T20 world Cup 2024 : ವೆಸ್ಟ್​ ಇಂಡೀಸ್​​ನಲ್ಲೂ ಮನೆಯೂಟ ಮಾಡುತ್ತಿರುವ ಸೂರ್ಯಕುಮಾರ್​, ಹಾರ್ದಿಕ್ ಪಾಂಡ್ಯ! - Vistara News

ಪ್ರಮುಖ ಸುದ್ದಿ

T20 world Cup 2024 : ವೆಸ್ಟ್​ ಇಂಡೀಸ್​​ನಲ್ಲೂ ಮನೆಯೂಟ ಮಾಡುತ್ತಿರುವ ಸೂರ್ಯಕುಮಾರ್​, ಹಾರ್ದಿಕ್ ಪಾಂಡ್ಯ!

T20 World Cup 2024: ಎಲ್ಲದಕ್ಕಿಂತ ಹೆಚ್ಚಾಗಿ ಆಟಗಾರರು ತಮ್ಮ ಆಹಾರದ ಅವಶ್ಯಕತೆಗಳ ಮೇಲೆ ಬಿಗಿ ಹಿಡಿತ ಇಟ್ಟುಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ಮನೆಯೂಟ ತಿನ್ನುವುದಕ್ಕಾಗಿ ಪಂದ್ಯಾವಳಿಗೆ ಹೋಗುವ ವೇಳೆ ವೈಯಕ್ತಿಕ ಬಾಣಸಿಗರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ಟೀಂ ಇಂಡಿಯಾ (Team India) ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ತಂಡವು ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್​​ನಲ್ಲಿ ಅಗ್ರಸ್ಥಾನವನ್ನು ಪಡೆಯಿತು. ಸೂಪರ್ 8 ಹಂತದಲ್ಲಿ, ತಂಡವು ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿದೆ ಮತ್ತು ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ತಂಡದ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಗೊಂಡಿದೆ.

ಈ ಪ್ರದರ್ಶನದ ಹೆಚ್ಚಿನ ಶ್ರೇಯಸ್ಸು ಆಟಗಾರರ ಸಮರ್ಪಣೆ ಮತ್ತು ಕಠಿಣ ಪರಿಶ್ರಮಕ್ಕೆ ಸಲ್ಲಬೇಕು. ಎಲ್ಲದಕ್ಕಿಂತ ಹೆಚ್ಚಾಗಿ ಆಟಗಾರರು ತಮ್ಮ ಆಹಾರದ ಅವಶ್ಯಕತೆಗಳ ಮೇಲೆ ಬಿಗಿ ಹಿಡಿತ ಇಟ್ಟುಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ಮನೆಯೂಟ ತಿನ್ನುವುದಕ್ಕಾಗಿ ಪಂದ್ಯಾವಳಿಗೆ ಹೋಗುವ ವೇಳೆ ವೈಯಕ್ತಿಕ ಬಾಣಸಿಗರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರು ಮನೆಯಿಂದ ದೂರವಿದ್ದರೂ ಮನೆಯಲ್ಲಿ ತಯಾರಿಸಿದ ಊಟದ ಸೌಲಭ್ಯ ಪಡೆದಿದ್ದಾರೆ. ಇಬ್ಬರು ಕ್ರಿಕೆಟಿಗರು ತಮ್ಮೊಂದಿಗೆ ತಮ್ಮ ಬಾಣಸಿಗರನ್ನು ಕರೆದುಕೊಂಡು ಹೋಗಿದ್ದು ಆಹಾರದ ಬಗ್ಗೆ ಬಹಳ ಜಾಗರೂಕರಾಗಿದ್ದಾರೆ.

ಈ ಬಾಣಸಿಗರು ತಂಡದೊಂದಿಗೆ ಎಲ್ಲ ಕಡೆ ಪ್ರಯಾಣಿಸುತ್ತಿಲ್ಲ. ಅವರು ಪ್ರತ್ಯೇಕವಾಗಿದ್ದಾರೆ. ವರದಿಯ ಪ್ರಕಾರ, ಈ ಬಾಣಸಿಗರು ತಮ್ಮದೇ ಆದ ಹೋಟೆಲ್​ ಬುಕಿಂಗ್ ಮಾಡಿಕೊಂಡಿದ್ದಾರೆ. ಟೀಮ್​ ಇಂಡಿಯಾದ ಹೋಟೆಲ್ ಬಳಿ ವಾಸಿಸುತ್ತಿದ್ದಾರೆ. ಟಿಫಿನ್ ಕ್ಯಾರಿಯರ್ ಗಳಲ್ಲಿ ಪ್ರತಿದಿನ ಊಟವನ್ನು ಅವರಿಗೆ ನೀಡುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ.

ಎಲ್ಲರಿಗೂ ಉತ್ತಮ ಆಹಾರ

ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಮಾತ್ರ ಊಟದ ಬಗ್ಗೆ ಜಾಗರೂಕತೆ ಮಾಡುತ್ತಿಲ್ಲ. ಉಳಿದವರೂ ಆಹಾರದ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ. ಪಂದ್ಯಕ್ಕೆ ಫಿಟ್ ಆಗಿರಲು ಸರಿಯಾದ ಆಹಾರ ತಿನ್ನುತ್ತಿದ್ದಾರೆ.

ಹೆಚ್ಚಿನ ಫಿಟ್ನೆಸ್​​ಗಾಗಿ ಸಮರ್ಪಕ ಆಹಾರದ ಸಂಸ್ಕೃತಿಯನ್ನು ತಂಡಕ್ಕೆ ತಂದಿರುವುದು ವಿರಾಟ್ ಕೊಹ್ಲಿ. ಅವರು ಫಿಟ್ನೆಸ್ ಮತ್ತು ಪೌಷ್ಠಿಕಾಂಶದ ವಿಷಯದಲ್ಲಿ ಉನ್ನತ ಕಾಳಜಿ ನಿಗದಿಪಡಿಸಿದರು. ಕೊಹ್ಲಿ 35 ವರ್ಷ ವಯಸ್ಸಿನವರಾಗಿದ್ದರೂ, ವಿಶ್ವದ ಅತ್ಯಂತ ಫಿಟ್ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ ಅವರು ಹಾಲಿನ ಉತ್ಪನ್ನ ಸೇರಿದಂತೆ ಅನವಶ್ಯಕ ವಸ್ತುಗಳನ್ನು ಸೇವಿಸುತ್ತಿಲ್ಲ. ಎಲ್ಲವೂ ಲೆಕ್ಕಾಚಾರದ ಪ್ರಕಾರ ಸೇವಿಸುತ್ತಾರೆ.

2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಪ್ರದರ್ಶನ

ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಹೊರತುಪಡಿಸಿ ಭಾರತವು ಇಲ್ಲಿಯವರೆಗೆ ಅಜೇಯ ತಂಡವಾಗಿ ಅಭಿಯಾನ ಮುಂದುವರಿಸಿದೆ. ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯಗಳಲ್ಲಿ ಪ್ರಾಬಲ್ಯ ಸಾಧಿಸಿರುವ ಮೆನ್ ಇನ್ ಬ್ಲೂ ತಂಡ ಈ ಬಾರಿ ಪ್ರಶಸ್ತಿ ಎತ್ತಿಹಿಡಿಯುವ ತವಕದಲ್ಲಿದೆ.

ಇದನ್ನೂ ಓದಿ: Olympic Day : 900 ಮಕ್ಕಳೊಂದಿಗೆ ಒಲಿಂಪಿಕ್ ದಿನ ಸಂಭ್ರಮಿಸಿದ ರಿಲಯನ್ಸ್​ಫೌಂಡೇಶನ್​

ಗ್ರೂಪ್ ಹಂತದಲ್ಲಿ ಭಾರತ ಐರ್ಲೆಂಡ್, ಪಾಕಿಸ್ತಾನ ಮತ್ತು ಅಮೆರಿಕವನ್ನು ಸೋಲಿಸಿ ಸೂಪರ್ 8 ಹಂತಕ್ಕೆ ಪ್ರವೇಶಿಸಿತ್ತು. ಕೆನಡಾ ವಿರುದ್ಧದ ಪಂದ್ಯವು ಪ್ರತಿಕೂಲ ಹವಾಮಾನದಿಂದಾಗಿ ರದ್ದಾಗಿತ್ತು. ಈ ಪಂದ್ಯಗಳಲ್ಲಿ ಭಾರತವು ಸಂಯಮವನ್ನು ತೋರಿಸಿದೆ. ಭಾರತ ತನ್ನ ಮುಂದಿನ ಪಂದ್ಯವನ್ನು ಜೂನ್ 24 ರಂದು ಸೇಂಟ್ ಲೂಸಿಯಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ಎರಡೂ ತಂಡಗಳಿಗೆ ಇದು ಕೊನೆಯ ಸೂಪರ್ 8 ಪಂದ್ಯವಾಗಿದೆ. ಸೂಪರ್ 8 ಗುಂಪಿನಲ್ಲಿ ಭಾರತವು ಪಾಯಿಂಟ್ಸ್ ಟೇಬಲ್​​ನಲ್ಲಿ ಆರಾಮವಾಗಿ ಅಗ್ರಸ್ಥಾನದಲ್ಲಿದ್ದರೆ, ಸೆಮಿಫೈನಲ್​ಗೆ ಅರ್ಹತೆ ಪಡೆಯಲು ಆಸ್ಟ್ರೇಲಿಯಾಕ್ಕೆ ;ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ.

ಭಾರತ ಸೆಮಿಫೈನಲ್ಗೆ ಅರ್ಹತೆ ಪಡೆದರೆ, ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಎರಡನೇ ಸೆಮಿಫೈನಲ್ ಆಡಲಿದೆ. ಟೂರ್ನಿಯ ಫೈನಲ್ ಪಂದ್ಯ ಜೂನ್ 29ರಂದು ಬಾರ್ಬಡೋಸ್​​ನ ಬ್ರಿಜ್​​ಟೌನ್​ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

Viral Video: ಮಹಿಳೆಯರ ಮೇಲೆ ಒಂದಿಲ್ಲೊಂದು ಕಾರಣಕ್ಕೆ ಏನಾದರೂ ಕಿರುಕುಳ ನಡೆಯುತ್ತಲೇ ಇರುತ್ತದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳನ್ನು ಹಿಂದಿನಿಂದ ಬಂದ ಯುವಕನೊಬ್ಬ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡು ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ಅಷ್ಟರಲ್ಲಿ ಬಸ್ಸೊಂದು ಬಂತು. ಮುಂದೇನಾಯಿತು? ಈ ವಿಡಿಯೊ ನೋಡಿ.

VISTARANEWS.COM


on

Viral Video
Koo

ಸಮಾಜದಲ್ಲಿ ಮಹಿಳೆಯರು ವಿವಿಧ ರೀತಿಯ ಕಿರುಕುಳಗಳಿಗೆ ಒಳಗಾಗುತ್ತಿದ್ದಾರೆ. ಆದರೆ ಕೆಲವರು ಕಂಡೂ ಕಾಣದಂತೆ ಸುಮ್ಮನಿದ್ದರೆ ಇನ್ನೂ ಕೆಲವರು ಮಹಿಳೆಯರ ಸಹಾಯಕ್ಕೆ ಬಂದು ಅವರನ್ನು ರಕ್ಷಿಸುವ ಮನೋಭಾವವುಳ್ಳವರಾಗಿರುತ್ತಾರೆ. ಅಂತಹದೊಂದು ಘಟನೆ ಇದೀಗ ನಡೆದಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯೊಬ್ಬಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದು, ಇದನ್ನು ಕಂಡು ಬಸ್‌ನ ಪ್ರಯಾಣಿಕರು ಆಕೆಯ ಸಹಾಯಕ್ಕೆ ಧಾವಿಸಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಸ್ತೆಯಲ್ಲಿ ಯುವತಿಯೊಬ್ಬಳು ನಡೆದುಕೊಂಡು ಬರುತ್ತಿದ್ದಳು. ಆ ವೇಳೆ ಆಕೆಯ ಹಿಂದಿನಿಂದ ಬಂದ ಯುವಕನೊಬ್ಬ ಆಕೆಯನ್ನು ರಸ್ತೆಯ ಮೇಲೆ ಹಿಡಿದು ಎಳೆದಾಡಿದ. ಇದರಿಂದ ಹೆದರಿದ ಆಕೆ ಓಡಲು ಪ್ರಯತ್ನಿಸಿದರೂ ಆತ ಬಿಡಲಿಲ್ಲ. ಆ ವೇಳೆ ಒಬ್ಬ ದಾರಿಹೋಕ ಇದನ್ನು ಕಂಡೂ ಕಾಣದಂತೆ ಸುಮ್ಮನೆ ನಡೆದುಕೊಂಡು ಮುಂದೆ ಹೋದ. ಆದರೆ ರಸ್ತೆಯಲ್ಲಿ ಬರುತ್ತಿದ್ದ ಬಸ್‌ನ ಪ್ರಯಾಣಿಕರು ಈ ದೃಶ್ಯವನ್ನು ಕಂಡು ಬಸ್ ನಿಲ್ಲಿಸಿ ಅದರಲ್ಲಿದ್ದ ಪುರುಷರು ಒಟ್ಟಾಗಿ ಯುವತಿಯ ಸಹಾಯಕ್ಕೆ ಬಂದಿದ್ದಾರೆ. ಆ ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಇದನ್ನೂ ಓದಿ:  ಬಿಜೆಪಿಗೆ ಮತ ಹಾಕಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!

ಹಾಗಾಗಿ ಸಮಾಜದಲ್ಲಿ ಯಾವುದೇ ರೀತಿಯ ದುರ್ವತನೆಗಳನ್ನು ಕಂಡಾಗ ಅದನ್ನು ಎದುರಿಸಲು ಮುಂದಾಗಬೇಕು. ಕಿರುಕುಳದ ವಿರುದ್ಧ ಧ್ವನಿ ಎತ್ತಿ ನಿಲ್ಲುವುದು ಕೇವಲ ನಮ್ಮ ಜವಾಬ್ದಾರಿ ಮಾತ್ರವಲ್ಲ ಅದು ಸಾಮಾಜಿಕ ಕರ್ತವ್ಯ ಎಂಬುದನ್ನು ತಿಳಿಯಿರಿ. ಇದರಿಂದ ಸಮಾಜದಲ್ಲಾಗುವ ದೌರ್ಜನ್ಯಗಳ ವಿರುದ್ಧ ಹೋರಾಡಬಹುದು. ಹಾಗೂ ಅವುಗಳನ್ನು ನಿರ್ಮೂಲನೆ ಮಾಡಬಹುದು ಎಂಬ ಸಂದೇಶವನ್ನು ಈ ಘಟನೆ ಮತ್ತು ವಿಡಿಯೊ ಸಾರಿದೆ.

Continue Reading

ಕರ್ನಾಟಕ

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Karnataka CM: ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಪಂಚ ಪೀಠದಿಂದ ಬೇಡಿಕೆ ಮಂಡನೆಯಾಗಿದೆ. ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

cm siddaramaiah karnataka cm
Koo

ಚಿಕ್ಕೋಡಿ: ಡಿಕೆ ಶಿವಕುಮಾರ್‌ (DK Shivakumar) ಅವರನ್ನು ಸಿಎಂ (Karnataka CM) ಮಾಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಕೆಶಿ ಸಮ್ಮುಖದಲ್ಲಿಯೇ ನಿನ್ನೆ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ಡಿಮಾಂಡ್‌ ಇಟ್ಟಿದ್ದರು. ಇದೀಗ ಲಿಂಗಾಯತ (Lingayat) ಸ್ವಾಮೀಜಿಗಳು, ಲಿಂಗಾಯತ ಸಿಎಂ ಬೇಡಿಕೆ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಪಂಚ ಪೀಠದಿಂದ ಬೇಡಿಕೆ ಮಂಡನೆಯಾಗಿದೆ. ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ನಿನ್ನೆ ಚಂದ್ರಶೇಖರ ಸ್ವಾಮೀಜಿ ಅವರು ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.

ಆಯಾ ಸಮುದಾಯಗಳ ಸ್ವಾಮೀಜಿಗಳ ಮೂಲಕವೇ ಲಿಂಗಾಯತ ಮುಖ್ಯಮಂತ್ರಿಗೆ ಒತ್ತಡ ಹಾಕಿಸುವ ಪ್ರಯತ್ನ ಮುಂದುವರಿದಿದೆ. ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳು ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದಿದ್ದಾರೆ.

ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಒಂದು ವೇಳೆ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಡಂಬಡಿಕೆ ಆಗಿದ್ದರೆ ಒಡಂಬಡಿಕೆಯ ಪ್ರಕಾರ ನಡೆದುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಡಿಕೆಶಿ ಸಿಎಂ ಮಾಡಿ: ಚಂದ್ರಶೇಖರ ಸ್ವಾಮೀಜಿ

ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಕೇಳಿಕೊಂಡರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರು ಕೂಡಾ ಉಪಸ್ಥಿತರಿದ್ದರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.

ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದು ಹೇಳಿದರು. ಈ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶ ರವಾನೆ ಮಾಡಿದರು. ಡಿಕೆಶಿ ಸಿಎಂ ಆಗೋದು ಹೈಕಮಾಂಡ್ ಕೈಯಲ್ಲಿ ಇದೆ ಅನ್ನುವುದನ್ನು ಸ್ಪಷ್ಟಪಡಿಸಿದರು.

ಇದನ್ನೂ ಓದಿ: HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

Continue Reading

ಪ್ರಮುಖ ಸುದ್ದಿ

Haveri Accident: ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Haveri Accident: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

VISTARANEWS.COM


on

Haveri Accident
Koo

ಬೆಂಗಳೂರು: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Haveri Accident) ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಎಂದು ಕಿಡಿಕಾರಿ, ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಸಂತಾಪ

ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ್‌ ವೈಯಕ್ತಿಕ ನೆರವು; ತಲಾ 50 ಸಾವಿರ ಪರಿಹಾರ

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ಪರಿಹಾರ ನೀಡಿದ್ದಾರೆ. 13 ಜನರಿಗೆ 6.50 ಲಕ್ಷ ವೈಯಕ್ತಿಕ ಪರಿಹಾರ ನೀಡಿದ್ದಾರೆ. ಹಾವೇರಿ ಜಿಲ್ಲಾ ಕೈ ಮುಖಂಡರ ಮೂಲಕ ಪರಿಹಾರದ ಹಣ ಹಸ್ತಾಂತರ ಮಾಡಿದ್ದಾರೆ.

ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದಿಂದ 17 ಜನ ಪ್ರಯಾಣ ಟಿಟಿ ವಾಹನದಲ್ಲಿ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

Continue Reading

ಕ್ರೀಡೆ

IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

IND Vs SA T20 WC Final: ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND Vs SA T20 WC Final
Koo

ಬಾರ್ಬಡೋಸ್: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಫೈನಲ್(IND Vs SA T20 WC Final)​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ(ಶನಿವಾರ) ಬಾರ್ಬಡೋಸ್​ನಲ್ಲಿ(Barbados Weather Forecast) ಕೂಟದ ಅಜೇಯ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಭಾರತ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಆದರೆ, ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಶೇ.70ರಷ್ಟು ಮಳೆ ಸಾಧ್ಯತೆ


ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

Continue Reading
Advertisement
ವಿದೇಶ20 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ27 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest30 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು38 mins ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್48 mins ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ48 mins ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ60 mins ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

cm siddaramaiah karnataka cm
ಕರ್ನಾಟಕ1 hour ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ2 hours ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest2 hours ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌