Site icon Vistara News

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

Train Accident

ನವದೆಹಲಿ: ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ ಒಳಗಾಗಿ ನಾಲ್ಕು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.

ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

Exit mobile version