ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ದಾಖಲೆಯ 7ನೇ ಬಾರಿಗೆ ಬಜೆಟ್ ಮಂಡನೆ (Union Budget 2024 Live) ಮಂಡಿಸುತ್ತದ್ದಾರೆ. ದೇಶದ ಜನರಿಗೆ ಬಜೆಟ್ ಕುರಿತು ನಿರೀಕ್ಷೆಗಳು ಹೆಚ್ಚಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡುವ ನಿರೀಕ್ಷೆ ಇದೆ. ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
ಲೈವ್ ಇಲ್ಲಿ ವೀಕ್ಷಿಸಿ
ಇದನ್ನೂ ಓದಿ: Economic Survey 2023-24: ದೇಶದ ಆರ್ಥಿಕತೆ, ಜಿಡಿಪಿ, ಹೂಡಿಕೆ; ಆರ್ಥಿಕ ಸಮೀಕ್ಷೆಯ ಪ್ರಮುಖಾಂಶಗಳು ಇಲ್ಲಿವೆ
ಬಿಹಾರ, ಆಂಧ್ರಪ್ರದೇಶಕ್ಕೆ ಭರ್ಜರಿ ಕೊಡುಗೆ
ಎನ್‌ಡಿಐ ಸರ್ಕಾರದ ಪ್ರಮುಖ ಭಾಗವಾಗಿರುವ ಬಿಹಾರ ಹಾಗೂ ಆಂಧ್ರಪ್ರದೇಶ ರಾಜ್ಯಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಘೋಷಣೆ ಮಾಡಿದೆ. ಬಿಹಾರದಲ್ಲಿ ಮೆಡಿಕಲ್ ಕಾಲೇಜು, ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆ ಘೋಷಿಸಿದ್ದಾರೆ. ಇನ್ನು ಆಂಧ್ರಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗಳಿಗೆ 15 ಸಾವಿರ ಕೋಟಿ ರೂಪಾಯಿಯನ್ನು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.
ಆಂಧ್ರ ಪ್ರದೇಶಕ್ಕೂ ಭರ್ಜರಿ ಕೊಡುಗೆ
ಆಂಧ್ರ ಪ್ರದೇಶಕ್ಕೂ ಭರ್ಜರಿ ಕೊಡುಗೆ ಘೋಷಿಸಲಾಗಿದೆ. ಆಂಧ್ರ ಪುನರ್ ನಿರ್ಮಾಣ ಯೋಜನೆ ಘೋಷಣೆ ಜತೆಗೆ ಹೈದರಾಬಾದ್-ಬೆಂಗಳೂರು ಇಂಡಸ್ಟ್ರೀಯಲ್ ಕಾರಿಡಾರ್ ನಿರ್ಮಾಣ. ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ.
ಬಿಹಾರಕ್ಕೆ ಬಂಪರ್ ಗಿಫ್ಟ್
ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣ, ಮೆಡಿಕಲ್ ಕಾಲೇಜು ನಿರ್ಮಾಣ.
ವಿದ್ಯಾರ್ಥಿಗಳಿಗೆ, ಯುವ ಜನತೆಗಾಗಿ ಯೋಜನೆ
ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ, 20 ಲಕ್ಷ ಯುವಕರಿಗೆ ಕೌಶಲ್ಯ ಆಧಾರಿತ ಉದ್ಯೋಗ ನೀಡುವ ಯೋಜನೆ ಬಜೆಟ್‌ನಲ್ಲಿ ಘೋಷಣೆ.
ಉದ್ಯೋಗ ಸೃಷ್ಟಿಗೆ ಒತ್ತು
ಮೂರು ಉದ್ಯೋಗ ಕೌಶಲ್ಯ ಯೋಜನೆ ಜಾರಿಗೊಳಿಸಲಾಗುತ್ತದೆ. ಮಹಿಳೆಯರಿಗೆ ಕೌಶಲಾಭಿವೃದ್ಧಿ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.