Site icon Vistara News

UGCET 2024: ಆ.7ರಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ; ಆಪ್ಶನ್ ಎಂಟ್ರಿಗೆ ನಾಳೆ ಲಾಸ್ಟ್ ಡೇಟ್

UGCET 2024

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (Professional Course) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಆಗಸ್ಟ್ 4 ಕೊನೆಯ (UGCET 2024) ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು. ನಂತರ ಆಗಸ್ಟ್ 7ರಂದು ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ ಮಾಡಲಾಗುವುದು. ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಈಗ ಅವಕಾಶ ನೀಡಲಾಗಿದೆ.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್‌ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ

-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಣೆ ಆಗಿದೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ; ಆಪ್ಶನ್ ಎಂಟ್ರಿ ಮಾಡಲು ಕೆಲವೇ ದಿನಗಳು ಬಾಕಿ!

Exit mobile version