Site icon Vistara News

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

UPSC 2024

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ನೇ( UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್​) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್​ಸಿ ಸಿಎಸ್ಇ 2024 ರ ಪರೀಕ್ಷೆಗೆ ಹಾಜರಾಗಿವು ಅಭ್ಯರ್ಥಿಗಳು upsc.gov.in ಮತ್ತು upsconline.nic.in ವೆಬ್​ಸೈಟ್​ಗೆ ಪ್ರವೇಶ ಮಾಡಿ ಫಲಿತಾಂಶಗಳನ್ನು ಡೌನ್ಲೋಡ್ ಮಾಡಬಹದು. ಸಾಮಾನ್ಯ ಪರೀಕ್ಷೆಯನ್ನು ಜೂನ್ 16 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ 1 ಮತ್ತು ಪರೀಕ್ಷೆ 2 ಎಂದು ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಒಟ್ಟು 400 ಅಂಕಗಳನ್ನು ಹೊಂದಿತ್ತು. ಪ್ರಶ್ನೆ ಪತ್ರಿಕೆಯು ಆಬ್ಜೆಕ್ಟಿವ್​ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 4 ಆಯ್ಕೆಗಳನ್ನು ಹೊಂದಿತ್ತು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

ಕಳೆದ ವರ್ಷದ ಟ್ರೆಂಡ್ ಪ್ರಕಾರ, ಪರೀಕ್ಷೆಯನ್ನು ಮೇ 26 ರಂದು ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಜೂನ್ 12 ರಂದು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಇತರ ಉನ್ನತ ಸೇವೆಗಳಲ್ಲಿ ಪ್ರಮುಖ ಹುದ್ದೆಗಳಿಗೆ ಸ್ಪರ್ಧಿಸುವ ಲಕ್ಷಾಂತರ ನಾಗರಿಕ ಸೇವಾ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುಪಿಎಸ್ಸಿ ಸಿಎಸ್ಇ ಕಟ್-ಆಫ್ ನಿರ್ಣಾಯಕವಾಗಿದೆ. 2023 ರಲ್ಲಿ ಸಾಮಾನ್ಯ ವರ್ಗಕ್ಕೆ ಯುಪಿಎಸ್ಸಿ ಪ್ರಿಲಿಮ್ಸ್ ಕಟ್-ಆಫ್ 75.41 ರಷ್ಟಿತ್ತು.

ಈ ಬಾರಿಯ ಫಲಿತಾಂಶಗಳನ್ನು ಈ ರೀತಿ ಡೌನ್​ಲೋಡ್ ಮಾಡಿಕೊಳ್ಳಿ

2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್​ಸೈಟ್​ನಲ್ಲಿ ಪೋಸ್ಟ್​​ ಮಾಡಲಾಗುತ್ತದೆ.

Exit mobile version