ಬೆಂಗಳೂರು: ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು, ಈ ಬಗ್ಗೆ ಈಗ ಸ್ಪಷ್ಟನೆ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Women and Children welfare minister) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭರವಸೆ ನೀಡಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.#Gruhalakshmi@CMofKarnataka @siddaramaiah @laxmi_hebbalkar pic.twitter.com/pCVJjOol9T
— DIPR Karnataka (@KarnatakaVarthe) July 8, 2024
ಕಾಂಗ್ರೆಸ್ ಜಾರಿ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದು. ಪ್ರತಿ ತಿಂಗಳು ಮಹಿಳೆಯರ ಅಕೌಂಟ್‌ಗೆ 2000 ರೂಪಾಯಿ ಜಮಾ ಮಾಡುವ ಯೋಜನೆ ಇದಾಗಿದೆ. ಎರಡು ತಿಂಗಳ ಹಣ ಒಂದೇ ಕಂತಿನಲ್ಲಿ ಪಾವತಿ ಮಾಡದೇ ಇದ್ದರೂ, ಒಂದು ವಾರದ ಅಂತರದಲ್ಲಿ ಎರಡು ಬಾರಿ ಹಣ ಜಮೆಯಾಗುತ್ತದೆ ಎಂದು ಸಚಿವೆ ಭರವಸೆ ನೀಡಿದ್ದು ಮಹಿಳೆಯರ ಖುಷಿ ಹೆಚ್ಚಿಸಿದೆ.
ಗೃಹಲಕ್ಷ್ಮಿ ಜೂನ್ ಕಂತಿನ ಹಣ ಬಿಡುಗಡೆ ಮಾಡದೇ ಇರುವುದಕ್ಕೆ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದವು. ಉಚಿತ ಭರವಸೆಗಳನ್ನು ಈಡೇರಿಸಲು ಹೋಗಿ ಸರ್ಕಾರ ದಿವಾಳಿಯಾಗಿದ್ದು, ಯೋಜನೆಗಳನ್ನು ಮುಂದುವರೆಸುವುದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕಿಸಿದ್ದರು.
ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದು, ಸರ್ಕಾರ ಇದಕ್ಕೆ ಹಣವನ್ನು ಹೊಂದಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದೆ. ಈಗ ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.
ಭೂ ವಂಚನೆ ತಡೆಗಟ್ಟಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಜಮೀನು ಮಾರಾಟದಲ್ಲಿ ವಂಚನೆ (land fraud) ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಭೂ ಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ನಗರದ ವಿಧಾನಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆಯನ್ನು ವಿವರಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳು ಸಹ ಈ ಅಗತ್ಯತೆಗಳಿಗೆ ತಕ್ಕಂತೆ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸೃಜಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಒಟ್ಟು 91,000 ಜಮೀನುಗಳು ಒತ್ತವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ಇದನ್ನೂ ಓದಿ | CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ