Site icon Vistara News

Union Budget 2023 : ಕೃಷಿಕರ ಸಮಸ್ಯೆ ಬಗೆಹರಿಸುವ ಸ್ಟಾರ್ಟಪ್‌ಗೆ ಪ್ರೋತ್ಸಾಹ; ಕೇಂದ್ರದಿಂದ ಹೊಸ ನಿಧಿ ಸ್ಥಾಪನೆ

Budget 2023

Budget 2023

ನವ ದೆಹಲಿ: ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿರುವ ಕೇಂದ್ರ ಸರ್ಕಾರವು, ಕೃಷಿಯಾಧಾರಿತ ತಂತ್ರಜ್ಞಾನ ಕ್ಷೇತ್ರದಲ್ಲಿನ ಸ್ಟಾರ್ಟಪ್‌ಗೆ ಪ್ರೋತ್ಸಾಹ ನೀಡಲು ನಿಧಿ ಸ್ಥಾಪಿಸಲಿದೆ.

ಬುಧವಾರ ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್‌ನಲ್ಲಿ ಈ ವಿಷಯ ಪ್ರಕಟಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಸ್ಟಾರ್ಟಪ್‌ಗಳನ್ನು ಪ್ರಾರಂಭಿಸುವ ಯುವಕರಿಗೆ ಪ್ರೋತ್ಸಾಹ ನೀಡಲು ಈ ನಿಧಿಯನ್ನು ಸ್ಥಾಪಿಸಲಾಗುತ್ತಿದೆ. ಮುಖ್ಯವಾಗಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ಸ್ಟಾರ್ಟಪ್‌ಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೃಷಿ ಸಾಲ ಹೆಚ್ಚಳ

ಕೃಷಿ ಕ್ಷೇತ್ರಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಹೆಚ್ಚಿಸಲಾಗಿದ್ದು, 20 ಲಕ್ಷ ಕೋಟಿ ಎಂದು ಈ ಬಾರಿಯ ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ.

ಅಲ್ಲದೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೊಸೈಟಿಗಳನ್ನು ಕಂಪ್ಯೂಟರೀಕರಣವನ್ನು ಈ ಬಜೆಟ್‌ನಲ್ಲಿ ಘೋಷಿಸಲಾಗಿದೆ. ದೇಶದ 63,000 ಸಾವಿರ ಸೊಸೈಟಿಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತದೆ. ಇದಕ್ಕಾಗಿ 2,516 ಕೋಟಿ ತೆಗೆದಿರಿಸಲಾಗಿದೆ.

ಬಜೆಟ್‌ಗೆ ಸಂಬಂಧಿಸಿದ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಇದನ್ನೂ ಓದಿ : Union budget 2023 : ದೇಶವನ್ನು ಮುನ್ನಡೆಸಲಿರುವ ಸಪ್ತರ್ಷಿಗಳು: ನಿರ್ಮಲಾ ಸೀತಾರಾಮನ್‌ ಹೇಳಿದ ಋಷಿಗಳ ಕಥೆ ಏನು?

Exit mobile version