Site icon Vistara News

ವಿಸ್ತಾರ TOP 10 NEWS : ಬಾಡಿಗೆದಾರನಿಗೆ ಇಲ್ಲ ಫ್ರೀ ಕರೆಂಟ್​, ಬಿಜೆಪಿಗೆ ಆರ್​ಎಸ್​ಎಸ್ ಪಾಠ ಇತ್ಯಾದಿ ಪ್ರಮುಖ ಸುದ್ದಿಗಳಿವು

Vistara top 10

#image_title

1. ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್‌?
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲ ಜನತೆಗೂ 200 ಯೂನಿಟ್‌ ವಿದ್ಯುತ್‌ ಉಚಿತ (Free Electricity) ಎಂದು ಘೋಷಣೆ ಮಾಡಿದ್ದರು. ಕೊನೆಗೆ ವಾರ್ಷಿಕ ಸರಾಸರಿ ಬಳಕೆ ಮೇಲೆ ಶೇಕಡಾ 10ರಷ್ಟು ಏರಿಕೆ ಮಾಡಿ ವಿದ್ಯುತ್‌ ಬಿಲ್‌ ನೀಡುವುದಾಗಿ ಹೇಳಿದ್ದರು. ಈಗ ಗೃಹ ಜ್ಯೋತಿ (Gruha Jyoti) ಮಾರ್ಗಸೂಚಿ ಬಿಡುಗಡೆಯಾಗಿದ್ದು, ಬಾಡಿಗೆದಾರನಿಗೆ ಈ ಗ್ಯಾರಂಟಿ (Congress Guarantee) ಭಾಗ್ಯ ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದೇಶದಲ್ಲಿರುವ ಷರತ್ತನ್ನು ನೋಡಿದರೆ ಗೊಂದಲ ಸೃಷ್ಟಿಯಾಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

2. ಉಚಿತ ಬಸ್‌ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್‌ನೊಂದಿಗೆ ಚಾಲನೆ!
ರಾಜ್ಯದ ಎಲ್ಲ ಮಹಿಳೆಯರಿಗೂ ಕಾಂಗ್ರೆಸ್‌ ಗ್ಯಾರಂಟಿ (Congress Guarantee) ಯೋಜನೆಯಂತೆ ಉಚಿತ ಬಸ್‌ ಪ್ರಯಾಣವನ್ನು ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಘೋಷಣೆ ಮಾಡಿದ ಬೆನ್ನಲ್ಲೇ ಈಗ ಅನುಮೋದನೆ ಆದೇಶವೂ ಹೊರಬಿದ್ದಿದೆ. ಜೂನ್ 11 ರಿಂದ ಜಾರಿಯಾಗಲಿರುವ ಉಚಿತ ಬಸ್‌ (Free Bus) ಪ್ರಯಾಣದ ಶಕ್ತಿ ಯೋಜನೆಯನ್ನು ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಜಾರಿ ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಆದರೆ, ಈ ಉಚಿತ ಪ್ರಯಾಣಕ್ಕೆ ಏಳು ಕಂಡೀಷನ್ ಹಾಕಿ ಯೋಜನೆಯ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

3. ಬರೀ ಮೋದಿ ಹೆಸರಿಗೆ ವೋಟ್ ಬರಲ್ಲ! ಬಿಜೆಪಿಗೆ ಆರೆಸ್ಸೆಸ್ ಮುಖವಾಣಿ ಪತ್ರಿಕೆಯಿಂದ ಫುಲ್ ಕ್ಲಾಸ್
ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವುದು ಬಿಜೆಪಿಯ ಥಿಂಕ್‌ ಟ್ಯಾಂಕ್‌ನಲ್ಲಿ ಪರ್ಯಾಯ ಯೋಚನೆಗೆ ಕಾರಣವಾಗಿದೆಯೇ? ಹೌದು, ಇಂಥದೊಂದು ಅನುಮಾನ ಬರಲು ಕಾರಣವಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಮುಖವಾಣಿಯಾಗಿರುವ ಆರ್ಗೈನಸರ್ (Organizer) ವಾರ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ. ಚುನಾವಣೆ ಗೆಲ್ಲಲು ಮೋದಿ (Modi Magic) ನಾಮಬಲ, ಹಿಂದುತ್ವವು (hindutva) ಪ್ರತಿಬಾರಿಯೂ ಕೆಲಸ ಮಾಡುವುದಿಲ್ಲ ಎಂದು ಕಟುವಾಗಿ ಟೀಕಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
ಒಡಿಶಾದ ಬಾಲಾಸೋರ್‌ ಜಿಲ್ಲೆ ಬಹನಗ ರೈಲು ನಿಲ್ದಾಣದ ಬಳಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಜನ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇನ್ನು ಎರಡು ದಿನದಿಂದ ಅಪಘಾತ ನಡೆದ ಸ್ಥಳವು ಮಸಣದಂತಾಗಿತ್ತು. ಹೆಣಗಳ ರಾಶಿ ಬಿದ್ದಿದ್ದವು. ರೈಲು ಹಳಿಗಳ ಮೇಲೆ ಬೋಗಿಗಳು ಬಿದ್ದ ಚಿತ್ರ ಭಯ ಹುಟ್ಟಿಸುವಂತಿದ್ದವು. ಆದರೆ, ಅಪಘಾತ ನಡೆದು 51 ಗಂಟೆಯಲ್ಲಿಯೇ ಚಿತ್ರಣ ಬದಲಾಗಿದ್ದು, ರೈಲು ಸಂಚಾರ ಆರಂಭವಾಗದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

5. ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌
ರಾಜ್ಯ ಸರ್ಕಾರವನ್ನು ಹಿಟ್ಲರ್‌ ಆಡಳಿತ ಅಂದರೆ ಜೈಲು ಗ್ಯಾರಂಟಿ ಎಂಬ ಸಚಿವ ಎಂ.ಬಿ. ಪಾಟೀಲ್‌ ಹೇಳಿಕೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ತಿರುಗೇಟು ನೀಡಿದ್ದಾರೆ. “ನನ್ನನ್ನು ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಮ್ಮ ಹೋರಾಟವನ್ನು ನಾವು ಮಾಡುತ್ತೇವೆ. ಮಂತ್ರಿ ಆದವರಿಗೆ ವಿಷಯ, ವಸ್ತುವಿನ ಆಳವೇ ಗೊತ್ತಿಲ್ಲ. ಇದು ರಾಜ್ಯದ ದುರದೃಷ್ಟಕರ ಸಂಗತಿ, ಇವರಿಗೆ ರೌಡಿಸಂ ಬಿಟ್ಟರೆ ಬೇರೇನೂ ಗೊತ್ತಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
ವಿಸ್ತಾರ ನ್ಯೂಸ್‌ ಚಾನೆಲ್‌ ವೀಕ್ಷಕರು ಹಾಗೂ ವಿಸ್ತಾರ ನ್ಯೂಸ್‌ ವೆಬ್‌ಸೈಟ್‌ ಓದುಗರ ಸ್ಪಂದನೆಯೇ ಅಂಥದ್ದು. ವಿಧಾನಸಭೆ ಚುನಾವಣೆ ವೇಳೆ “ಮತ ಹಾಕಿ, ಫೋಟೊ ಕಳುಹಿಸಿ” ಎಂಬ ಅಭಿಯಾನ ಆರಂಭಿಸಿದ್ದೆವು. ಆಗ ವೀಕ್ಷಕರು ಹಾಗೂ ಓದುಗರು ಸಾವಿರಾರು ಫೋಟೊಗಳನ್ನು ಕಳುಹಿಸಿ ನಮ್ಮ ಅಭಿಯಾನಕ್ಕೆ ಬೆಂಬಲ ನೀಡಿದ್ದರು. ಈಗ ವಿಶ್ವ ಪರಿಸರ ದಿನ ಹಿನ್ನೆಲೆಯಲ್ಲಿ “ಸಸಿ ನೆಡಿ, ಫೋಟೊ ಕಳುಹಿಸಿ” ಅಭಿಯಾನ ಆರಂಭಿಸಿದ್ದೇವೆ. ಈಗಲೂ ಅಷ್ಟೇ, ಸಾವಿರಾರು ಪರಿಸರ ಪ್ರಿಯರು ಸಸಿ ನೆಟ್ಟಿರುವ ಫೋಟೊಗಳನ್ನು ಕಳುಹಿಸಿ ಉತ್ತಮ ಸ್ಪಂದನೆ ನೀಡಿದ್ದಾರೆ. ಪರಿಸರ ಕಾಳಜಿ ಮೆರೆದಿದ್ದಾರೆ. ಸಾವಿರಾರು ಫೋಟೊಗಳಲ್ಲಿ ಆಯ್ದ ಕೆಲವು ಫೋಟೊಗಳು ಇಲ್ಲಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

7. ಮಳೆ ಶುರುವಾಗೋದಕ್ಕೆ ಇನ್ನು ನಾಲ್ಕೇ ದಿನ ಬಾಕಿ, ಈಗ್ಲೇ ನಿಮ್ಮ ಎಲ್ಲಾ ಕೆಲ್ಸಾ ಮುಗಿಸಿಕೊಂಡು ಬಿಡಿ
ವಾಡಿಕೆಯ ಪ್ರಕಾರ ಇಷ್ಟೊತ್ತಿಗೆ ಮುಂಗಾರು ಶುರುವಾಗಬೇಕಿತ್ತು. ಆದರೆ, ಈ ವರ್ಷ ತುಸು ವಿಳಂಬವಾಗಿದೆ(Monsoon delayed in Kerala). ಆಗ್ನೇಯ ಮಾನ್ಸೂನ್‌ ಕೇರಳಕ್ಕೆ ಅಪ್ಪಳಿಸುವುದು ಇನ್ನೂ ಮೂರ್ನಾಲ್ಕು ದಿನ ತಡವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department – IMD) ಹೇಳಿದೆ. ಅಂದರೆ, ಜೂನ್ 7ಕ್ಕೆ ಕೇರಳದಲ್ಲಿ ಮಳೆ ಶುರುವಾಗಲಿದೆ. ಇದಕ್ಕೂ ಮೊದಲು ಹವಾಮಾನ ಇಲಾಖೆಯು ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಅಂದಾಜಿಸಿತ್ತು. ಆದರೆ, ಈಗ ಇನ್ನೂ ಮೂರ್ನಾಲ್ಕು ದಿನಗಳು ತಡವಾಗಲಿದೆ ಎಂದು ಊಹೆ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
ಮತ್ತಷ್ಟು ಓದಿಗಾಗಿ: 1. ಏನು ನಿನ್ನ ಹನಿಗಳ ಲೀಲೆ… ಭಾರತದಲ್ಲಿ ಮುಂಗಾರು ಸೃಷ್ಟಿ ಹೇಗೆ? ಮಳೆ ವ್ಯಾಪಿಸುವುದು ಯಾವ ರೀತಿ?
2. ಮಳೆಗಾಲದಲ್ಲಿ ವೈರಲ್‌ ಸೋಂಕು ತಡೆಯುವುದು ಹೇಗೆ?

8. ದೇಶದ ಟಾಪ್‌ 40 ಡೆಂಟಲ್‌ ಕಾಲೇಜುಗಳ ಪೈಕಿ 10 ಕರ್ನಾಟಕದಲ್ಲಿವೆ!
ವೈದ್ಯಕೀಯ ಶಿಕ್ಷಣದಂತೆ ದಂತ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ರಾಜ್ಯ ಮುಂಚುಣಿಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದ್ದು, ದೇಶದ ಟಾಪ್‌ 40 ದಂತ ವೈದ್ಯಕೀಯ ಕಾಲೇಜುಗಳ ಪೈಕಿ ಹತ್ತು ಕಾಲೇಜುಗಳು ರಾಜ್ಯದಲ್ಲಿಯೇ ಇವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
ಮತ್ತಷ್ಟು ಓದಿಗಾಗಿ: 1. ಮೆಡಿಕಲ್‌ ಕಾಲೇಜುಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಿಮಾನ್ಸ್‌ಗೆ 4 ನೇ ಸ್ಥಾನ; ಟಾಪ್‌ ವೈದ್ಯಕೀಯ ಕಾಲೇಜುಗಳಿವು
2. ರಾಜ್ಯದ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್‌ 10 ಕಾಲೇಜುಗಳು!

9. ದೀರ್ಘಕಾಲದ ಗೆಳತಿಗೆ ಮಾಂಗಲ್ಯ ಧಾರಣೆ ಮಾಡಿದ ಅಭಿಷೇಕ್ ಅಂಬರೀಶ್‌
ಯಂಗ್‌ ರೆಬೆಲ್ ಸ್ಟಾರ್‌ ಅಭಿಷೇಕ್ ಅಂಬರೀಶ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್‌ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕರ್ಕಾಟಕ ಲಗ್ನದಲ್ಲಿ (9:30-10:30) ಇಬ್ಬರೂ ಹಸೆಮಣೆ ಏರಿದರು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅವಿವ ಬಿಡಪ ಅವರಿಗೆ ಮಾಂಗಲ್ಯ ಧಾರಣೆ ಮಾಡುವ ವಿಡಿಯೊ ಇದೀಗ ವೈರಲ್‌ ಆಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

10. 2024ರ ಟಿ20 ವಿಶ್ವ ಕಪ್​ಗೆ ಕಂಟಕ, ಇಂಗ್ಲೆಂಡ್​​ಗೆ ಶಿಫ್ಟ್​ ಮಾಡಲು ಐಸಿಸಿ ನಿರ್ಧಾರ
2024ರಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ (T20 World Cup) ಟೂರ್ನಿಯನ್ನು ಹೊಸ ಸ್ಥಳಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಆತಿಥ್ಯ ಪಡೆದುಕೊಂಡಿರುವ ಯುಎಸ್ಎಯಲ್ಲಿ ಮೂಲ ಸೌಕರ್ಯದ ಕೊರತೆ ಎದುರಾಗಿರುವ ಕಾರಣ ಅಲ್ಲಿಂದ ಇಂಗ್ಲೆಂಡ್​ಗೆ ಸ್ಥಳಾಂತರ ಮಾಡಲು ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ನಿರ್ಧಾರ ಮಾಡಿದೆ ಎಂಬುದಾಗಿ ವರದಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

Exit mobile version