V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ - Vistara News

ಪ್ರಮುಖ ಸುದ್ದಿ

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

V Somanna: 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

V Somanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೆಜ್ಜಾಲದಿಂದ ಆರಂಭಿಸಿ ಕನಕಪುರ, ಸಾತನೂರು, ಹಲಗೂರು , ಕೊಳ್ಳೇಗಾಲ- ಚಾಮರಾಜನಗರದವರೆಗೆ ಬರಲಿರುವ 142 km ರೈಲು ಮಾರ್ಗದ (Railway Line) ಸರ್ವೇ ಕಾರ್ಯ (Survey) ಮತ್ತೆ ಕೈಗೆತ್ತಿಕೊಳ್ಳಲಾಗುವುದು. 2019ರಲ್ಲೇ ಸರ್ವೆ ಆಗಿ ಸ್ಥಗಿತ ಆಗಿತ್ತು, ಈಗ ಮತ್ತೆ ಸರ್ವೇ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ (Karnataka Govt) ಜಾಗ ಕೊಡಬೇಕಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ (Central minister) ವಿ. ಸೋಮಣ್ಣ (V Somanna) ಹೇಳಿದ್ದಾರೆ.

ರೈಲ್ವೆ ಯೋಜನೆಗಳ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೇತೃತ್ವದ ಸಭೆ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕಂಟೋನ್ಮೆಂಟ್ ಹಾಗೂ ಯಶವಂತಪುರ ಸ್ಟೇಷನ್‌ಗಳನ್ನು ವಿಶ್ವದರ್ಜೆಗೆ ಏರಿಸಲು 2022-23ರಲ್ಲಿ ಮಂಜೂರಾತಿ ನೀಡಲಾಗಿದೆ. ಇದರ ಯೋಜನೆಯ ಮೊತ್ತ ಬೆಂಗಳೂರು ಕಂಟೋನ್ಮೆಂಟ್ 485 ಕೋಟಿ ರೂ. ಹಾಗೂ ಯಶವಂತಪುರ ಸ್ಟೇಷನ್ 387 ಕೋಟಿ ರೂ. ಈ ಎರಡೂ ನಿಲ್ದಾಣ ಪುನರಾಭಿವೃದ್ಧಿ ಕಾರ್ಯವೂ 2025ರಲ್ಲಿ ಪೂರೈಸಲಾಗುವುದು. 2018-19ರ ಯಶವಂತಪುರ – ಚನ್ನಸಂದ್ರ 25 km ಹಾಗೂ ಬೈಯಪ್ಪನಹಳ್ಳಿ – ಹೊಸೂರು 48 km ಡಬಲಿಂಗ್ ಯೋಜನೆಗಳನ್ನು ಕ್ರಮವಾಗಿ ರೂ 314 ಕೋಟಿ ಹಾಗೂ ರೂ 500 ಕೋಟಿ ಮೊತ್ತದಲ್ಲಿ ಮಂಜೂರು ಮಾಡಲಾಗಿದ್ದು, ಕಾಮಗಾರಿ ಮುಂದುವರೆದಿದೆ ಎಂದಿದ್ದಾರೆ ಸೋಮಣ್ಣ.

ಯಶವಂತಪುರ – ಚನ್ನಸಂದ್ರ ಯೋಜನೆಯಲ್ಲಿ ಈಗಾಗಲೇ ಯಶವಂತಪುರ ಹೆಬ್ಬಾಳ 10.3 km ಗಳನ್ನೂ ಪೂರ್ಣಗೊಳಿಸಲಾಗಿದೆ. ಮೇ 2025ರಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. 1997-98 ರಲ್ಲಿ ಮಂಜೂರಾದ, ನೆನೆನಗುದಿಗೆ ಬಿದ್ದಿದ್ದ ಮಹತ್ವದ ಬೆಂಗಳೂರು – ವೈಟ್‌ಫೀಲ್ಡ್ 38 km ಕ್ವಾಡ್ರುಪ್ಲಿಂಗ್ ಯೋಜನೆಗಳನ್ನು ಈಗ ಕೈಗೆತ್ತಿಗೊಂಡು ಕಾಮಗಾರಿಗೆ ವೇಗ ನೀಡಲಾಗಿದ್ದು, ಬೆಂಗಳೂರು ದಂಡು – ಬೈಯಪ್ಪನಹಳ್ಳಿ ನಡುವೆ 13 ಕಾಮಗಾರಿ ನಡೆಯುತ್ತಿದೆ. ಇದರ ಯೋಜನೆ ಮೊತ್ತ ರೂ. 492 ಕೋಟಿ. ಜೂನ್ 2025ರಲ್ಲಿ ಈ ಯೋಜನೆಯನ್ನು ಪೂರ್ಣ ಮಾಡುವ ಗುರಿಯಿದೆ. ನನ್ನ ಮತ ಕ್ಷೇತ್ರದ ವಿಜಯನಗರ, ನಾಯಂಡಹಳ್ಳಿ, ಯೂನಿವರ್ಸಿಟಿಯಲ್ಲಿ ಕಾಮಗಾರಿಗಳನ್ನು ಸರಿಪಡಿಸುತ್ತೇವೆ ಎಂದು ಸೋಮಣ್ಣ ತಿಳಿಸಿದರು.

11ರಂದು ಖಾತೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಅಧಿಕಾರಿಗಳ ಜೊತ ಚರ್ಚೆ ಮಾಡಿದ್ದೇನೆ. ಇಲಾಖೆಯ ಸಾಧಕ ಭಾದಕಗಳ ಅರಿಯುವ ಕೆಲಸ ಮಾಡ್ತಿದ್ದೇನೆ. ರೈಲ್ವೆ ಇಲಾಖೆಗೆ ರಾಜ್ಯದಿಂದ ಅತಿರಥ ಮಹಾರಥರು ಮಂತ್ರಿಗಳಾಗಿ ಕೊಡುಗೆ ಕೊಟ್ಟಿದ್ದಾರೆ. ಅಶ್ವಿನಿ ವೈಷ್ಣವ್ ಹಾಗೂ ಜಲಶಕ್ತಿ ಸಚಿವ ಸಿ. ಆರ್ ಪಾಟೀಲ್ ನನಗೆ ಹೆಚ್ಚಿನ ಹುಮ್ಮಸ್ಸು ಕೊಟ್ಟಿದ್ದಾರೆ. ಐವತ್ತು ವರ್ಷಗಳಲ್ಲಿ ಆಗದಿರುವುದನ್ನು ಹತ್ತು ವರ್ಷಗಳಲ್ಲಿ ರೈಲ್ವೆ ಇಲಾಖೆ ಮಾಡಿ ತೋರಿಸಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿ ಮಿಲಿಟರಿ ಇದ್ದಂತೆ. ಇನ್ನೂ ಎರಡು ವರ್ಷಗಳಲ್ಲಿ ಕರ್ನಾಟಕ, ವಿಭಿನ್ನ ರೀತಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗುತ್ತದೆ. ನನ್ನ ನಲವತ್ತು ವರ್ಷಗಳ ಅನುಭವದೊಂದಿಗೆ ಬದಲಾವಣೆ ಆಗುತ್ತದೆ. ರೈಲ್ವೆ ಮೇಲ್ಸುತುವೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅರ್ಧ ಅರ್ಧ ಹಣ ಕೊಡಬೇಕು. ಜಾಗವನ್ನು ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ ಸೋಮಣ್ಣ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿ ಅವರು ನೀಡಿದರು.
ಹಾಸನ – ಬೆಂಗಳೂರು ಹೊಸ ಲೈನ್ : 166 km ರೂ 2010 ಕೋಟಿ ವೆಚ್ಚದಲ್ಲಿ 2017 ರಲ್ಲಿ ನಿರ್ಮಾಣಗೊಂಡಿದೆ
ಯಲಹಂಕ – ದೇವರಪಲ್ಲಿ ಡಬಲಿಂಗ್ : 72 km ರೂ 882 ಕೋಟಿ ವೆಚ್ಚದಲ್ಲಿ 2021ರಲ್ಲಿ ಪೂರ್ಣ ಗೊಂಡಿದೆ
2016 ರಲ್ಲಿ ರೂ 167 ಕೋಟಿ ವೆಚ್ಚದಲ್ಲಿ ಯಲಹಂಕ – ಚನ್ನಸಂದ್ರ 13km ಡಬಲಿಂಗ್
95 ಕೋಟೆ ವೆಚ್ಚದಲ್ಲಿ ಯಲಹಂಕ – ಯಶವಂತಪುರ 7km ಡಬಲಿಂಗ್ ಪೂರ್ಣಗೊಂಡಿದೆ
ಪ್ರಧಾನಿ ಮೋದಿಯವರ ಸಂಕಲ್ಪದಂತೆ ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ಉತ್ತಮ್ಮ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಬೈಯಪ್ಪನಹಳ್ಳಿಯಲ್ಲಿ ರೂ 314 ಕೋಟಿ ವೆಚ್ಚದಲ್ಲಿ 2022ರಲ್ಲಿ ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣಗೊಂಡಿದೆ.
ರೂ 280 ಕೋಟಿ ವೆಚ್ಚದಲ್ಲಿ 11 RUB ಗಳ ಹಾಗೂ ರೂ 285 ಕೋಟಿ ವೆಚ್ಚದಲ್ಲಿ 12 ROB ಗಳ ನಿರ್ಮಾಣಗೊಂಡಿದೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Parliament Sessions: ಕಾಂಗ್ರೆಸ್ ನಾಯಕನ ರಾಹುಲ್ ಗಾಂಧಿಯ ಮಾತುಗಳಿಗೆ ಪ್ರತಿರೋಧ ವ್ಯಕ್ತಪಡಿಸಲು ಪ್ರಧಾನಿ ಮೋದಿ ಎರಡು ಬಾರಿ ಸಂಸತ್​ನಲ್ಲಿ ಎದ್ದು ನಿಂತ ಪ್ರಸಂಗವೂ ನಡೆಯಿತು. ಬಳಿಕ ಮಾತನಾಡಿದ ಅವರು ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಷಯ ಎಂದು ಮೋದಿ ಕಳವಳ ವ್ಯಕ್ತಪಡಿಸಿದರು.

VISTARANEWS.COM


on

Parliament Sessions
Koo

ಬೆಂಗಳೂರು: ಪ್ರತಿಪಕ್ಷಗಳ ನಾಯಕ ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳ ನಾಯಕರು ಹಿಂದೂಗಳನ್ನು ಅಪಮಾನಿಸಿದ್ದಾರೆ ಎಂಬುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಸಂಸತ್​ ಅಧಿವೇಶನದಲ್ಲಿ (Parliament Sessions) ರಾಹುಲ್ ಗಾಂಧಿ ಆರ್​ಎಸ್​ಎಸ್​ ಮತ್ತು ಬಿಜೆಪಿ ವಿರುದ್ಧ ಆಡಿರುವ ಮಾತುಗಳಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಭಾರತೀಯ ಜನತಾ ಪಕ್ಷ ಸೋಮವಾರ ಬಲವಾದ ತಿರುಗೇಟು ನೀಡಿದ್ದಾರೆ. ಸಂಸತ್​ನಲ್ಲಿ ಸಂವಿಧಾನದ ಪ್ರತಿ ಮತ್ತು ಶಿವ, ಪ್ರವಾದಿ ಮೊಹಮ್ಮದ್, ಯೇಸುಕ್ರಿಸ್ತ ಮತ್ತು ಗುರುನಾನಕ್ ದೇವ್ ಸೇರಿದಂತೆ ಧಾರ್ಮಿಕ ಆರಾಧಕರ ಫೋಟೋಗಳನ್ನು ಪ್ರದರ್ಶಿಸಿದ್ದ ರಾಹುಲ್ ಗಾಂಧಿ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆಎಸ್​ಎಸ್​ ವಿರುದ್ಧ ತೀವ್ರ ದಾಳಿ ನಡೆಸಿದ್ದರು. ಅದಾದ ಬಳಿಕ ತಿರುಗೇಟು ನೀಡಿರುವ ಬಿಜೆಪಿ ಹಿಂದೂಗಳನ್ನು ಅಪಮಾನಿಸಲಾಗುತ್ತಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ನಾಯಕನ ರಾಹುಲ್ ಗಾಂಧಿಯ ಮಾತುಗಳಿಗೆ ಪ್ರತಿರೋಧ ವ್ಯಕ್ತಪಡಿಸಲು ಪ್ರಧಾನಿ ಮೋದಿ ಎರಡು ಬಾರಿ ಸಂಸತ್​ನಲ್ಲಿ ಎದ್ದು ನಿಂತ ಪ್ರಸಂಗವೂ ನಡೆಯಿತು. ಬಳಿಕ ಮಾತನಾಡಿದ ಅವರು ಇಡೀ ಹಿಂದೂ ಸಮಾಜವನ್ನು ಹಿಂಸಾತ್ಮಕ ಎಂದು ಕರೆಯುವುದು ಗಂಭೀರ ವಿಷಯ ಎಂದು ಮೋದಿ ಕಳವಳ ವ್ಯಕ್ತಪಡಿಸಿದರು.

ಸರ್ಕಾರವು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಈ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಕಳೆದ ತಿಂಗಳು ತಮ್ಮ ಪ್ರಮಾಣವಚನದ ವೇಳೆ “ಜೈ ಸಂವಿಧಾನ್” ಎಂದು ಎಂದು ರಾಹುಲ್ ಗಾಂಧಿ ಹೇಳಿದ್ದರು. ಸಂಸತ್​ನಲ್ಲಿ ಮಾತನಾಡಿದ ಅವರು ಬಿಜೆಪಿಯವರು ನನ್ನ ನಂತರ ‘ಜೈ ಸಂವಿಧಾನ್’ ಎಂದು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರದ ಆರೋಪ ಹೊತ್ತಿರುವ ಬಿಜೆಪಿ ಮತ್ತು ಆರ್​ಎಸ್​ಎಸ್​​ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿರುವುದು ಸಂಸತ್​​ನಲ್ಲಿ ಗದ್ದಲಕ್ಕೆ ಪ್ರಚೋದನೆ ಉಂಟು ಮಾಡಿತು. ನಮ್ಮೆಲ್ಲರ ಮಹಾಪುರುಷರು ಅಹಿಂಸೆಯ ಬಗ್ಗೆ ಮಾತನಾಡಿದ್ದರು. ಆದರೆ) ತಮ್ಮನ್ನು ಹಿಂದೂಗಳು ಎಂದು ಕರೆದುಕೊಳ್ಳುವವರು ದ್ವೇಷದ ಬಗ್ಗೆ ಮಾತ್ರ ಮಾತನಾಡುತ್ತಾರೆ. ಹೀಗಾಗಿ ನೀವು ನೀವು ಹಿಂದೂ ಅಲ್ಲ ಎಂದು ರಾಹುಲ್ ಆರೋಪಿಸಿದ್ದರು. ಇದು ಗದ್ದಲಕ್ಕೆ ಕಾರಣವಾಯಿತು.

ಇದನ್ನೂ ಓದಿ: Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

ಭಾರತದ ಕಲ್ಪನೆಯ ಮೇಲೆ ಪೂರ್ಣ ಪ್ರಮಾಣದ ಮತ್ತು ವ್ಯವಸ್ಥಿತ ದಾಳಿ ನಡೆಯುತ್ತಿದೆ. ಸಂವಿಧಾನ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ವಿರೋಧಿಸಿದ ವಿರೋಧ ಪಕ್ಷದ ನಾಯಕರ ಮೇಲೆ ವೈಯಕ್ತಿಕವಾಗಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. ಕೆಲವರು ಇನ್ನೂ ಜೈಲಿನಲ್ಲಿದ್ದಾರೆ ಎಂಬುದಾಗಿಯೂ ಆರೋಪಿಸಿದರು.

ಶಿವನ ಚಿತ್ರ ಪ್ರದರ್ಶನ

ಶಿವನ ಚಿತ್ರವನ್ನು ನೋಡುವ ಹಿಂದೂಗಳು ಎಂದಿಗೂ ಭಯ ಮತ್ತು ದ್ವೇಷ ಹರಡಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆ. ಆದರೆ ಬಿಜೆಪಿ ದಿನದ 24 ಗಂಟೆಯೂ ಭಯ ಮತ್ತು ದ್ವೇಷ ಹರಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಅದೇ ರೀತಿ ರಾಹುಲ್​ ಪ್ರವಾದಿ ಮೊಹಮ್ಮದ್ ಮತ್ತು ಗುರುನಾನಕ್ ದೇವ್ ಅವರ ಚಿತ್ರಗಳನ್ನು ಪ್ರದರ್ಶಿಸಿದರು. ಇದಕ್ಕಾಗಿ ಸ್ಪೀಕರ್ ಓಂ ಬಿರ್ಲಾ ಅವರು ಅವರನ್ನು ತರಾಟೆಗೆ ತೆಗೆದುಕೊಂಡರು.

‘ಅಭಯ ಮುದ್ರೆ’ ಕಾಂಗ್ರೆಸ್ ನ ಚಿಹ್ನೆ. ಇದು ಸುರಕ್ಷತೆಯ ಸಂಕೇತವಾಗಿದೆ, ಇದು ಭಯವನ್ನು ಹೋಗಲಾಡಿಸುತ್ತದೆ ಮತ್ತು ಹಿಂದೂ ಧರ್ಮ, ಇಸ್ಲಾಂ ಧರ್ಮ, ಸಿಖ್ ಧರ್ಮ, ಬೌದ್ಧ ಧರ್ಮ ಮತ್ತು ಇತರ ಭಾರತೀಯ ಧರ್ಮಗಳಲ್ಲಿ ದೈವಿಕ ರಕ್ಷಣೆ ನೀಡುತ್ತದೆ ಎಂದು ರಾಹುಲ್ ಹೇಳಿದ್ದಾರೆ.

ಅಮಿತ್ ಶಾ ಪ್ರತಿಕ್ರಿಯೆ
ಮೋದಿ ಜಿ, ಬಿಜೆಪಿ ಮತ್ತು ಆರ್​ಎಸ್​ಎಸ್​ ಇಡೀ ಹಿಂದೂ ಸಮುದಾಯವಲ್ಲ ಎಂದು ರಾಹುಲ್ ಗಾಂಧಿ ಕೂಗಿದಕ್ಕೆ ಗೃಹ ಮಂತ್ರಿ ಅಮಿತ್ ಶಾಳ ಪ್ರತಿಕ್ರಿಯೆ ನೀಡಿದ್ದಾರೆ. ಹಿಂಸಾಚಾರವನ್ನು ಯಾವುದೇ ಧರ್ಮದೊಂದಿಗೆ ತಳುಕು ಹಾಕುವುದು ತಪ್ಪು ಎಂದು ಅವರು ಘೋಷಿಸಿದರು. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಅಮಿತ್ ಶಾ ಆಗ್ರಹಿಸಿದರು. ಇದೇ ವೇಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಮತ್ತು 1984 ರ ಸಿಖ್ ವಿರೋಧಿ ದಂಗೆಗಳನ್ನು ಉಲ್ಲೇಖಿಸಿದರು. ಎಲ್ಲಾ ಹಿಂದೂಗಳು ಹಿಂಸೆಯ ಪ್ರೇರಕರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಶಾ ಹೇಳಿದರು.

ರಾಜ್ಯಸಭೆಯಲ್ಲಿ ತಮ್ಮದೇ ಆದ ಬಿಕ್ಕಟ್ಟಿನ ಕ್ಷಣಗಳನ್ನು ಎದುರಿಸಿದ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳ ಮೂಲಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದರು. ಕಾಂಗ್ರೆಸ್ ನಾಯಕ ಸ್ಪಷ್ಟವಾಗಿ ಸುಳ್ಳು ಹೇಳಿದ್ದಾರೆ ಎಂದು ಅವರು ಆರೋಪಿಸಿದರು. ಅಧಿಕಾರ ಹಿಡಿಯಲು ವಿರೋಧ ಪಕ್ಷಗಳ ನಾಯಕರು ದೋಷಪೂರಿತ ತರ್ಕ ಮಾಡುತ್ತಾರೆ. ಅವರು 2024ರ ಚುನಾವಣೆಯ ಜನಾದೇಶವನ್ನು (ಸತತ ಮೂರನೇ ಸೋಲು) ಅರ್ಥಮಾಡಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

Continue Reading

ಕರ್ನಾಟಕ

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

MUDA site scandal: ಮುಡಾದಲ್ಲಿ 5000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಗಳು ಕೇಳಿಬಂದಿರುವ ಬಗ್ಗೆ ಎಂದು ವಿಸ್ತಾರ ನ್ಯೂಸ್‌ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಹಗರಣದ ತನಿಖೆಗೆ ಆದೇಶ ನೀಡಿದೆ.

VISTARANEWS.COM


on

MUDA site scandal
Koo

ಮೈಸೂರು: ನಿಯಮಬಾಹಿರವಾಗಿ ಹಂಚಿಕೆಯಾದ ಮುಡಾ ನಿವೇಶನಗಳನ್ನು ರಾಜ್ಯ ಸರ್ಕಾರ ರದ್ದು ಮಾಡಿದ್ದು, ಮುಡಾ ನಿವೇಶನ ಹಂಚಿಕೆ ಹಗರಣದ (MUDA site scandal) ತನಿಖೆಗೆ ಆದೇಶ ಹೊರಡಿಸಿದೆ. ಈ ಸಂಬಂಧ ತನಿಖಾ ತಂಡ ರಚಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ. ಹಗರಣದ ಬಗ್ಗೆ 15 ದಿನಗಳ ಒಳಗೆ ಸಮಗ್ರ ವರದಿ ನೀಡಲು ತನಿಖಾ ತಂಡಕ್ಕೆ ಸೂಚನೆ ನೀಡಲಾಗಿದ್ದು, ತನಿಖಾ ವರದಿಯೊಂದಿಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಸ್ಪಷ್ಟ ಅಭಿಪ್ರಾಯ ನೀಡಲು ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ಮುಡಾದಲ್ಲಿ 5000ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಗಳು ಕೇಳಿಬಂದಿರುವ ಬಗ್ಗೆ ಎಂದು ವಿಸ್ತಾರ ನ್ಯೂಸ್‌ ವಿಶೇಷ ವರದಿ ಪ್ರಸಾರ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ, ತನಿಖೆಗೆ ಆದೇಶ ನೀಡಿದೆ. ತನಿಖಾ ತಂಡಕ್ಕೆ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ ಅಧ್ಯಕ್ಷರಾಗಿದ್ದು, ಹೆಚ್ಚುವರಿ ನಿರ್ದೇಶಕ ಎಂ.ಸಿ. ದಿನೇಶ್, ಶಶಿಕುಮಾರ್, ಜಂಟಿ ನಿರ್ದೇಶಕಿ ಶಾಂತಲಾ, ಉಪ ನಿರ್ದೇಶಕ ಪ್ರಕಾಶ್ ಸದಸ್ಯರಾಗಿದ್ದಾರೆ. ಇನ್ನು ತನಿಖಾ ತಂಡಕ್ಕೆ ನೆರವು ನೀಡಲು ಮುಡಾ ಆಯುಕ್ತರಿಗೆ ಕಟ್ಟಪ್ಪಣೆ ನೀಡಲಾಗಿದೆ. ಮುಡಾಕ್ಕೆ ನಿಯಮ ಬಾಹಿರವಾಗಿ ನಷ್ಟ ಉಂಟು ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆ ತನಿಖೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಅಧಿಕಾರಿಗಳ ತಲೆದಂಡ

50:50 ಅನುಪಾತದಡಿ ಹಂಚಿಕೆ ಆಗಿರುವ ನಿವೇಶನಗಳ ರದ್ದು ಮಾಡಲು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ತಲೆದಂಡ ಆಗಿದ್ದು, ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಕಾರ್ಯದರ್ಶಿ ಶೇಖರ್ ಸೇರಿದಂತೆ ಶಾಮೀಲಾದ ಅಧಿಕಾರಿಗಳ ಎತ್ತಂಗಡಿಗೆ ಸರ್ಕಾರ ಆದೇಶ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಗರಣ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಚಿವ ಭೈರತಿ ಸುರೇಶ ಅವರು ಇಂದು ದಿಢೀರ್‌ ಮೈಸೂರಿಗೆ ಧಾವಿಸಿದ್ದರು. ಅವರು ಮುಡಾ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದ ಬೆನ್ನಲ್ಲೇ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.

ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಭೈರತಿ ಸುರೇಶ್ ಮಾತನಾಡಿ, ನಾನು ರೈತರ ಪರವಾಗಿದ್ದೇನೆ. ರೈತನಿಗೆ ಅನ್ಯಾಯವಾಗಿದ್ದರೆ ಶಿಸ್ತುಕ್ರಮ ಆಗುತ್ತೆ. ಜನಪ್ರತಿನಿಧಿ, ಅಧಿಕಾರಿಗಳು ಯಾರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳವರೆಗೆ ಪ್ರಾಧಿಕಾರದ ಸಭೆ ನಡೆಸುವಂತಿಲ್ಲ.‌ ರಸ್ತೆ, ನೀರು, ವೇತನದಂತಹ ವಿಷಯದಲ್ಲಿ ತೀರ್ಮಾನ ಕೈಗೊಳ್ಳಬಹುದು. ಸೈಟ್ ಕೊಡುವಂತಹ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ ಎಂದು ಹೇಳಿದರು.

ಇದನ್ನೂ ಓದಿ | Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

ಹಗರಣದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಪಾತ್ರ ಕಿಂಚಿತ್ತೂ ಇಲ್ಲ. ಸಾಕ್ಷ್ಯ ಇದ್ದರೆ ವಿಶ್ವನಾಥ್ ಕೊಡಲಿ. ಗಾಳಿಯಲ್ಲಿ ಗುಂಡು ಹೊಡೆಯಬಾರದು. ವಿಶ್ವನಾಥ್‌ ನನ್ನ ಬಳಿಯೇ ಪೈಲ್ ತಗೊಂಡು ಬಂದಿದ್ದರು. ಅವರು ಎಲ್ಲರ ಮೇಲೂ ಆಪಾದನೆ ಮಾಡಿದ್ದಾರೆ. ವಯಸ್ಸಿನಲ್ಲಿ ವಿಶ್ವನಾಥ್ ದೊಡ್ಡವರು. ಅವರ ಮಟ್ಟಕ್ಕೆ ಇಳಿದು ನಾನು ಮಾತನಾಡಲ್ಲ ಎಂದು ಟಾಂಗ್ ನೀಡಿದರು.

Continue Reading

ಕರ್ನಾಟಕ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Karave Protest: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನಿಯೋಗ ಮನವಿ ಮಾಡಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ (Karave Protest) ನಡೆಸಲಾಗಿದ್ದು, ಈ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ನಿಯೋಗ ಭೇಟಿ ಮಾಡಿ, ಕನ್ನಡಿಗರಿಗೆ ಉದ್ಯೋಗ ನೀಡಲು ಡಾ. ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ಕೋರಿದೆ. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕರವೇ ನಾರಾಯಣಗೌಡರ ಭೇಟಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಕನ್ನಡಿಗರಿಗೆ ವಿಶೇಷ ಉದ್ಯೋಗ ಮೀಸಲಾತಿ ನೀಡಲು ಹೊಸ ಕಾನೂನು ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ. ನಾನು ಅದರ ಬಗ್ಗೆ ಸಂವಿಧಾನ ಹಿನ್ನೆಲೆಯಲ್ಲಿ ಅಡ್ವೊಕೇಟ್‌ ಜನರಲ್ ಜತೆಗೆ ಚರ್ಚೆ ಮಾಡುತ್ತೇನೆ. ಅವರು ಮನವಿಯಲ್ಲಿ ಸರೋಜಿನಿ ಮಹಿಷಿ ವರದಿ ಜಾರಿ ಮತ್ತು ಕಾನೂನು ಮಾಡುವ ಬಗ್ಗೆ ಕೋರಿದ್ದಾರೆ. ಅದಕ್ಕೆ ಕಾನೂನು, ಸಂವಿಧಾನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ ಎಂದ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದ ನಾರಾಯಣ ಗೌಡ್ರು

ಸಿಎಂ ಭೇಟಿ ಬಳಿಕ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ನಾನು ಮೊದಲೇ ಒಂದು ಮಾತು ಹೇಳಿದ್ದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ನಡದ ಬಗ್ಗೆ ಕಾಳಜಿ ಇದೆ. ಈಗ ನಾವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟಿದ್ದು, ನಾಳೆಯೇ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡುತ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಸರ್ಕಾರ ಸದಾ ಕನ್ನಡದ ಪರವಾಗಿದೆ, ನಾನು ಕೂಡ ಕನ್ನಡ ಪರ ಇದ್ದೀನಿ. ನಿಮ್ಮ ಮನವಿಯನ್ನು ಪರಿಶೀಲಿಸಿ ಶೀಘ್ರದಲ್ಲಿಯೇ ಕಾನೂನು ತಜ್ಞರ ಜತೆ ಚರ್ಚೆ ಮಾಡುತ್ತೀನಿ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದರು.

ಕನ್ನಡದ ವಿಚಾರದಲ್ಲಿ ನಾನು ರಾಜಿ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಾ. ಸರೋಜಿನಿ ಮಹಿಷಿ ವರದಿ ಜಾರಿಗಾಗಿ 40 ವರ್ಷದಿಂದ ಹೋರಾಟ ಮಾಡುತ್ತಿದ್ದೀವಿ. ಈ ವರದಿ ಪ್ರಕಾರ ಉದ್ಯೋಗದಲ್ಲಿ 100ಕ್ಕೆ 100ರಷ್ಟು ಕನ್ನಡಿಗರು ಇರಬೇಕು ಅಂತ ಇದೆ. ಕರ್ನಾಟಕದಲ್ಲಿರುವ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಎಲ್ಲ ವಿಚಾರಗಳನ್ನು ಸಿಎಂಗೆ ಮನವರಿಕೆ ಮಾಡಿದ್ದೇವೆ. ಜಾರಿಗೆ ತಂದರೆ ಬದುಕು ಕಟ್ಟಿಕೊಳ್ಳುವ ಕೆಲಸ ಮಾಡಲಾಗುತ್ತೆ. ಸಿದ್ದರಾಮಯ್ಯ ಮೇಲೆ ಭರವಸೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

ಕನ್ನಡ ನಾಮಫಲಕ ಕಡ್ಡಾಯ ಮಾಡುವ ವಿಚಾರಕ್ಕೆ ಸರ್ಕಾರ ಸರಿಯಾಗಿ ಕಾಯ್ದೆ ಮಾಡಿದೆ. ಇದರಿಂದ ಶೇ. 60% ಕನ್ನಡ ಕರ್ನಾಟಕದಲ್ಲಿ ಕಾಣುತ್ತಿದೆ. ನಾನು ಮುಂದಿನ ವಾರ ದೆಹಲಿಗೆ ಹೋಗಬೇಕು, ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಸೋಮಣ್ಣರನ್ನು ಭೇಟಿ ಮಾಡುತ್ತೀನಿ. ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅವರೊಂದೊಗೆ ಚರ್ಚೆ ಮಾಡುತ್ತೇನೆ. ತೆರಿಗೆ, ಜಿಎಸ್‌ಟಿ ಸೇರಿ 1 ಲಕ್ಷ 86 ಕೋಟಿ ರೂ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದೆ. ಈ ವಿಚಾರವಾಗಿ ನಮ್ಮ ಜೊತೆ ಕೈ ಜೋಡಿಸಿ ಅಂತ ಸಿಎಂ ಕೇಳಿದ್ದಾರೆ ಎಂದು ನಾರಾಯಣ ಗೌಡ ತಿಳಿಸಿದ್ದಾರೆ.

ಕಾಯ್ದೆ ಜಾರಿಯಾಗದಿದ್ದರೆ ನಿಮ್ಮ ಸರ್ಕಾರ ಉಳಿಯಲ್ಲ: ನಾರಾಯಣ ಗೌಡ ಎಚ್ಚರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಾಯ್ದೆ ಜಾರಿ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಯಾವುದೇ ಸರ್ಕಾರ ಬರಲಿ ನಿರಂತರವಾಗಿ ಬೇಡಿಕೆ ಇಟ್ಟಿದ್ದೇವೆ. ಇಂದು ಸಾಂಕೇತಿಕವಾಗಿ ಒಂದು ದಿನದ ಧರಣಿ ಮೂಲಕ ಒತ್ತಡ ಹಾಕುತ್ತಿದ್ದೇವೆ. ಸರ್ಕಾರ ಮಾಡಲು ಕಾರಣ ಕನ್ನಡಿಗರು, ಈಗ ಅವರ ಹಿತ ಕಾಪಾಡಿ. ಇಲ್ಲದಿದ್ದರೆ ನಿಮ್ಮ ಸರ್ಕಾರ ಉಳಿಯುವುದಿಲ್ಲ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಕೆ ನೀಡಿದರು.

ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕನ್ನಡಿಗರ ಬದುಕಿನ ಹಾಗೂ ಉದ್ಯೋಗ ವಿಚಾರದಲ್ಲಿ ಕಾಯ್ದೆ ಜಾರಿ ಆಗಬೇಕು. ಇಡೀ ರಾಜ್ಯದ 31 ಜಿಲ್ಲೆಗಳಲ್ಲಿ ಧರಣಿ ನಡೆಯುತ್ತಿದೆ. ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಕೆ ಆಗಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಒಂದಷ್ಟು ಕಾಳಜಿ ಇದೆ. ಅಂದು ನಮ್ಮ ಹೋರಾಟಕ್ಕೆ ಮಣಿದು ಕನ್ನಡ ನಾಮಫಲಕ ಕಾಯ್ದೆ ಆಯಿತು. ನಾವು ಇಂದು ಒಂದು ದಿನದ ಭಜನೆ ಮಾಡಲು ಬಂದಿಲ್ಲ ಸ್ವಾಮಿ ಎಂದರು.

ಆಗ ನನ್ನನ್ನ ಜೈಲಿಗೆ ಹಾಕಿ ಚಿತ್ರ ಹಿಂಸೆ ಕೊಟ್ಟಿದ್ದಿರಿ. ಆದರೆ, ನಾನು ಹೋರಾಡಿ ಸಾಯುತ್ತೇನೆ ಹೊರತು ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ಸಣ್ಣ ಕಿಡಿ ಇಲ್ಲಿ ಇಂದು ಹೊತ್ತಿಕೊಂಡಿದೆ, ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಖಚಿತ ಎಂದರು.

Continue Reading

ಕರ್ನಾಟಕ

Press Day: ಸುಳ್ಳು ಸುದ್ದಿಗಳ ಮೇಲೆ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿದ್ದರಾಮಯ್ಯ

Press Day: ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

The whole society should be very careful about fake news says CM Siddaramaiah
Koo

ಬೆಂಗಳೂರು: ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Press Day) ತಿಳಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ಫೇಕ್ ನ್ಯೂಸ್‌ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫಾಸ್ಟ್‌ ಚೆಕ್‌ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್, ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಇದನ್ನೂ ಓದಿ: Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.

Continue Reading
Advertisement
Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ22 mins ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Parliament Sessions
ಪ್ರಮುಖ ಸುದ್ದಿ31 mins ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ39 mins ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Parliament Sessions
ದೇಶ48 mins ago

Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

MUDA site scandal
ಕರ್ನಾಟಕ54 mins ago

MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Fashion Show News
ಫ್ಯಾಷನ್1 hour ago

Fashion Show News: ಸಿಇಎಸ್‌ ಫ್ಯಾಷನ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ರ‍್ಯಾಂಪ್‌ ಶೋ

karnataka Weather Forecast
ಮಳೆ1 hour ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Medha Patkar
ದೇಶ2 hours ago

Medha Patkar: ನರ್ಮದಾ ಬಚಾವೋ ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ ಜೈಲು; 10ಲಕ್ಷ ರೂ. ದಂಡ

Karave Protest
ಕರ್ನಾಟಕ2 hours ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ನಾರಾಯಣ ಗೌಡ ನಿಯೋಗ ಮನವಿ; ಶೀಘ್ರವೇ ಕ್ರಮ ಎಂದ ಸಿಎಂ

Arecanut Insurance Karnataka last date
ಕೃಷಿ2 hours ago

Arecanut Insurance : ಮೆಣಸು, ಅಡಿಕೆಗೆ ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌