Site icon Vistara News

Udupi Chikmagalur Election Result 2024 : ಉಡುಪಿಯಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್​ ಪೂಜಾರಿಗೆ ವಿಜಯ

Udupi Chikmagalur Result 2024

ಬೆಂಗಳೂರು: ಪ್ರಕೃತಿ ಸೌಂದರ್ಯದ ನಾಡು ಹಾಗೂ ದೇವಸ್ಥಾನಗಳ ಬೀಡಾಗಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ (731408 ಮತಗಳು) ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಜಯಪ್ರಕಾಶ್ ಹೆಗ್ಡೆ (4,72,505) ವಿರುದ್ಧ ವಿರುದ್ಧ 2,58,903 ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ (Udupi Chikmagalur Election Result 2024).

ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)- 7,32,234 ಮತಗಳು
ಜಯಪ್ರಕಾಶ್​ ಹೆಗ್ಡೆ (ಕಾಂಗ್ರೆಸ್​​)- 4,73,059 ಮತಗಳು
ಗೆಲುವಿನ ಅಂತರ- 2,59, 175 ಮತಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಜೆಡಿಎಸ್​​ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್​​ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.56.2ರಷ್ಟು ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್​​ನ ಪಕ್ಷದ ಜಯಪ್ರಕಾಶ್ ಹೆಗ್ಡೆ ಅವರನ್ನು 27,018 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.48.06ರಷ್ಟು ಮತಗಳನ್ನು ಪಡೆದಿತ್ತು.

ಗಮನ ಸೆಳೆದ ಕ್ಷೇತ್ರ

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ 2008ರ ಕ್ಷೇತ್ರ ಮರು ವಿಂಗಡಣೆ (Udupi-Chikmagalur Lok Sabha constituency) ನಂತರ ಅಸ್ತಿತ್ವಕ್ಕೆ ಬಂದಿತು. 2019 ರವರೆಗೆ ಈ ಕ್ಷೇತ್ರದಲ್ಲಿ ಮೂರು ಚುನಾವಣೆಗಳು ನಡೆದಿವೆ. ಇದರಲ್ಲಿ 2012 ರ ಉಪಚುನಾವಣೆಯೂ ಸೇರಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆಯಾಗಿದ್ದು ಉಪಚುನಾವಣೆಯಲ್ಲಿ ಮಾತ್ರ ಒಮ್ಮೆ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರದಲ್ಲಿ ಮೊದಲ ಚುನಾವಣೆ 2009ರಲ್ಲಿ ರಲ್ಲಿ ನಡೆಯಿತು. ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ಸಿ), ಚಿಕ್ಕಮಗಳೂರು, ತರೀಕೆರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಾಜಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019 ರಿಂದ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರಾಗಿ ಮತ್ತು 2018-19 ರ ಅವಧಿಯಲ್ಲಿ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು 2024ಲ್ಲಿ ಕಾಂಗ್ರೆಸ್ ಅಭ್ಯರ್ಥಿ. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಹಾಗೂ 1999 ಮತ್ತು 2004ರಲ್ಲಿ ಸ್ವತಂತ್ರ ಶಾಸಕರಾಗಿ ಬ್ರಹ್ಮಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಬ್ರಹ್ಮಾವರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಾಗ 2008ರ ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು ಅವರು.

2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ನಂತರ ಹೆಗಡೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರ ಕಾಂಗ್ರೆಸ್​ ಪಕ್ಷಕ್ಕೆ ಸೇರಿ ಟಿಕೆಟ್​ ಪಡೆದುಕೊಂಡಿದ್ದರು. ಉಡುಪಿ ಚಿಕ್ಕಮಗಳೂರು ತನ್ನ ಗಡಿಯನ್ನು ಇತರ ಐದು ಲೋಕಸಭಾ ಕ್ಷೇತ್ರಗಳೊಂದಿಗೆ ಹಂಚಿಕೊಂಡಿದೆ. ದಾವಣಗೆರೆ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರ ಸುತ್ತಲಿದೆ.

Exit mobile version