UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ? - Vistara News

ಪ್ರಮುಖ ಸುದ್ದಿ

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

UPSC 2024 : ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

VISTARANEWS.COM


on

UPSC 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ನೇ( UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್​) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್​ಸಿ ಸಿಎಸ್ಇ 2024 ರ ಪರೀಕ್ಷೆಗೆ ಹಾಜರಾಗಿವು ಅಭ್ಯರ್ಥಿಗಳು upsc.gov.in ಮತ್ತು upsconline.nic.in ವೆಬ್​ಸೈಟ್​ಗೆ ಪ್ರವೇಶ ಮಾಡಿ ಫಲಿತಾಂಶಗಳನ್ನು ಡೌನ್ಲೋಡ್ ಮಾಡಬಹದು. ಸಾಮಾನ್ಯ ಪರೀಕ್ಷೆಯನ್ನು ಜೂನ್ 16 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ 1 ಮತ್ತು ಪರೀಕ್ಷೆ 2 ಎಂದು ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಒಟ್ಟು 400 ಅಂಕಗಳನ್ನು ಹೊಂದಿತ್ತು. ಪ್ರಶ್ನೆ ಪತ್ರಿಕೆಯು ಆಬ್ಜೆಕ್ಟಿವ್​ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 4 ಆಯ್ಕೆಗಳನ್ನು ಹೊಂದಿತ್ತು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

ಕಳೆದ ವರ್ಷದ ಟ್ರೆಂಡ್ ಪ್ರಕಾರ, ಪರೀಕ್ಷೆಯನ್ನು ಮೇ 26 ರಂದು ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಜೂನ್ 12 ರಂದು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಇತರ ಉನ್ನತ ಸೇವೆಗಳಲ್ಲಿ ಪ್ರಮುಖ ಹುದ್ದೆಗಳಿಗೆ ಸ್ಪರ್ಧಿಸುವ ಲಕ್ಷಾಂತರ ನಾಗರಿಕ ಸೇವಾ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುಪಿಎಸ್ಸಿ ಸಿಎಸ್ಇ ಕಟ್-ಆಫ್ ನಿರ್ಣಾಯಕವಾಗಿದೆ. 2023 ರಲ್ಲಿ ಸಾಮಾನ್ಯ ವರ್ಗಕ್ಕೆ ಯುಪಿಎಸ್ಸಿ ಪ್ರಿಲಿಮ್ಸ್ ಕಟ್-ಆಫ್ 75.41 ರಷ್ಟಿತ್ತು.

ಈ ಬಾರಿಯ ಫಲಿತಾಂಶಗಳನ್ನು ಈ ರೀತಿ ಡೌನ್​ಲೋಡ್ ಮಾಡಿಕೊಳ್ಳಿ


  • ಮೊದಲಿಗೆ, ಯುಪಿಎಸ್ಸಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
  • “ಸಲ್ಲಿಸು” ಆಯ್ಕೆಯನ್ನು ಆರಿಸಿದರೆ ಫಲಿತಾಂಶಗಳು ಕಾಣುತ್ತದೆ
  • ಡೌನ್ ಲೋಡ್ ಮಾಡಿ ಮತ್ತು ನಿಮ್ಮ ಭವಿಷ್ಯದ ಅಗತ್ಯಗಳಿಗಾಗಿ ಕಾಪಿಯನ್ನು ಸೇವ್ ಮಾಡಿಟ್ಟುಕೊಳ್ಳಿ.

2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್​ಸೈಟ್​ನಲ್ಲಿ ಪೋಸ್ಟ್​​ ಮಾಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Cabinet Committees: ವಸತಿ, ಆರ್ಥಿಕ ವ್ಯವಹಾರಗಳು, ಸಂಸದೀಯ ವ್ಯವಹಾರಗಳು, ರಾಜಕೀಯ ವ್ಯವಹಾರಗಳು, ಭದ್ರತೆ, ಹೂಡಿಕೆ ಮತ್ತು ಬೆಳವಣಿಗೆ ಹಾಗೂ ಕೌಶಲ, ಉದ್ಯೋಗ ಹಾಗೂ ಜೀವನೋಪಾಯ ಸಂಪುಟ ಸಮಿತಿಗಳಿಗೂ ಮುಖ್ಯಸ್ಥರು, ಸದಸ್ಯರು ಹಾಗೂ ವಿಶೇಷ ಆಹ್ವಾನಿತರನ್ನು ನರೇಂದ್ರ ಮೋದಿ ಅವರು ನೇಮಿಸಿದ್ದಾರೆ.

VISTARANEWS.COM


on

Cabinet Committees
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿ, ಸಚಿವ ಸಂಪುಟ ರಚಿಸಿ, ಖಾತೆಗಳ ಹಂಚಿಕೆಯನ್ನೂ ಮಾಡಿರುವ ನರೇಂದ್ರ ಮೋದಿ (Narendra Modi) ಅವರೀಗ 8 ಸಂಪುಟ ಸಮಿತಿಗಳನ್ನು (Cabinet Committees) ಕೂಡ ರಚಿಸಿದ್ದಾರೆ. ನೇಮಕಾತಿಗಳ ಸಂಪುಟ ಸಮಿತಿ, ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಭದ್ರತಾ ಸಂಪುಟ ಸಮಿತಿ ಸೇರಿ 8 ಸಮಿತಿಗಳನ್ನು ರಚಿಸಲಾಗಿದ್ದು, ಭದ್ರತಾ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಮುಖ್ಯಸ್ಥರಾಗಿದ್ದಾರೆ.

ನೇಮಕಾತಿಗಳ ಸಂಪುಟ ಸಭೆಗೆ ನರೇಂದ್ರ ಮೋದಿ ಮುಖ್ಯಸ್ಥರಾದರೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸದಸ್ಯರಾಗಿದ್ದಾರೆ. ಇನ್ನು, ವಸತಿ, ಆರ್ಥಿಕ ವ್ಯವಹಾರಗಳು, ಸಂಸದೀಯ ವ್ಯವಹಾರಗಳು, ರಾಜಕೀಯ ವ್ಯವಹಾರಗಳು, ಭದ್ರತೆ, ಹೂಡಿಕೆ ಮತ್ತು ಬೆಳವಣಿಗೆ ಹಾಗೂ ಕೌಶಲ, ಉದ್ಯೋಗ ಹಾಗೂ ಜೀವನೋಪಾಯ ಸಂಪುಟ ಸಮಿತಿಗಳಿಗೂ ಮುಖ್ಯಸ್ಥರು, ಸದಸ್ಯರು ಹಾಗೂ ವಿಶೇಷ ಆಹ್ವಾನಿತರನ್ನು ನರೇಂದ್ರ ಮೋದಿ ಅವರು ನೇಮಿಸಿದ್ದಾರೆ. ಸಚಿವಾಲಯಗಳಿಗೆ ನೇಮಕ, ಪ್ರಮುಖ ತೀರ್ಮಾನ ಸೇರಿ ಹಲವು ನಿರ್ಧಾರಗಳನ್ನು ಸಂಪುಟ ಸಮಿತಿಗಳು ತೆಗೆದುಕೊಳ್ಳಲಿವೆ.

ಸಂಪುಟ ಸಮಿತಿಗಳು ಏಕೆ ಪ್ರಮುಖ?

ದೇಶದ ಹಣಕಾಸು, ನೇಮಕಾತಿ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ದಿಸೆಯಲ್ಲಿ, ಪ್ರಮುಖ ಸಚಿವಾಲಯಗಳ ದಕ್ಷತೆ, ನಿರ್ವಹಣೆ ಮಾಡುವ ದಿಸೆಯಲ್ಲಿ ಸಂಪುಟ ಸಮಿತಿಗಳನ್ನು ರಚಿಸಲಾಗುತ್ತದೆ. ಸಾಮಾನ್ಯವಾಗಿ ಮೂರರಿಂದ ಎಂಟು ಸಂಪುಟ ಸಮಿತಿಗಳನ್ನು ರಚಿಸಲಾಗುತ್ತದೆ. ಯಾವುದೇ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಮಂತ್ರಿಯೇ ಸಮಿತಿಗಳನ್ನು ರಚಿಸುತ್ತಾರೆ. ಸಮಿತಿಗಳಿಗೆ ಸದಸ್ಯರು ಅಥವಾ ಮುಖ್ಯಸ್ಥರನ್ನು ಕೂಡ ಪ್ರಧಾನಿ ಆಯ್ಕೆಯಾಗಿರುತ್ತದೆ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ 12 ಸಮಿತಿಗಳನ್ನು ರಚಿಸಿದ್ದರು.

ಪ್ರಧಾನಮಂತ್ರಿ, ಸಚಿವರು ಪ್ರಮುಖ ಸಂಪುಟ ಸಮಿತಿಗಳ ಸದಸ್ಯರು ಅಥವಾ ಮುಖ್ಯಸ್ಥರಾಗಿರುತ್ತಾರೆ. ಹಾಗೆಯೇ, ಪ್ರಧಾನಿಯವರು ವಿಶೇಷ ಆಹ್ವಾನಿತರನ್ನು ಕೂಡ ಸಮಿತಿಗಳ ಸದಸ್ಯರನ್ನಾಗಿ ನೇಮಿಸಬಹುದಾಗಿದೆ. ಇಷ್ಟೆಲ್ಲ ಕಾರಣಗಳಿಂದಾಗಿ ಸಂಪುಟ ಸಮಿತಿಗಳ ರಚನೆಯು ಪ್ರಮುಖ ಸಂಗತಿಯಾಗಿದೆ.

ಇದನ್ನೂ ಓದಿ: NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

Continue Reading

ದೇಶ

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

Hemant Soren: ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ ಹೇಮಂತ್‌ ಸೊರೆನ್‌ ಅವರು ಮತ್ತೆ ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Hemant Soren
Koo

ರಾಂಚಿ: ಅಕ್ರಮ ಹಣ ವರ್ಗಾವಣೆ (Money laundering Case), ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ (Hemant Soren) ಅವರು ಮತ್ತೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಲಿ ಸಿಎಂ ಚಂಪೈ ಸೊರೆನ್‌ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Continue Reading

ಕರ್ನಾಟಕ

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

MUDA site scandal: ಮುಡಾ ನಿವೇಶನಗಳು ಅಮಾನತ್ತಿನಲ್ಲಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ. ತನಿಖಾ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಬೆಂಗಳೂರು: ಮುಡಾ ಸೈಟ್ ಅಕ್ರಮದ (MUDA site scandal) ತನಿಖೆ ಮಾಡಲು ತನಿಖಾ ತಂಡ ರಚನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿಯವರು, ನಾವು ಕೇಳಿದಾಗ ಒಂದೇ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ಯಾಕೆ ನಾವು ಯಾಕೆ ಸಿಬಿಐಗೆ ಕೊಡಬೇಕು? ಸೈಟ್ ಹಂಚಿದ್ದು ಅವರ ಸರ್ಕಾರದಲ್ಲಿ, ದುರುಪಯೋಗ ಆಗಿದೆ ಅಂತ ಈಗ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಇಷ್ಟಕ್ಕೂ ನಾನು ಯಾಕಪ್ಪ ರಾಜೀನಾಮೆ ಕೊಡಬೇಕು, ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳ್ತಾನೆ ಅಂತ ಕೊಟ್ಟು ಬಿಡೋಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣ ಸಿಬಿಐಗೆ ಹಸ್ತಾಂತರ ಮಾಡಲು ಒತ್ತಾಯದ ಬಗ್ಗೆ ಮಾತನಾಡಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.

ಇದನ್ನೂ ಓದಿ | Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Continue Reading

ಪ್ರಮುಖ ಸುದ್ದಿ

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Samrat Choudhary: ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟವನ್ನು ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಬಿಹಾರ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿ-ಮೈತ್ರಿಕೂಟಕ್ಕೆ ರಾಜೀನಾಮೆ ನೀಡಿ ಎನ್‌ಡಿಎಗೆ ಮರಳಿದ್ದಾರೆ. ಹಾಗಾಗಿ ಸಾಮ್ರಾಟ್ ಚೌಧರಿ ಅವರು ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ತಮ್ಮ ಮುಡಿಯನ್ನು ಅರ್ಪಿಸಿ ತಮ್ಮ ಪೇಟವನ್ನು ರಾಮನ ಪಾದಗಳಿಗೆ ಅರ್ಪಿಸುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ.

VISTARANEWS.COM


on

Samrat Choudhary
Koo

ಈ ಹಿಂದೆ ಜೆಡಿಯು ಮುಖ್ಯಸ್ಥರಾದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟವನ್ನು ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಬಿಹಾರ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ (Samrat Choudhary) ಅವರು ಇದೀಗ ತಮ್ಮ ಪ್ರತಿಜ್ಞೆಯನ್ನು ನೆನಪಿಸಿಕೊಂಡಿದ್ದು ಅದನ್ನು ಪೂರೈಸಿದ್ದಾರೆ.

ಇದೀಗ ಇಂಡಿ-ಮೈತ್ರಿಕೂಟಕ್ಕೆ ರಾಜೀನಾಮೆ ನೀಡಿದ ನಂತರ ನಿತೀಶ್ ಕುಮಾರ್ ಅವರು ಎನ್‍ಡಿಎಗೆ ಮರಳಿದ್ದಾರೆ. ಹಾಗಾಗಿ ಸಾಮ್ರಾಟ್ ಚೌಧರಿ ಅವರು ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ತಮ್ಮ ಮುಡಿಯನ್ನು ಅರ್ಪಿಸಿ ತಮ್ಮ ಪೇಟವನ್ನು ರಾಮನ ಪಾದಗಳಿಗೆ ಅರ್ಪಿಸುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ.

ಈ ಕುರಿತು ಮಾತನಾಡಿದ ಸಾಮ್ರಾಟ್ ಚೌಧರಿ “ನಿತೀಶ್ ಕುಮಾರ್ ಅವರು ಇಂಡಿ- ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‍ಡಿಎಗೆ ಮರಳಿದ ದಿನ, ನಾನು ನನ್ನ ಪೇಟವನ್ನು ಭಗವಾನ್ ರಾಮನಿಗೆ ಅರ್ಪಿಸುತ್ತೇನೆ ಎಂದು ಘೋಷಿಸಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟ ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದೆ ಎಂಬುದು ನಿಜ. ಆದರೆ ಈಗ ಅವರು ಇಂಡಿ-ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‍ಡಿಎ) ಮರಳಿದ್ದಾರೆ, ಹಾಗಾಗಿ ನನ್ನ ಪೇಟವನ್ನು ಭಗವಾನ್ ರಾಮನ ಪಾದಗಳಿಗೆ ಅರ್ಪಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಿತೀಶ್ ಕುಮಾರ್ ಎನ್‍ಡಿಎಗೆ ಮರಳಿದ್ದು ಕಳೆದ ದಶಕದಲ್ಲಿ ಮೈತ್ರಿಗಳಲ್ಲಿ ಐದನೇ ಬದಲಾವಣೆಯನ್ನು ಸೂಚಿಸುತ್ತದೆ, ಇದರ ಪರಿಣಾಮವಾಗಿ ಮಹಾಘಟಬಂಧನ್ ಸರ್ಕಾರದ ಪತನವಾಯಿತು ಮತ್ತು ಬಿಹಾರದಲ್ಲಿ ಹೊಸ ಎನ್‍ಡಿಎ ನೇತೃತ್ವದ ಸರ್ಕಾರ ರಚನೆಯಾಯಿತು. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಈ ನಡುವೆ ತಮ್ಮ ಪ್ರತಿಜ್ಞೆಯನ್ನು ನೆನೆಪಿಸಿಕೊಂಡ ಚೌಧರಿ ಜೂನ್ 2ರಂದು ಅಯೋಧ್ಯೆಗೆ ತೆರಳಿ ತಲೆ ಬೋಳಿಸಿಕೊಂಡ ನಂತರ ಅವರು ಇಂದು ರಾಮ ಮಂದಿರದಲ್ಲಿ ತಮ್ಮ ಪೇಟವನ್ನು ಅರ್ಪಿಸಿದ್ದಾರಂತೆ.

Continue Reading
Advertisement
ಕರ್ನಾಟಕ38 mins ago

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Cabinet Committees
ದೇಶ52 mins ago

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Hemant Soren
ದೇಶ1 hour ago

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

MUDA site scandal
ಕರ್ನಾಟಕ2 hours ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ2 hours ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ2 hours ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್2 hours ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ2 hours ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ2 hours ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest2 hours ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ24 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌