Site icon Vistara News

Union Budget 2024 : ಕೇಂದ್ರ ಬಜೆಟ್​​ನಲ್ಲಿ ಕೃಷಿ ಕ್ಷೇತ್ರಕ್ಕ ಭರ್ಜರಿ ಕೊಡುಗೆ; ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ

Union Budget 2024:

ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್​ನಲ್ಲಿ (Union Budget 2024) ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರು ಹಾಗೂ ಕೃಷಿ ಕ್ಷೇತ್ರವನ್ನು ನಂಬಿಕೊಂಡಿರುವ ಕೋಟ್ಯಂತರ ನಾಗರಿಕರ ಒಳಿತಿಗಾಗಿ ಅವರು ದೊಡ್ಡ ಪ್ರಮಾಣದ ಕೊಡುಗೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಲ್ಲಿದೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂಪಾಯಿ ಘೋಷಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ದೇಶಾದ್ಯಂತ 10,000 ಜೈವಿಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ, 1 ಕೋಟಿ ರೈತರನ್ನು ಬ್ರ್ಯಾಂಡಿಂಗ್ ಮತ್ತು ಪ್ರಮಾಣೀಕರಣ ನೀಡುವ ಮೂಲಕ ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಲಾಗುವುದು ಎಂದು ಅವರು ಬಜೆಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್‌ಗೆ ಮೊಸರು ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

ತರಕಾರಿ ಬೆಳೆಗಳನ್ನು ಜೀವನಾಧಾರವಾಗಿ ಮಾಡಿಕೊಂಡಿರುವ ರೈತರಿಗೆ ಅನುಕೂಲಕ ಮಾಡಿಕೊಡುವ ನಿಟ್ಟಿನಲ್ಲಿ
ತರಕಾರಿ ಉತ್ಪಾದನೆ ಮತ್ತು ಪೂರೈಕೆ ಸರಪಳಿ ನಿರ್ಮಿಸುವ ಯೋಜನೆ ಪ್ರಕಟಿಸಿದ್ದಾರೆ. ಅದೇ ರೀತಿ ಮಾರುಕಟ್ಟೆಗೆಳ ಕೇಂದ್ರಗಳ ಹತ್ತಿರ ದೊಡ್ಡ ಕ್ಲಸ್ಟರ್​ಗಳನ್ನು ನಿರ್ಮಿಸುವ ಭರವಸೆಯನ್ನು ಕೊಟ್ಟಿದ್ದಾರೆ.

ಮೀನು ಸಾಕಣದಾರರ ಅಭಿವೃದ್ಧಿಗಾಗಿ ಸಿಗಡಿ ಸಂತಾನೋತ್ಪತ್ತಿ ಕೇಂದ್ರಗಳಿಗೆ ಆರ್ಥಿಕ ನೆರವು ನೀಡಲಾಗುವುದ ಎಂದು ಹಣಕಾಸು ಸಚಿವರು ಭರವಸೆ ಕೊಟ್ಟಿದ್ದಾರೆ. ಅದೇ ರೀತಿ ನಬಾರ್ಡ್ ಮೂಲಕ ಸಿಗಡಿಗಳ ರಫ್ತಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳದಿ್ದಾರೆ.

ದೇಶದ 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. 32 ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡುವುದು ಕೂಡು ಬಜೆಟ್​ನಲ್ಲಿ ಕೃಷಿಗೆ ಕೊಟ್ಟಿರುವ ನೆರವಾಗಿದೆ. ಅದೆ ರೀತಿ
ಬೇಳೆಕಾಳುಗಳು ಮತ್ತು ಎಣ್ಣೆ ಬೀಜಗಳಲ್ಲಿ ಸ್ವಾವಲಂಬನೆ ಖಚಿತಪಡಿಸಿಕೊಳ್ಳಲು 6 ಕೋಟಿ ರೈತರು ಮತ್ತು ಅವರ ಭೂಮಿಯನ್ನು ರೈತ ಮತ್ತು ಭೂ ನೋಂದಣಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಈ ಬಜೆಟ್​ನಲ್ಲಿ ಖಾತರಿ ನೀಡಿದ್ದಾರೆ.

4.1 ಕೋಟಿ ಉದ್ಯೋಗ, ಹೊಸ ನೌಕರರಿಗೆ ತಿಂಗಳ ಸಂಬಳ ಕೊಡುಗೆ

ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಎನ್‌ಡಿಎ ಸರ್ಕಾರದ ಬಜೆಟ್‌ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Niramala Sitharaman) ಅವರು ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆ (Union Budget 2024) ಆರಂಭಿಸುತ್ತಲೇ ದೇಶದ ಜನರಿಗೆ ನಿರ್ಮಲಾ ಸೀತಾರಾಮನ್‌ ಅವರು ಬಂಪರ್‌ ಘೋಷಣೆ ಮಾಡಿದ್ದಾರೆ. ದೇಶದ 4.1 ಕೋಟಿ ಜನರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಆದ್ಯತೆ ನೀಡಲು ತೀರ್ಮಾನಿಸಲಾಗಿದ್ದು, 2 ಲಕ್ಷ ಕೋಟಿ ರೂ. ಪ್ಯಾಕೇಜ್‌ ಕೂಡ ಘೋಷಣೆ ಮಾಡಿದ್ದಾರೆ. ಇದು ಮೋದಿ ಸರ್ಕಾರದ ಮಹತ್ವದ ಘೋಷಣೆ ಎನಿಸಿದೆ.

ದೇಶದ 9 ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ರೈತರು, ಮಹಿಳೆಯರು ಹಾಗೂ ಯುವಕರಿಗೆ ಉದ್ಯೋಗ ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಪ್ರಮುಖ ಯೋಜನೆಗಳ ಮೂಲಕ ದೇಶದ ಕೋಟ್ಯಂತರ ಜನರಿಗೆ ಉದ್ಯೋಗ ನೀಡುವುದು ನಮ್ಮ ಆದ್ಯತೆ ನೀಡಲಾಗಿದೆ. ಯುವಕ-ಯುವತಿಯರಿಗೆ ಉದ್ಯೋಗ ನೀಡುವ ಜತೆಗೆ 1 ಕೋಟಿ ರೈತರು ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಆದ್ಯತೆ ನೀಡುವಂತೆ ಮಾಡಲಾಗುತ್ತದೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಒಂದು ತಿಂಗಳ ವೇತನವನ್ನು ನೀಡುವ ಯೋಜನೆಯನ್ನು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಅಂದರೆ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ ಕೇಂದ್ರ ಸರ್ಕಾರವು ಒಂದು ತಿಂಗಳ ಸಂಬಳವಾಗಿ 15 ಸಾವಿರ ರೂ. ನೀಡುತ್ತದೆ. ಇದರಿಂದ 2.1 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಇಪಿಎಫ್‌ಒಗೆ ನೋಂದಣಿ ಮಾಡಿಕೊಳ್ಳುತ್ತಲೇ ಒಂದು ತಿಂಗಳ ಸಂಬಳವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಉದ್ಯೋಗಿಗಳಿಗೆ ಅನುಕೂಲವಾಗಲಿ ಎಂದು ಮೊದಲ ಬಾರಿ ಕೆಲಸಕ್ಕೆ ಸೇರಿದವರಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

Exit mobile version