Site icon Vistara News

WTC Point Table : ಇಂಗ್ಲೆಂಡ್ ವಿರುದ್ಧ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಭರ್ಜರಿ ಜಿಗಿತ ಕಂಡ ಭಾರತ

Rohit Sharma and Ben Stokes

ವಿಶಾಖಪಟ್ಟಣಂ: ಇಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 2 ನೇ ಟೆಸ್ಟ್​​ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2023-25 ಪಾಯಿಂಟ್ಸ್ ಪಟ್ಟಿಯಲ್ಲಿ (WTC Point Table) ಶೇಕಡಾವಾರು ಪ್ರಗತಿ ಸಾಧಿಸಿದೆ. ಜತೆಗೆ ಮೂರು ಸ್ಥಾನಗಳ ಜಿಗಿತ ಕಂಡಿದೆ. 2023-25ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಈಗ ಗೆಲುವಿನ ಶೇಕಡಾವಾರು 52.78 ಹೊಂದಿದ್ದು, ಅಂಕಪಟ್ಟಿಯಲ್ಲಿ 2 ನೇ ಸ್ಥಾನಕ್ಕೆ ಏರಿದೆ.

2023-25ರ ಐಸಿಸಿ ಡಬ್ಲ್ಯುಟಿಸಿಯಲ್ಲಿ ಭಾರತ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದೆ. ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆಲುವು, 2ರಲ್ಲಿ ಸೋಲು ಹಾಗೂ 1ರಲ್ಲಿ ಡ್ರಾ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿತ್ತು. ಈ ವೇಳೆ ಭಾರತ ಐದನೇ ಸ್ಥಾನಕ್ಕೆ ಇಳಿದಿತ್ತು. ಅದಕ್ಕಿಂತ ಹಿಂದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಸಹ ಭಾರತ ಕಳೆದುಕೊಂಡಿತ್ತು.

ಮತ್ತೊಂದೆಡೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25 ರಲ್ಲಿ ಮತ್ತೊಂದು ಪಂದ್ಯ ಸೋತ ನಂತರ ಇಂಗ್ಲೆಂಡ್ ಗೆಲುವಿನ ಶೇಕಡಾವಾರು ಕಳೆದುಕೊಂಡಿದೆ. ಭಾರತ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 3 ಗೆಲುವು, 3 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಹಿಂದೆ ಅವರು ಗೆಲುವಿನ ಶೇಕಡಾವಾರು 29.16 ರಷ್ಟಿದ್ದರು. ಈಗ, ಅವರು 25.0 ಪಾಯಿಂಟ್ ಹೊಂದಿದೆ.

ಏತನ್ಮಧ್ಯೆ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25 ಪಾಯಿಂಟ್ಸ್ ಟೇಬಲ್ ಮೇಲೆ ಪರಿಣಾಮ ಬೀರಲಿದೆ. ಪಾಯಿಂಟ್ಸ್ ಟೇಬಲ್​ನ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಕ್ರಮವಾಗಿ 2 ಮತ್ತು 3 ನೇ ಸ್ಥಾನದಲ್ಲಿವೆ.

ಅಗ್ರಸ್ಥಾನದಲ್ಲಿ ಆಸ್ಟ್ರೇಲಿಯಾ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25ರಲ್ಲಿ ಆಸ್ಟ್ರೇಲಿಯಾ 55.0 ಗೆಲುವಿನ ಶೇಕಡಾವಾರು ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ. 3 ಸರಣಿಗಳಲ್ಲಿ 10 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದಿದೆ. 3 ಪಂದ್ಯಗಳನ್ನು ಸೋತಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯಶಿಪ್​ನಲ್ಲಿ ಆಸ್ಟ್ರೇಲಿಯಾ ಹಾಲಿ ಚಾಂಪಿಯನ್ ಪಟ್ಟ ಹೊಂದಿದೆ.

2ನೇ ಟೆಸ್ಟ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ವಿಶಾಖಪಟ್ಟಣಂ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್‌ (IND Vs ENG) ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವು 106 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ಟೆಸ್ಟ್‌ ಪಂದ್ಯದ ಸೋಲಿಗೆ ಭಾರತ ತಂಡವು ಸೇಡು ತೀರಿಸಿಕೊಂಡಂತಾಗಿದೆ. ಅಷ್ಟೇ ಅಲ್ಲ, ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-1ರ (Test Series) ಸಮಬಲ ಸಾಧಿಸಿದಂತಾಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಮರ್ಥ ಪ್ರದರ್ಶನ ತೋರಿದ ಭಾರತ ತಂಡವು ಎರಡನೇ ಪಂದ್ಯವನ್ನು ತನ್ನದಾಗಿಸಿಕೊಂಡಿತು.

ಮೊದಲ ಇನ್ನಿಂಗ್ಸ್‌ನ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ನೀಡಿದ 399 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಇಂಗ್ಲೆಂಡ್‌ ತಂಡವು 292 ರನ್‌ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್‌ ಪರ ಜಾಕ್‌ ಕ್ರಾವ್ಲೆ (73) ಹೊರತುಪಡಿಸಿ ಯಾವೊಬ್ಬ ಆಟಗಾರನೂ ಉತ್ತಮ ಪ್ರದರ್ಶನ ತೋರದ ಕಾರಣ ಇಂಗ್ಲೆಂಡ್‌ 292 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲೊಪ್ಪಿಕೊಂಡಿತು. ಭಾರತದ ಪರ ಜಸ್‌ಪ್ರೀತ್‌ ಬೂಮ್ರಾ ಹಾಗೂ ಕುಲದೀಪ್‌ ಯಾದವ್‌ ತಲಾ 3 ವಿಕೆಟ್‌ ಪಡೆದು ಮಿಂಚಿದರು.

Exit mobile version