WTC Point Table : ಇಂಗ್ಲೆಂಡ್ ವಿರುದ್ಧ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡ ಭಾರತ - Vistara News

ಪ್ರಮುಖ ಸುದ್ದಿ

WTC Point Table : ಇಂಗ್ಲೆಂಡ್ ವಿರುದ್ಧ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡ ಭಾರತ

WTC Point Table : ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತ ಬಳಿಕ ಭಾರತ ತಂಡ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಕುಸಿದಿತ್ತು. ಇದೀಗ ಚೇತರಿಕೆ ಕಂಡಿದೆ.

VISTARANEWS.COM


on

Rohit Sharma and Ben Stokes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶಾಖಪಟ್ಟಣಂ: ಇಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 2 ನೇ ಟೆಸ್ಟ್​​ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2023-25 ಪಾಯಿಂಟ್ಸ್ ಪಟ್ಟಿಯಲ್ಲಿ (WTC Point Table) ಶೇಕಡಾವಾರು ಪ್ರಗತಿ ಸಾಧಿಸಿದೆ. ಜತೆಗೆ ಮೂರು ಸ್ಥಾನಗಳ ಜಿಗಿತ ಕಂಡಿದೆ. 2023-25ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಈಗ ಗೆಲುವಿನ ಶೇಕಡಾವಾರು 52.78 ಹೊಂದಿದ್ದು, ಅಂಕಪಟ್ಟಿಯಲ್ಲಿ 2 ನೇ ಸ್ಥಾನಕ್ಕೆ ಏರಿದೆ.

2023-25ರ ಐಸಿಸಿ ಡಬ್ಲ್ಯುಟಿಸಿಯಲ್ಲಿ ಭಾರತ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆಲುವು, 2ರಲ್ಲಿ ಸೋಲು ಹಾಗೂ 1ರಲ್ಲಿ ಡ್ರಾ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿತ್ತು. ಈ ವೇಳೆ ಭಾರತ ಐದನೇ ಸ್ಥಾನಕ್ಕೆ ಇಳಿದಿತ್ತು. ಅದಕ್ಕಿಂತ ಹಿಂದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಸಹ ಭಾರತ ಕಳೆದುಕೊಂಡಿತ್ತು.

ಮತ್ತೊಂದೆಡೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25 ರಲ್ಲಿ ಮತ್ತೊಂದು ಪಂದ್ಯ ಸೋತ ನಂತರ ಇಂಗ್ಲೆಂಡ್ ಗೆಲುವಿನ ಶೇಕಡಾವಾರು ಕಳೆದುಕೊಂಡಿದೆ. ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 3 ಗೆಲುವು, 3 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಹಿಂದೆ ಅವರು ಗೆಲುವಿನ ಶೇಕಡಾವಾರು 29.16 ರಷ್ಟಿದ್ದರು. ಈಗ, ಅವರು 25.0 ಪಾಯಿಂಟ್ ಹೊಂದಿದೆ.

ಏತನ್ಮಧ್ಯೆ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25 ಪಾಯಿಂಟ್ಸ್ ಟೇಬಲ್ ಮೇಲೆ ಪರಿಣಾಮ ಬೀರಲಿದೆ. ಪಾಯಿಂಟ್ಸ್ ಟೇಬಲ್​ನ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಕ್ರಮವಾಗಿ 2 ಮತ್ತು 3 ನೇ ಸ್ಥಾನದಲ್ಲಿವೆ.

ಅಗ್ರಸ್ಥಾನದಲ್ಲಿ ಆಸ್ಟ್ರೇಲಿಯಾ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25ರಲ್ಲಿ ಆಸ್ಟ್ರೇಲಿಯಾ 55.0 ಗೆಲುವಿನ ಶೇಕಡಾವಾರು ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ. 3 ಸರಣಿಗಳಲ್ಲಿ 10 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದಿದೆ. 3 ಪಂದ್ಯಗಳನ್ನು ಸೋತಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯಶಿಪ್​ನಲ್ಲಿ ಆಸ್ಟ್ರೇಲಿಯಾ ಹಾಲಿ ಚಾಂಪಿಯನ್ ಪಟ್ಟ ಹೊಂದಿದೆ.

2ನೇ ಟೆಸ್ಟ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ವಿಶಾಖಪಟ್ಟಣಂ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ (IND Vs ENG) ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವು 106 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ಟೆಸ್ಟ್‌ ಪಂದ್ಯದ ಸೋಲಿಗೆ ಭಾರತ ತಂಡವು ಸೇಡು ತೀರಿಸಿಕೊಂಡಂತಾಗಿದೆ. ಅಷ್ಟೇ ಅಲ್ಲ, ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-1ರ (Test Series) ಸಮಬಲ ಸಾಧಿಸಿದಂತಾಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಮರ್ಥ ಪ್ರದರ್ಶನ ತೋರಿದ ಭಾರತ ತಂಡವು ಎರಡನೇ ಪಂದ್ಯವನ್ನು ತನ್ನದಾಗಿಸಿಕೊಂಡಿತು.

ಮೊದಲ ಇನ್ನಿಂಗ್ಸ್‌ನ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನೀಡಿದ 399 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡವು 292 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್‌ ಪರ ಜಾಕ್‌ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್‌ 292 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತದ ಪರ ಜಸ್‌ಪ್ರೀತ್‌ ಬೂಮ್ರಾ ಹಾಗೂ ಕುಲದೀಪ್‌ ಯಾದವ್‌ ತಲಾ 3 ವಿಕೆಟ್‌ ಪಡೆದು ಮಿಂಚಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Wall Collapse
Koo

ಆನೇಕಲ್: ಕಾಂಪೌಂಡ್ ಗೋಡೆ ಕುಸಿದು (Wall collapse) ಬಿದ್ದು ಕೂಲಿ ಕಾರ್ಮಿಕನೊರ್ವ ಮೃತಪಟ್ಟರೆ, ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಗುರುವಾರ ಘಟನೆ ನಡೆದಿದೆ. ರಾಯಚೂರಿನ ದೇವದುರ್ಗ ಮೂಲದ ಪರಶುರಾಮ್ (24) ಮೃತ ದುರ್ದೈವಿ.

ಪೈಪ್ ಲೈನ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ಕಾಂಪೌಂಡ್ ಗೋಡೆ ಕುಸಿದಿದೆ. ಕಾಂಪೌಂಡ್ ಗೋಡೆ ಪಕ್ಕದಲ್ಲಿಯೇ ಗುಂಡಿ ತೆಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಾಯಚೂರು ಮೂಲದ ಐದಾರು ಮಂದಿ ಮಣ್ಣು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಮಿಕ ಮೇಲೆಯೇ ಗೋಡೆ ಕುಸಿದಿದೆ. ಹೊಟ್ಟೆಪಾಡಿಗೆ ದೂರದ ರಾಯಚೂರಿನಿಂದ ಬಂದಿದ್ದ ಪರಶುರಾಮ್‌ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾನೆ.

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು , ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದೆ (Karnataka Weather Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಲಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಕೆಲವೊಮ್ಮೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ , ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಶುಕ್ರವಾರ ಬೆಳಗ್ಗೆ 07:22ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರು ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ.ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಮೀನ ರಾಶಿಯವರಿಗೆ ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 29:30 ವಾರ: ಶುಕ್ರವಾರ
ನಕ್ಷತ್ರ: ಚಿತ್ತಾ 18:37 ಯೋಗ: ವೈಧೃತಿ 29:20
ಕರಣ: ಬಾಲವ 16:15 ಅಮೃತಕಾಲ: ಬೆಳಗ್ಗೆ 11:24 ರಿಂದ 01:13
ದಿನದ ವಿಶೇಷ: ಚಂದ್ರ ದರ್ಶನ, ಶರನ್ನವರಾತ್ರಿ ದ್ವಿತೀಯ ದಿವಸ ಬ್ರಹ್ಮಚಾರಿಣಿ ಅವತಾರ

ಸೂರ್ಯೋದಯ : 06:09   ಸೂರ್ಯಾಸ್ತ : 06:07

ರಾಹುಕಾಲ: ಬೆಳಗ್ಗೆ 10:38 ರಿಂದ 12:08
ಗುಳಿಕಕಾಲ: ಬೆಳಗ್ಗೆ
07:39 ರಿಂದ
09:09
ಯಮಗಂಡಕಾಲ: ಮಧ್ಯಾಹ್ನ
03:08 ರಿಂದ 04:37

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ ಹೊಂದುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಲಿದೆ. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ.ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ.ಅಗತ್ಯ ವಸ್ತುಗಳ ಖರೀದಿ ಮಾಡುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮಇರಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ:ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ.ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ.ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ.ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ.ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ.ಆರ್ಥಿಕ ಪ್ರಗತಿ ಸಾಧಾರಣ.ಹರಟೆಯಿಂದ ಕಾಲ ಹರಣ ಮಾಡುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು.ಸಕರಾತ್ಮಕ ಆಲೋಚನೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ.ಆರೋಗ್ಯ ಉತ್ತಮಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ.ಆರ್ಥಿಕ ಪ್ರಗತಿ ಸಾಧಾರಣ..ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಬಾಗಿ, ಪ್ರಯಾಣ ಮಾಡುವ ಸಾಧ್ಯತೆ.ಆರ್ಥಿಕ ಪ್ರಗತಿ ಉತ್ತಮ.ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ.ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಕೇಸ್ ಸಂಬಂಧ ತನಿಖೆಯು ಕ್ಲೈ ಮ್ಯಾಕ್ಸ್ ಹಂತದಲ್ಲಿದ್ದು, ಇದೀಗ ಜೈಲಿನೊಳಗಿನ ಅಂದರ್ ಕಿ ದರ್ಬಾರ್ ಬೆಳಕಿಗೆ ಬಂದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ (Actor Darshan) ಇದ್ದ ವೇಳೆ ಸಿಕ್ಕ ರಾಜಾತಿಥ್ಯದ ತನಿಖೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ವಿಶೇಷ ಸವಲತ್ತುಗಳ ಜಾಡು ಹಿಡಿದ ಖಾಕಿಗೆ ರಾಜಾತಿಥ್ಯದ ಪಿನ್ ಟು ಪಿನ್ ಸಾಕ್ಷಿ ದೊರೆತಿದ್ದು, ಇದರ ಹೊರತಾಗಿ ಜೈಲಿನಲ್ಲಿ ಸಿಗುವ ಮದ್ಯದ ಬಾಟೆಲ್‌ಗಳ ಮತ್ತೊಂದು ಕಹಾನಿ ಬೆಳಕಿಗೆ ಬಂದಿದೆ.

ಜೈಲಿನೊಳಗೆ ದರ್ಶನ್‌ಗೆ ಸಿಕ್ಕ ರಾಜಾತಿಥ್ಯದ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ. ಜತೆಗೆ ಇದಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವ ಸಂಗತಿ ಸಹ ಬಯಲಾಗಿದೆ. ಸದ್ಯ ಈ ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುವ ತಯಾರಿಯಲ್ಲಿದ್ದಾರೆ.

ಜೈಲಿನ ಒಳಗಡೆ ದರ್ಶನ್ ರೌಂಡ್ ಟೇಬಲ್‌ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜತೆ ವಿಡಿಯೊ ಕಾಲ್ ಸಂಭಾಷಣೆ ನಡೆಸಿದ್ದ ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು, ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಜೈಲಿನಲ್ಲಿರುವ ರೌಡಿಗಳಿಗೆ ಸಪ್ಲೈ ಆಗುತ್ತಿದೆಯಾ ಕಾಸ್ಟ್ಲಿ ಡ್ರಿಂಕ್ಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಈಗ ಹೊಸದಂದು ಸಂಗತಿ ಕೇಳಿ ಬಂದಿದೆ. ಜೈಲಿನಲ್ಲಿರುವ ಕೆಲ ರೌಡಿಗಳಿಗೆ ಕಾಸ್ಟ್ಲಿ ಡ್ರಿಂಕ್ಸ್ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿದೆ ಎನ್ನಲಾಗಿದೆ. ಇನ್ನು ಮದ್ಯದ ಬಾಟಲ್‌ನ ಅಸಲಿ ಬೆಲೆ 2 ಸಾವಿರ ಇದ್ದರೆ ಅದನ್ನು ಜೈಲಿನೊಳಗೆ ಕೊಡಲು 25 ಸಾವಿರ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಟಲ್‌ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೋಗುವವನು ಮತ್ತೊಬ್ಬನಂತೆ.. ಬಳಿಕ ಅದನ್ನು ರೌಡಿಗೆ ತಲುಪಿಸುವವನು ಮತ್ತೋಬ್ಬ.. ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿ ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹೀಗೆ ಒಳಗೆ ಸಪ್ಲೈ ಮಾಡಿ ಎಣ್ಣೆಗೆ ಹಣ ಹೊರಗಡೆಯೇ ಪಡೆಯಲಾಗುತ್ತಿದೆ. ಯಾರ್ಯಾರು ಎಣ್ಣೆ ತಂದು ಕೊಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇದೆಲ್ಲದರ ನಡುವೆ ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಸದ್ಯ ರಾಜಾತಿಥ್ಯದ ತನಿಖೆ ಕೈಗೊಂಡಿದ್ದ ಪೊಲೀಸರು ಬಹುತೇಕ ತನಿಖೆ ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆ ಬಳಿಕ ಜೈಲಿನ ಅಕ್ರಮ ಚಟುವಟಿಕೆಗಳ ಮತ್ತಷ್ಟು ಸಂಗತಿ ಬಯಲಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Wall Collapse
ಬೆಂಗಳೂರು60 ನಿಮಿಷಗಳು ago

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

karnataka Weather Forecast
ಮಳೆ7 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ7 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ17 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು18 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು20 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು21 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ21 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು22 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು23 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ17 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌