Vice President Election | ಕನ್ನಡತಿ, ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್‌ ಆಳ್ವಾ UPA ಉಪರಾಷ್ಟ್ರಪತಿ ಅಭ್ಯರ್ಥಿ - Vistara News

ಪ್ರಮುಖ ಸುದ್ದಿ

Vice President Election | ಕನ್ನಡತಿ, ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್‌ ಆಳ್ವಾ UPA ಉಪರಾಷ್ಟ್ರಪತಿ ಅಭ್ಯರ್ಥಿ

ಕನ್ನಡತಿ ಮಾರ್ಗರೆಟ್‌ ಆಳ್ವಾ ಅವರು ಭಾನುವಾರ ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ (Vice President Election) ಆಯ್ಕೆಯಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ಕನ್ನಡತಿ ಹಾಗೂ ಮಾಜಿ ಸಚಿವೆ ಮಾರ್ಗರೆಟ್‌ ಆಳ್ವಾ ಅವರು ಪ್ರತಿಪಕ್ಷಗಳ ಉಪರಾಷ್ಟ್ರಪತಿ ಚುನಾವಣೆಯಲ್ಲಿ (Vice President Election) ಯಪಿಎ ಅಭ್ಯರ್ಥಿಯಾಗಿ ಭಾನುವಾರ ಆಯ್ಕೆಯಾಗಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ ೧೯ ಕೊನೇ ದಿನವಾಗಿದ್ದು, ಆಗಸ್ಟ್‌ ೬ರಂದು ಚುನಾವಣೆ ನಡೆಯಲಿದೆ.

ಮಾರ್ಗರೆಟ್‌ ಅವರು ಮಾಜಿ ಕೇಂದ್ರ ಸಚಿವರಾಗಿದ್ದು, ರಾಜಸ್ಥಾನ, ಗೋವಾ, ಗುಜರಾತ್‌ ಹಾಗೂ ಉತ್ತರಾಖಂಡದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎ ಶನಿವಾರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್‌ ಧನ್‌ಕರ್‌ ಅವರನ್ನು ಘೋಷಣೆ ಮಾಡಿತ್ತು. ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ಧನ್‌ಕರ್‌ ಅವರ ಹೆಸರನ್ನು ಘೋಷಿಸಲಾಗಿತ್ತು. ಅಂತೆಯೇ ಭಾನುವಾರ ಯುಪಿಎ ಸದಸ್ಯ ಪಕ್ಷಗಳು ಭಾನುವಾರ ಸಭೆ ನಡೆಸಿ ಮಾರ್ಗರೆಟ್‌ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ಹೊಸದಿಲ್ಲಿಯಲ್ಲಿ ಭಾನುವಾರ ಸರ್ವಪಕ್ಷಗಳ ಸಭೆ ನಡೆದ ಬಳಿಕ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಮಾರ್ಗರೆಟ್‌ ಅವರ ಹೆಸರು ಪ್ರಕಟಿಸಿದರು. ಸಭೆಗೆ ಹಾಜರಾಗಿದ್ದ 17 ಪಕ್ಷಗಳು ಮಾರ್ಗರೆಟ್‌ ಆಳ್ವಾ ಅವರ ಉಮೇದುವಾರಿಕೆಗೆ ಒಮ್ಮತದ ಅಭಿಪ್ರಾಯ ಸೂಚಿಸಿದವು ಎಂದು ಶರದ್‌ ಪವಾರ್‌ ತಿಳಿಸಿದ್ದಾರೆ.

Vice President Election 2022 | ಜನತಾ ಪರಿವಾರದಿಂದ ಬಂದ ನಾಯಕ ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading

Latest

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

VISTARANEWS.COM


on

ದ್ರಾವಿಡ ದಂಗಲ್‌ನಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯೊಂದನ್ನು ಎಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಟಿಸಿದೆ. ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆ ನಾಯಕ ವಿಜಯ್‌ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ತಮಿಳುನಾಡಿನ ಎಲ್ಲಾ ಸಮೀಕ್ಷೆಗಳು ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಹೇಳುತ್ತಿರುವಾಗಲೇ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ಈ ಸಲ ವಿಜಯ್‌ ನಿಜವಾದ ಜನನಾಯಗನ್‌ ಎಂದಿದೆ.
ತಮಿಳುನಾಡಿನ ಸಾರಥ್ಯ ವಿಜಯ್‌ಗೆ?
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆಗೆ 98 ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ 117 ಸೀಟು ಗೆಲ್ಲುವ ಪಕ್ಷದ ನಾಯಕ ಮುಖ್ಯಮಂತ್ರಿ ಆಗ್ತಾರೆ. ಸಮೀಕ್ಷೆ ಪ್ರಕಾರ ಟಿವಿಕೆ ಗರಿಷ್ಠ 120 ಸೀಟು ಗೆಲ್ಲುವ ಸಾಧ್ಯತೆಗಳಿವೆ.̇̇̇
ವೋಟ್‌ ಶೇರ್‌ನಲ್ಲೂ ಟಿವಿಕೆ ದಿಗ್ವಿಜಯ?
ಆಕ್ಸಿಸ್‌ ಮೈ ಇಂಡಿಯಾ ವೋಟ್‌ ಶೇರ್‌ ಸಮೀಕ್ಷೆಯನ್ನೂ ಪ್ರಕಟಿಸಿದೆ. ಅದರ ಪ್ರಕಾರ ಟಿವಿಕೆಗೆ ಶೇಕಡಾ 35ರಷ್ಟು ಮತ ಸಿಗಲಿದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೂ ಶೇ. 35ರಷ್ಟು ವೋಟ್‌ ಶೇರ್‌ ಸಿಗಲಿದೆ. ಎನ್‌ಡಿಎಗೆ 23 ಶೇಕಡಾ ಮತ ಸಿಗುವ ಸಾಧ್ಯತೆಗಳಿವೆ.
ಸಿಎಂ ಸ್ಥಾನಕ್ಕೆ ವಿಜಯ್‌ ಬೆಸ್ಟ್‌?
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಯನ್ನೂ ಆಕ್ಸಿಸ್‌ ಮೈ ಇಂಡಿಯಾ ಜನರ ಮುಂದಿಟ್ಟಿದೆ. ಅದರ ಪ್ರಕಾರ ಶೇ. 37ರಷ್ಟು ಮತದಾರರು ವಿಜಯ್‌ ಪರ ಒಲವು ತೋರಿದ್ದಾರೆ. ಶೇ. 35ರಷ್ಟು ಮಂದಿ ಮಾತ್ರ ಸ್ಟಾಲಿನ್‌ ಬೆಸ್ಟ್‌ ಅಂದಿದ್ದಾರೆ.
ವಿಜಯ್‌ಗೆ ಯುವ ಸಮೂಹದ ಬೆಂಬಲ
ಸರ್ವೇ ಪ್ರಕಾರ ಶೇ. 68ರಷ್ಟು ಹೊಸ ವೋಟರ್ಸ್‌ ವಿಜಯ್‌ಗೆ ಬೆಂಬಲ ನೀಡಿದ್ದಾರೆ. 20ರಿಂದ 29 ವಯೋಮಾನದ ಶೇ. 59ರಷ್ಟು ಯುವಕರು ಟಿವಿಕೆಗೆ ಜೈ ಎಂದಿದ್ದಾರೆ. 30-39 ವಯೋಮಾನದ ಶೇ. 45 ಮಂದಿ ದಳಪತಿಯನ್ನು ದಡಮುಟ್ಟಿಸಿದ್ದಾರೆ ಎನ್ನುತ್ತಿದೆ ಸಮೀಕ್ಷೆ.

Continue Reading

Latest

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

VISTARANEWS.COM


on

ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಲಬುರಗಿಯಲ್ಲಿ ಇಂದು ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಸಿಎಂ ಇದ್ದಾರೆ. ಹೀಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಭವಿಷ್ಯದಲ್ಲಿ ಅಂಥ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಕೂಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಪಕ್ಷದ ಐಡಿಯಾಲಜಿ ಮತ್ತು ಹಲವು ವರ್ಷಗಳ ಪರಿಶ್ರಮ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ. ಪಕ್ಷದ ಮಹತ್ವದ ನಿರ್ಧಾರಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Continue Reading
Advertisement
Latest1 hour ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest3 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest2 days ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌