Site icon Vistara News

Vinesh Phogat: ʼನನ್ನ ವಿರುದ್ಧ ಕುಸ್ತಿ ಗೆದ್ದಿದೆ..ʼ ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Vinesh Phogat

Vinesh Phogat: Vinesh Phogat disqualified after weigh in, will miss Paris Olympic medal

ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಕುಸ್ತಿಗೆ (Wrestling) ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ (Social media X) ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು.

“ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ.

ಕ್ರಮ ಕೈಗೊಳ್ಳಲು ಮೋದಿ ಸೂಚನೆ

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ವಿನೇಶ್‌ಗೆ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿನೇಶ್ ಪೋಗಟ್- ಉತ್ತರ ಸಿಗದ ಪ್ರಶ್ನೆಗಳು

Exit mobile version