Site icon Vistara News

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

CM Siddaramaiah

ಬೆಂಗಳೂರು: ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ (Cabinet meeting) ನಡೆಯಲಿದ್ದು, ಗೆಜೆಟೆಡ್‌ ಹುದ್ದೆಗಳ ಪರೀಕ್ಷೆ ಸೇರಿದಂತೆ ಹಲವು ವಿಷಯಗಳು ಅಜೆಂಡಾದಲ್ಲಿವೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷಾ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಂಪುಟ ನಿರ್ಧರಿಸಲಿದೆ.

KIADBಯು ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್‌ಗೆ ಹಂಚಿಕೆ ಮಾಡಲು ಮೊತ್ತಕ್ಕೆ ರಿಯಾಯತಿ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0. ʼಉತ್ಕೃಷ್ಟತಾ ಕೇಂದ್ರʼವನ್ನು ರೂ. 16.00 ಕೋಟೆಗಳ ಅಂದಾಜು ಮೊತ್ತದಲ್ಲಿ (CAPEX- ರೂ. 7.00 ಕೋಟಿಗಳು ಮತ್ತು OPEX-ರೂ. 9.00 ಕೋಟಿಗಳು) ಅನುಮೋದನೆ ನೀಡುವ ಬಗ್ಗೆ ಚರ್ಚಿಸಲಾಗುತ್ತದೆ.

ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲೂಕುಗಳಲ್ಲಿ ತಲಾ ಒಂದು ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು ರೂ. 105.00 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಸಂಪುಟ ನಿರ್ಧರಿಸಲಿದೆ. ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ಸಂಬಂಧಿಸಿದಂತೆ ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ಅನುಮೋದನೆ ನೀಡುವ ಬಗ್ಗೆಯೂ ಚರ್ಚಿಸಲಿದೆ.

ನಾಲ್ಕನೇ ಅಧಿವೇಶನದಲ್ಲಿ ಏನೇನಾಯ್ತು?

16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನದ ನಡವಳಿಕೆಗಳು ಹೀಗಿವೆ:

8 ದಿನ – 37 ಗಂಟೆ ಕಾರ್ಯಕಲಾಪ ನಡೆಸಲಾಗಿದೆ
ಪೂರಕ ಅಂದಾಜುಗಳ ಮಂಡನೆ
ಲೆಕ್ಕಪರಿಶೋಧಕರ ವರದಿ ಮಂಡನೆ
ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜುಗಳ ಸಮಿತಿ, ಅನುಸೂಚಿತ ಜಾತಿ,ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ
12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದೆ
ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ
ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ
117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ
170 ಗಮನ ಸೆಳೆಯುವ ಸೂಚನೆಗಳಿಗೆ ಉತ್ತರ ನೀಡಲಾಗಿದೆ
ನಾಲ್ಕು ನಿರ್ಣಯ ಪಾಸ್
ಒನ್ ನೇಷನ್ ಒನ್ ಎಲೆಕ್ಷನ್‌ಗೆ ವಿರೋಧ
1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಿಸಬೇಕು
ನೀಟ್ ಪರೀಕ್ಷೆ ರದ್ದು
ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡಿಸುವ ನಿರ್ಣಯ

ಇದನ್ನೂ ಓದಿ: CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

Exit mobile version