Site icon Vistara News

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

Valmiki Corporation Scam

ಬೆಂಗಳೂರು: ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಬೆಳಕಿಗೆ ಬಂದ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಸಿಎಂ ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಅಕ್ರಮದಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಕೇಳಿಬಂದಿರುವುದರಿಂದ ಸಿಬಿಐ ಎಂಟ್ರಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಸಾಧ್ಯತೆ ಇದೆ. ಇನ್ನು ಸಿಬಿಐ ಎಂಟ್ರಿಯಾದರೆ ಸರ್ಕಾರಕ್ಕೂ ಸಂಕಷ್ಟ ಎದುರಾಗಲಿದೆ. ಹೀಗಾಗಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಸಚಿವ ಬಿ.ನಾಗೇಂದ್ರಗೆ (B Nagendra) ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೊದಲ ವಿಕಟ್‌ ಪತನವಾದಂತಾಗಿದೆ.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಸಿಐಡಿಗೆ ನೀಡಿದೆ. ಒಂದು ವೇಳೆ ಸಿಬಿಐ ಎಂಟ್ರಿಯಾದರೆ ಸಿಐಡಿಗೆ ತನಿಖೆ ನಡೆಸುವ ಅವಕಾಶ ಇರಲ್ಲ. ಹೀಗಾಗಿ ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ಸರ್ಕಾರದ ಮಟ್ಟದಲ್ಲಿ ವ್ಯಕ್ತವಾಗಿದೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ನಿಗಮದ ಎಂಡಿ ಸೇರಿದಂತೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು CIDಗೆ ವಹಿಸಲಾಗಿದೆ. ಮತ್ತೊಂದೆಡೆ ಈ ಪ್ರಕರಣದಿಂದ ಸರ್ಕಾರಕ್ಕೆ ಮುಖಭಂಗವಾಗಬಾರದು. ಹೀಗಾಗಿ ಸಚಿವ ರಾಜೀನಾಮೆ ನೀಡುವುದು ಒಳಿತು. ಪ್ರಕರಣದ ತನಿಖೆ ನಂತರ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.

185 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿದೆ. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ.

185 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿದೆ. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ. RBI ರೂಲ್ಸ್ ಪ್ರಕಾರ, 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ಸಿಬಿಐ ಕೂಡ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆ ಪಡೆಯಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಇದನ್ನೂ ಓದಿ | Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Exit mobile version