Site icon Vistara News

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Lakshmi Hebbalkar

ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರತಿಸ್ಪರ್ಧಿ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ 2.5 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ. ಅವರ ಸೋಲಿನ ಬಳಿಕ ಉಡುಪಿಯ ಕಾಂಗ್ರೆಸ್​ ಘಟಕಕ್ಕೆ ನಿರಾಸೆಯಾಗಿದೆ. ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ.

ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರ ಒತ್ತಾಯ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಬ್ಯುಸಿಯಾಗಿದ್ದರು. ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್​ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಆದರೆ, ಜಗದೀಶ್​ ಶೆಟ್ಟರ್ ವಿರುದ್ಧ ಸೋತಿದ್ದಾರೆ.

ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಕಾಂಗ್ರೆಸ್ ಕಾರ್ಯಕರ್ತರು!

ಕ್ಕಬಳ್ಳಾಪುರ: ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ(Karnataka election results 2024) ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಇದೀಗ ಸ್ವಪಕ್ಷದ ಶಾಸಕನ ವಿರುದ್ಧವೇ ಕಾಂಗ್ರೆಸ್‌ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಗ್ರಹಿಸಿರುವುದು ಕಂಡುಬಂದಿದೆ.

ಹೌದು, ಈ ಹಿಂದೆ ನಡೆದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೇ ಸ್ವಪಕ್ಷದ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋಲಲು ಶಾಸಕ ಪ್ರದೀಪ್ ಈಶ್ವರ್ ಕಾರಣ. ಅವರು ಆಡಿದ ಮಾತುಗಳೇ ರಕ್ಷಾರಾಮಯ್ಯ ಸೋಲಿಗೆ ಕಾರಣವಾಗಿದೆ. ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ ಪುತ್ರ ಜಗದೀಶ್ ಪ್ರತಿಕ್ರಿಯಿಸಿ, ಪ್ರದೀಪ್ ಈಶ್ವರ್ ಮಾತುಗಳಿಂದಲೇ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಒಂದಾದವು. ಪಕ್ಷ ಕಟ್ಟಿ ಬೆಳಸಿದೆವು, ಅದರೆ ಪ್ರದೀಪ್ ಈಶ್ವರ್ ಬಂದು ಹಾಳು ಮಾಡಿದರು. ದಯವಿಟ್ಟು ಕೊಟ್ಟ ಮಾತಿನಂತೆ ನಡೆದುಕೊಳ್ಳಿ, ಇಲ್ಲವೆಂದರೆ ಮಾತು ಕಡಿಮೆ ಮಾಡಿ ಎಂದು ಕಿಡಿಕಾರಿದ್ದಾರೆ.

Exit mobile version