲಿದ್ದ ಮೊಬೈಲ್ ಫೋನ್‌ ನೋಡ್ತಾ ಆಚೆ ಹೋಗಿದ್ದಾರೆ. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Continue Reading

ಕ್ರೀಡೆ

Paris Olympics: ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಉದ್ಘಾಟನಾ ಸಮಾರಂಭ ಎಷ್ಟು ಗಂಟೆಗೆ ಆರಂಭ?

Paris Olympics: ಒಟ್ಟು 12 ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಾಗಿಸಲಾಗಿದೆ. ಫ್ರೆಂಚ್‌ ಸಂಗೀತ ಸೇರಿದಂತೆ ಭಾರತದ ಶಾಸ್ತ್ರೀಯ ಸಂಗೀತ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಪ್ರತಿಷ್ಠಿತ ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕ್ರೀಡಾಕೂಟದ ಉದ್ಘಾಟನ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಫ್ರಾನ್ಸ್​ನ ಮಹಾನದಿ ಸೀನ್ ಮೇಲೆ ಉದ್ಘಾಟನ ಸಮಾರಂಭ ನಡೆಯಲಿದೆ. ಭಾರತದ ಧ್ವಜಧಾರಿಯಾಗಿ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು ಅವರು ಟೇಬಲ್ ಟೆನಿಸ್ ಪಟು ಶರತ್ ಕಮಾಲ್ ಜತೆ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಸಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ.

ನದಿಯ ಮೇಲೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸುಮಾರು 3,000 ಮಂದಿ ಕಲಾವಿದರು ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಒಟ್ಟು 12 ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಾಗಿಸಲಾಗಿದೆ. ಫ್ರೆಂಚ್‌ ಸಂಗೀತ ಸೇರಿದಂತೆ ಭಾರತದ ಶಾಸ್ತ್ರೀಯ ಸಂಗೀತ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಉದ್ಘಾಟನ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಸುಮಾರು 5 ಲಕ್ಷ ಮಂದಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಫ್ರಾನ್ಸ್‌ ಕಾಲಮಾನದಂತೆ ಸಾಯಂಕಾಲ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಭಾರತದಲ್ಲಿ ರಾತ್ರಿ 11 ಗಂಟೆಗೆ ನೇರಪ್ರಸಾರವಾಗಲಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನ ಅಧಿಕೃತ ಪ್ರಸಾರ ಮತ್ತು ಡಿಜಿಟಲ್‌ ಪಾಲುದಾರರಾಗಿರುವ ವಯಾಕಾಮ್ 18 ಜಿಯೋ ಸಿನಿಮಾ ಮೂಲಕ ಒಲಿಂಪಿಕ್ಸ್‌ ಸ್ಪರ್ಧೆಯನ್ನು ನೇರಪ್ರಸಾರ ಮಾಡುತ್ತಿದೆ. ಸ್ಪೋಟ್ಸ್‌-18 ಚಾನಲ್‌ನಲ್ಲೂ ಇದು ನೇರಪ್ರಸಾರವಾಗಲಿದೆ.

ಇದನ್ನೂ ಓದಿ Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಒಲಿಂಪಿಕ್ಸ್‌ ವೇಳೆ ನಡೆಯುವ ಪರೇಡ್‌ನ‌ಲ್ಲಿ ಗ್ರೀಸ್‌ ದೇಶಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಆಧುನಿಕ ಒಲಿಂಪಿಕ್ಸ್‌ ಕ್ರೀಡೆಗಳು ಮೊದಲು ಗ್ರೀಸ್‌ನಲ್ಲಿ ಆರಂಭವಾದ ಕಾರಣ ಗೌರವಾರ್ಥವಾಗಿ ಗ್ರೀಸ್‌ಗೆ ಆದ್ಯತೆ ನೀಡಲಾಗುತ್ತದೆ. ಉಳಿದಂತೆ ಆಯಾ ದೇಶಗಳ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಭಾರೀ ಭದ್ರತೆ


ಒಲಿಂಪಿಕ್ಸ್‌ ವೇಳೆಯಲ್ಲಿ ಸಂಭಾವ್ಯ ದಾಳಿಗಳು ನಡೆಯುವ ಸಾಧ್ಯತೆ ಇರುವುದರಿಂದ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಕೂಡ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ವಿಡಿಯೊದಲ್ಲಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಉದ್ಘಾಟನಾ ಕಾರ್ಯಕ್ರಮವೊಂದಕ್ಕೇ 35000 ಮಂದಿ ಗುಪ್ತಚರರನ್ನು ನೇಮಕ ಮಾಡಲಾಗಿದೆ.

Continue Reading

ಪ್ರಮುಖ ಸುದ್ದಿ

Rain in Karnataka: ಬೆಳಗಾವಿಯಲ್ಲಿ ನಗರದೊಳಗೆ ಬಂದ ನದಿಗಳು, ಮನೆ ಖಾಲಿ ಮಾಡಿದ ಜನ

Rain in Karnataka: ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 30 ಸಂಪರ್ಕ ಸೇತುವೆಗಳು ಜಲಾವೃತವಾಗಿವೆ. ಜಿಲ್ಲೆಯ ಅರವತ್ತಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

VISTARANEWS.COM


on

rain in karnataka
Koo

ಬೆಳಗಾವಿ/ಚಿಕ್ಕೋಡಿ: ಬೆಳಗಾವಿ (belagavi news) ಹಾಗೂ ಚಿಕ್ಕೋಡಿ (Chikkodi news) ಅವಳಿ ಜಿಲ್ಲೆಗಳ ಜನತೆ ಮಳೆ (Rain in Karnataka) ಹಾಗೂ ನದಿಗಳ ಅಬ್ಬರದಿಂದ ತತ್ತರಿಸಿದ್ದಾರೆ. ನದಿಗಳು ತುಂಬಿ ಹರಿಯುತ್ತಿದ್ದು (Flood situation), ಘಟಪ್ರಭಾ ನದಿಯ (Ghataprabha River) ನೀರು ಮನೆಬಾಗಿಲವರೆಗೂ ಬಂದಿರುವುದರಿಂದ ಜನತೆ ಮನೆ ತೊರೆದು ಕಾಳಜಿ ಕೇಂದ್ರಗಳ ಕಡೆ ಸಾಗಿದ್ದಾರೆ.

ಘಟಪ್ರಭಾ ನದಿಯ ನೀರು ಉಕ್ಕಿ ಬಂದು ಮನೆಯ ಬಾಗಿಲವರೆಗೂ ತಲುಪಿರುವುದರಿಂದ, ಹೆಚ್ಚಿನ ಅನಾಹುತ ಆಗದಿರಲೆಂದು ಜನ ಮನೆ ಖಾಲಿ ಮಾಡುತ್ತಿದ್ದಾರೆ. ಗೋಕಾಕದ ದನದ ಪೇಟೆಗೆ ನದಿ ನೀರು ನುಗ್ಗುತ್ತಿದೆ. ನೀರು ಹೆಚ್ಚಾಗುತ್ತಿರುವುದರಿಂದ ಜನ ಕಂಗಾಲಾಗಿದ್ದು, ಈಗಾಗಲೇ ಕೆಲವು ಶೆಡ್‌ಗಳು ನೀರಲ್ಲಿ ಮುಳುಗಿವೆ. ದನದ ಪೇಟೆ ಪಟಗುಂದಿ ಹನುಮ ಗುಡಿಗೂ ಜಲಕಂಟಕ ಎದುರಾಗಿದೆ. ಸದ್ಯ ನೀರಿನಲ್ಲಿಯೇ ಜನ ನಿತ್ಯ ಕೆಲಸಗಳಿಗಾಗಿ ಓಡಾಡುತ್ತಿದ್ದು, ಕ್ಷಣ ಕ್ಷಣಕ್ಕೂ ಘಟಪ್ರಭಾ ನದಿ ಒಳಹರಿವು ಹೆಚ್ಚಾಗುತ್ತಿದೆ. ಸದ್ಯ ನದಿ ಒಳಹರಿವು 55 ಸಾವಿರ ಕ್ಯೂಸೆಕ್ ದಾಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಪ್ತ ನದಿಗಳ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 30 ಸಂಪರ್ಕ ಸೇತುವೆಗಳು ಜಲಾವೃತವಾಗಿವೆ. ಗೋಕಾಕ್ ತಾಲೂಕಿನಲ್ಲಿ ಐದು ಸೇತುವೆಗಳು, ಮೂಡಲಗಿ ತಾಲೂಕಿನಲ್ಲಿ ಐದು ಸೇತುವೆ, ಹುಕ್ಕೇರಿ ತಾಲೂಕಿನ ಐದು, ಚಿಕ್ಕೋಡಿ ತಾಲೂಕಿನ ನಾಲ್ಕು, ನಿಪ್ಪಾಣಿ ತಾಲೂಕಿನ ನಾಲ್ಕು, ರಾಯಬಾಗ ತಾಲೂಕಿನ ಮೂರು, ಖಾನಾಪುರ ಎರಡು, ಕಾಗವಾಡ ಒಂದು, ಅಥಣಿ ಒಂದು ಸೇತುವೆ ಜಲಾವೃತವಾಗಿವೆ. ಇದರಿಂದ ಜಿಲ್ಲೆಯ ಅರವತ್ತಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ.

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ 87 ಗ್ರಾಮಗಳಿಗೆ, ಬೆಳಗಾವಿ ವ್ಯಾಪ್ತಿಯಲ್ಲಿ 35 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯಲ್ಲಿ ಬರೋಬ್ಬರಿ 122 ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಕಂಡುಬಂದಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ 45 ಬೋಟ್‌ಗಳು ಸಿದ್ಧತೆಯಲ್ಲಿವೆ. ಈಗಾಗಲೇ ಒಂದು ಎನ್‌ಡಿಆರ್‌ಎಫ್ ತಂಡ ಬೀಡುಬಿಟ್ಟಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ದೂಧಗಂಗಾ ನದಿ ಅಬ್ಬರಿಸಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ದೂಧಗಂಗಾ ನದಿ ನೀರು ಗ್ರಾಮದ ಕುರುಬರ ಗಲ್ಲಿಗೆ ನುಗ್ಗಿದೆ. ಹೀಗಾಗಿ ಜನ ಊರು ಖಾಲಿ ಮಾಡುತ್ತಿದ್ದು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ನಿನ್ನೆ ರಾತ್ರಿಯೆಲ್ಲ‌ ನಿದ್ದೆಯಿಲ್ಲದೆ ಕಂಗೆಟ್ಟ ಗಡಿ ಜಿಲ್ಲೆಯ ಜನ, ಇಂದು ಹುಣ್ಣರಗಿ ಗ್ರಾಮದಿಂದ ಸುರಕ್ಷಿತ ಸ್ಥಳಗಳತ್ತ, ಊರ ಹೊರಗಿನ ಶಾಲೆಯತ್ತ ಸಾಗುತ್ತಿದ್ದಾರೆ.

ಗೋಕಾಕ: ಮಾರ್ಕಂಡೇಯ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಯ ಅಬ್ಬರಕ್ಕೆ ಸೇತುವೆಯಲ್ಲಿ ಬಿರುಕು ಬಿಟ್ಟಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರಕ್ಕೆ ಹೊಂದಿಕೊಂಡಿರುವ ಚಿಕ್ಕೋಳಿ ಸೇತುವೆಯಲ್ಲಿ ಮೂಡಿರುವ ಬಿರುಕಿನಿಂದಾಗಿ ಜನ ಆತಂಕದಲ್ಲಿದ್ದಾರೆ. ಈ ಸೇತುವೆ ಮೇಲೆ ನಿತ್ಯ ಸಾವಿರಾರು ವಾಹನಗಳು, ಜನ ಓಡಾಡುತ್ತಾರೆ. ಇನ್ನೊಂದು ಕಡೆ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದನ್ನೂ ಓದಿ: Karnataka Rain News: ಮುಂದುವರಿದ ಮಳೆ ಅವಾಂತರ; ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

Continue Reading
Advertisement
Shekhar Home Kay Kay Menon Shares First Look
ಒಟಿಟಿ2 mins ago

Shekhar Home:  ಪತ್ತೇದಾರಿ ಕಾದಂಬರಿ ಆಧಾರಿತ ಸಿರೀಸ್‌ನಲ್ಲಿ ಅಬ್ಬರಿಸಲಿದ್ದಾರೆ ಕೇ ಕೇ ಮೆನನ್; ಫಸ್ಟ್‌ ಲುಕ್‌ ಔಟ್!‌

ಟಾಲಿವುಡ್21 mins ago

Amala Paul: ಸಮಸ್ಯೆ ಇರೋದು ಬಟ್ಟೆಯಲಲ್ಲ, ಕ್ಯಾಮೆರಾಮೆನ್‌ಗಳಲ್ಲಿ ಎಂದು ಟ್ರೋಲಿಗರ ಬಾಯಿ ಮುಚ್ಚಿಸಿದ ಅಮಲಾ ಪೌಲ್!

ದೇಶ32 mins ago

Madras High Court: ವೇಶ್ಯಾವಾಟಿಕೆ ಅಡ್ಡಕ್ಕೆ ರಕ್ಷಣೆ ಕೋರಿ ವಕೀಲನಿಂದ ಅರ್ಜಿ; ಹೈಕೋರ್ಟ್‌ ಫುಲ್‌ ಗರಂ

Paris Olympics India schedule
ಕ್ರೀಡೆ34 mins ago

Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Drugs Seized
ಬೆಂಗಳೂರು50 mins ago

Drugs Seized : ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

Most Beautiful woman Science reveals Anya Taylor-Joy
ಬಾಲಿವುಡ್1 hour ago

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Kargil Vijay Diwas 2024
ದೇಶ1 hour ago

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Murder in PG Case
ಪ್ರಮುಖ ಸುದ್ದಿ1 hour ago

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Paris Olympics 2024 Boxing Draw
ಕ್ರೀಡೆ1 hour ago

Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

Salman Khan House Gangster's 9-Minute Speech To Shooters Before Attack
ಬಾಲಿವುಡ್1 hour ago

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್23 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ24 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌