Site icon Vistara News

Travel Influencer : ರೀಲ್ಸ್​ ಮಾಡುತ್ತಲೇ ಜಲಪಾತದ ಕಮರಿಗೆ ಬಿದ್ದು ಪ್ರಾಣಬಿಟ್ಟ 26 ವರ್ಷದ ಯುವತಿ

ರಾಯಗಢ: ಮಹಾರಾಷ್ಟ್ರದ ರಾಯಗಢ ಬಳಿಯ ಕುಂಭೆ ಜಲಪಾತದಲ್ಲಿ ವಿಡಿಯೊ ಮಾಡುತ್ತಿದ್ದ 26 ವರ್ಷದ ಇನ್ಸ್ಟಾಗ್ರಾಮ್ ಇನ್​ಫ್ಲ್ಯುಯೆನ್ಸರ್ (Travel Influencer)​ ಕಮರಿಗೆ ಬಿದ್ದು ಮೃತಪಟ್ಟಿದ್ದಾರೆ. ಮುಂಬೈ ನಿವಾಸಿ ಅನ್ವಿ ಕಾಮ್ದಾರ್ ರೀಲ್ ಮಾಡುತ್ತಾ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನ್ವಿ ಜುಲೈ 16 ರಂದು ಏಳು ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ 10.30ಕ್ಕೆ ವಿಡಿಯೊ ಮಾಡುವಾಗ ಅನ್ವಿ ಆಳವಾದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದರು ಮತ್ತು ರಕ್ಷಣಾ ತಂಡವು ಘಟನಾ ಸ್ಥಳಕ್ಕೆ ನೀಡಿ ಯುವತಿಯ ಪತ್ತೆಗಾಗಿ ಶ್ರಮವಹಿಸುತ್ತಿದೆ. ನಾವು ಸ್ಥಳಕ್ಕೆ ತಲುಪಿದ ಕೂಡಲೇ, ಯುವತಿ ಸುಮಾರು 300ರಿಂದ 350 ಅಡಿ ಕೆಳಗೆ ಬಿದ್ದಿದ್ದಾಳೆ ಎಂಬದು ಗೊತ್ತಾಯಿತು. ಅವರು ಗಂಭೀರ ಗಾಯಗೊಂಡಿದ್ದರಿಂದ ಮತ್ತು ಭಾರಿ ಮಳೆಯಾಗುತ್ತಿದ್ದ ಕಾರಣ ಅವಳನ್ನು ಮೇಲಕ್ಕೆತ್ತುವುದು ಕಷ್ಟಕರವಾಗಿತ್ತು. ಬಳಿಕ ಸರಪಳಿಯ ಮೂಲಕ ಅವರನ್ನು ಹೊರತೆಗೆದೆವು ಎಂದು ಅಧಿಕಾರಿಗಳು ಹೊರಟ್ಟಿದ್ದಾರೆ.

ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ, ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ತೀವ್ರ ಗಾಯಗಳಿಂದಾಗಿ ಮನಗಾಂವ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ. ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಪ್ರವಾಸೋದ್ಯಮವನ್ನು ಜವಾಬ್ದಾರಿಯುತವಾಗಿ ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

Exit mobile version