Site icon Vistara News

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

University Grants Commission

ನವದೆಹಲಿ: ಭಾರತೀಯ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಪ್ರಕಟಿಸಲಾಗಿದ್ದು. ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಅಡ್ಮಿಷನ್​ (ಪ್ರವೇಶ ಕಲ್ಪಿಸಲು) ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants Commission) ನಿರ್ಧರಿಸಿದೆ, ಪ್ರವೇಶಗಳು ಈಗ ಜನವರಿ / ಫೆಬ್ರವರಿ ಮತ್ತು ಜುಲೈ / ಆಗಸ್ಟ್​​ನಲ್ಲಿ ನಡೆಯಲಿವೆ. ಬೋರ್ಡ್ ಫಲಿತಾಂಶಗಳಲ್ಲಿನ ವಿಳಂಬ, ಆರೋಗ್ಯ ಸಮಸ್ಯೆಗಳು ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಆರಂಭಿಕ ಪ್ರವೇಶ ಪ್ರಕ್ರಿಯೆಯನ್ನು ತಪ್ಪಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.

ಯುಜಿಸಿ ಅಧ್ಯಕ್ಷ ಪ್ರೊಫೆಸರ್ ಮಾಮಿಡಾಲ ಜಗದೀಶ್ ಕುಮಾರ್ ಈ ಕುರಿತು ಮಾಹಿತಿ ಪ್ರಕಟಿಸಿದ್ದಾರೆ. ಎರಡು ಬಾರಿ ಪ್ರವೇಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳು ಶೈಕ್ಷಣಿಕ ದಾಖಲಿಗಾಗಿ ಕಾಯುವ ಸಮಯವನ್ನು ಕಡಿಮೆ ಮಾಡಲಾಗುವುದು. ಆ ಮೂಲಕ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ಕಲ್ಪಿಸಲಾಗುವುದು ಎಂದು ವಿವರಿಸಿದ್ದಾರೆ. ಇದು ಕೈಗಾರಿಕೆಗಳಿಗೆ ವರ್ಷಕ್ಕೆ ಎರಡು ಬಾರಿ ಕ್ಯಾಂಪಸ್ ನೇಮಕ ಮಾಡಲು ಅನುವು ಮಾಡಿಕೊಡುತ್ತದೆ, ಪದವೀಧರರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ, ಯುಜಿಸಿ ಮುಕ್ತ ಮತ್ತು ದೂರಶಿಕ್ಷಣ (ಒಡಿಎಲ್) ಮತ್ತು ಆನ್​ಲೈನ್​ ವಿಧಾನಗಳಿಗೆ ವರ್ಷಕ್ಕೆ ಪ್ರವೇಶಕ್ಕೆ ಅನುಮತಿ ನೀಡಿತ್ತು. ಇದರ ಪರಿಣಾಮವಾಗಿ ಸುಮಾರು 5 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳು ಅವಕಾಶ ಪಡೆದಿದ್ದರು. ಈ ಯಶಸ್ಸಿನಿಂದ ಉತ್ತೇಜಿತರಾದ ಯುಜಿಸಿ ಈ ನೀತಿಯನ್ನು ನಿಯಮಿತ ಕಾರ್ಯಕ್ರಮಗಳಿಗೆ ವಿಸ್ತರಿಸಿತ್ತು.

ಇದನ್ನೂ ಓದಿ: Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

ಈ ಬದಲಾವಣೆಯು ಭಾರತೀಯ ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಚಾಲ್ತಿಯಲ್ಲಿರುವ ವ್ಯವಸ್ಥೆಗೆ ಪೂರಕವಾಗಿದೆ. ಅಂತಾರಾಷ್ಟ್ರೀಯ ಸಹಯೋಗ ಮತ್ತು ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೂ ಪ್ರೇರಣೆ ನೀಡುತ್ತದೆ. ಆದಾಗ್ಯೂ, ಎರಡು ಬಾರಿ ಪ್ರವೇಶ ಕಲ್ಪಿಸುವುದು ಕಡ್ಡಾಯವಲ್ಲ.

ವರ್ಷಕ್ಕೆ ಎರಡು ಪ್ರವೇಶವು ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸುತ್ತದೆ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020 ರಲ್ಲಿ ಕಲ್ಪಿಸಿದಂತೆ ಭಾರತವನ್ನು ‘ಜಾಗತಿಕ ಅಧ್ಯಯನ ತಾಣ’ ವನ್ನಾಗಿ ಮಾಡುತ್ತದೆ.

Exit mobile version