Site icon Vistara News

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

valmiki corporation scam culprits

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ (Valmiki Corporation Scam) ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ (SIT) ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು. ಛತ್ತೀಸ್‌ಗಢದಲ್ಲಿ ಸತ್ಯನಾರಾಯಣ ವರ್ಮಾ ಹಾಗೂ ಶ್ರೀನಿವಾಸ ರಾವ್ ಸೇರಿ ಇಂಥದೇ ಕೃತ್ಯ ಎಸಗಿದ್ದಾರೆ. ಅದೇ ರೀತಿ ನಿಗಮದ ಅಕೌಂಟ್‌ನಿಂದ ಹಣ ಅಕ್ರಮ ವರ್ಗಾವಣೆ ಮಾಡಿದ್ದರು.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶ್ರೀನಿವಾಸ ರಾವ್ ಎಸ್ಕೇಪ್ ಆಗಿದ್ದ. ಇದೀಗ ಎಸ್‌ಐಟಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ. ಸದ್ಯ ಆರೋಪಿಯನ್ನು ಒಂಬತ್ತು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ಮಹತ್ವದ ಬೆಳವಣಿಗೆಗಳು ನಡೆದಿವೆ. ಮೂವರನ್ನು ಬಂಧಿಸಲಾಗಿದೆ. ಇವರಲ್ಲಿ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕ ಪರಿಶೋಧಕ ಪರಶುರಾಮ್‌ ಸೇರಿದ್ದಾರೆ. ಪ್ರಕರಣದಲ್ಲಿ ಇಡಿ ಸಹ ತನಿಖೆಗೆ ಇಳಿದಿದೆ. ಒಂದು ವಾರದ ಹಿಂದೆ ಮಾಜಿ ಸಚಿವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಬಿ. ನಾಗೇಂದ್ರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು, ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ಪಾಲ್ಗೊಂಡಿರುವ ಯೂನಿಯನ್‌ ಬ್ಯಾಂಕ್‌ ಸಿಬ್ಬಂದಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಮನೆ ಹಾಗೂ ಕಚೇರಿಗಳ ಮೇಲೂ ಇಡಿ ದಾಳಿ ನಡೆಸಿತ್ತು. ಬೀಸುವ ದೊಣ್ಣೆಯಿಂದ ಪಾರಾಗಲು ಮೂರು ದಿನ ಕಣ್ಮರೆಯಾಗಿದ್ದ ದದ್ದಲ್‌, ಇದೀಗ ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಬಂಧನ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ. ಅಧಿವೇಶನ ಮುಗಿಯುವವರೆಗೂ ಅವರಿಗೆ ಬಂಧನದ ಆತಂಕವಿಲ್ಲ.

ವಾಲ್ಮೀಕಿ ನಿಗಮ ಅಕ್ರಮದಲ್ಲಿ ನನ್ನ ಪಾತ್ರ ಇಲ್ಲ; ಸಿಎಂ ಮುಂದೆ ಶಾಸಕ ದದ್ದಲ್ ಕಣ್ಣೀರು

ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣ (Valmiki Corp scam) ಸಂಬಂಧ ಎಸ್‌ಐಟಿ ವಿಚಾರಣೆಗೆ ಹಾಜರಾದ ಬಳಿಕ ಮೂರು ದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಸೋಮವಾರ ವಿಧಾನ ಮಂಡಲ ಅಧಿವೇಶನಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶಾಸಕ ದದ್ದಲ್‌(Basanagouda Daddal), ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ದದ್ದಲ್, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ದದ್ದಲ್ ನಾಪತ್ತೆ ಅಂತ ಬಿಜೆಪಿ‌ಯವರು ಸುಮ್ಮನೇ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಯಾವ ಇಡಿಯವರೂ ನನ್ನ ಬೆನ್ನತ್ತಿಲ್ಲ. ಬಿಜೆಪಿ ನಾಯಕರು ಬೇಕು ಅಂತಲೇ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ನಾಪತ್ತೆಯಾಗಿಲ್ಲ. ಈ ಘಟನೆಯಿಂದ ನಮ್ಮ ಕುಟುಂಬದ ಸದಸ್ಯರು ಹೆದರಿಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ಸಿಎಂ ಮುಂದೆ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

Exit mobile version