Site icon Vistara News

Viral News: ಮೃತ ಇಂಜಿನಿಯರ್‌ನನ್ನು ಟ್ರಾನ್ಸ್‌ಫರ್‌ ಮಾಡಿದ ನಗರಾಭಿವೃದ್ಧಿ ಇಲಾಖೆ!

viral news dead engineer transfer

ಕಲಬುರಗಿ: ಮೃತ ಇಂಜಿನಿಯರ್ (Engineer Death) ಒಬ್ಬರನ್ನು ವರ್ಗಾವಣೆ (Transfer) ಮಾಡಿ ನಗರಾಭಿವೃದ್ಧಿ ಇಲಾಖೆ (Urban Development department) ಹಾಸ್ಯಾಸ್ಪದ ಎಡವಟ್ಟು (Viral news) ಮಾಡಿಕೊಂಡಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಎಂಬವರನ್ನು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಟ್ರಾನ್ಸ್‌ಫರ್‌ ಮಾಡಿದೆ. ವಾಸ್ತವವಾಗಿ, ಅವರು ಜನವರಿಯಲ್ಲೇ ಮೃತಪಟ್ಟಿದ್ದಾರೆ.

ಇದೀಗ ಜನವರಿಯಲ್ಲೇ ಮೃತಪಟ್ಟ ಇಂಜಿನಿಯರ್‌ನನ್ನು ಕೊಡಗು ಜಿಲ್ಲೆಗೆ ವರ್ಗಾವಣೆ ಮಾಡಿ ಜುಲೈ 9ರಂದು ಆದೇಶ ಹೊರಡಿಸಲಾಗಿದೆ. ಜನವರಿ 12ರಂದು ಅಶೋಕ ಪುಟಪಾಕ್ ಮೃತಪಟ್ಟಿದ್ದರು. ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆರ್ಡರ್‌ ಹೊರಡಿಸಲಾಗಿದೆ.

ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದರೂ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ಇಲ್ಲ ಎಂಬುದು ಹಾಸ್ಯಾಸ್ಪದ ಎನಿಸಿಕೊಂಡಿದೆ. ಹಾಗಿದ್ದರೆ ಈ ಆರು ತಿಂಗಳು ಸಂಬಳವೂ ಅವರ ಖಾತೆಗೆ ಜಮೆ ಆಗುತ್ತಿತ್ತೇ? ಈ ಪ್ರಶ್ನೆಗೆ ಇಲಾಖೆ ಇನ್ನೂ ಉತ್ತರಿಸಿಲ್ಲ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿರುವ ಈ ಎಡವಟ್ಟು ಇಲಾಖೆಗೂ ಸಚಿವರಿಗೂ ಇದೀಗ ಮುಜುಗರ ಸೃಷ್ಟಿಸಿದೆ.

ಮಾಜಿ ಸಚಿವ ನಾಗೇಂದ್ರ 5 ದಿನಗಳ ಕಾಲ ಇಡಿ ಕಸ್ಟಡಿಗೆ

ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯಲಹಂಕದಲ್ಲಿ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು (ED Officers) ಇಂದು ಮುಂಜಾನೆ ಹಾಜರು ಪಡಿಸಿದ್ದರು. ವಾಲ್ಮೀಕಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮೊನ್ನೆಯಿಂದ ನಾಗೇಂದ್ರ ಇಡಿ ದಾಳಿಗೆ (ED Raid) ಒಳಗಾಗಿದ್ದಾರೆ.

ನಾಗೇಂದ್ರರನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು. 5 ದಿನಗಳ ಕಾಲ ಕಸ್ಟಡಿಗೆ ನೀಡಿದ ನ್ಯಾಯಾಧೀಶರು, 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿ ಆದೇಶಿಸಿದರು. ನ್ಯಾಯಾಧೀಶರ ಮುಂದೆ ತಮ್ಮ ಅನಾರೋಗ್ಯ ಸಮಸ್ಯೆಯನ್ನು ನಾಗೇಂದ್ರ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಎಂದರು. ಪ್ರತಿ ದಿನ ಮೂರು ಗಂಟೆ ವಿಚಾರಣೆ ನಡೆಸಬಹುದು, ವಿಚಾರಣೆ ಬಳಿಕ 30 ನಿಮಿಷಗಳ ಕಾಲ ರೆಸ್ಟ್ ನೀಡಬೇಕು ಹಾಗೂ ಪ್ರತಿ ದಿನ ವೈದ್ಯಕೀಯ ತಪಾಸಣೆ ಮಾಡುವಂತೆ ನ್ಯಾಯಧೀಶರು ಸೂಚಿಸಿದರು.

ಜಡ್ಜ್ ಮುಂದೆ ನಾಗೇಂದ್ರ ಹೇಳಿಕೆ ನೀಡಿದ್ದು, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ʼಇದು ಬೋರ್ಡ್ ಮಿಟೀಂಗ್ ಮೂಲಕ ಆಗಿರುವ ಹಣ ವರ್ಗಾವಣೆ. ನಾನು ಇಲಾಖೆ ಸಚಿವಾನಾಗಿದ್ದೆ ಅಷ್ಟೇ. ಅಕ್ರಮ ಹಣ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ನನಗೆ ಮೆಡಿಕಲ್ ನೆರವು ಅವಶ್ಯಕತೆ ಇದೆʼ ಎಂದು ನಾಗೇಂದ್ರ ಮನವಿ ಮಾಡಿದರು. ಅಹವಾಲು ಹಿನ್ನೆಲೆಯಲ್ಲಿ, 24 ಗಂಟೆಗೊಮ್ಮೆ ಆರೋಗ್ಯ ತಪಾಸಣೆಗೆ ಕರೆದೊಯ್ಯುವಂತೆ ಇಡಿಗೆ ಸೂಚನೆ ನೀಡಲಾಯಿತು.

ʼನಾಗೇಂದ್ರರನ್ನು ಹೆಚ್ಚಿನ ವಿಚಾರಣೆ ಮಾಡಬೇಕು. ಬಹುಕೋಟಿ ಹಗರಣ ಆಗಿದೆ. ಹಣ ವರ್ಗಾವಣೆ ಮಾಹಿತಿ ಕಲೆ ಹಾಕಬೇಕಿದೆ. ಫಲಾನುಭವಿಗಳನ್ನು ಪತ್ತೆ ಹಚ್ಚಬೇಕಿದೆ. ಅವ್ಯವಹಾರ ಯಾವ ರೀತಿ ಆಗಿದೆ ಅನ್ನುವ ವಿಚಾರಣೆ ನಡೆಸಬೇಕಿದೆ. ಇಲಾಖೆಗೆ ಸಚಿವರಾಗಿದ್ದರಿಂದ ಹೆಚ್ಚಿನ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ಕಸ್ಟಡಿಗೆ ಕೊಡಬೇಕು ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೇಳಿದ್ದರು.

ನಿನ್ನೆ ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅದಕ್ಕೂ ಮುನ್ನ ಸತತ 40 ಗಂಟೆಗಳ ಕಾಲ ನಾಗೇಂದ್ರ ಅವರ ಮನೆ ಹಾಗೂ ಕಚೇರಿಯನ್ನು ತಪಾಸಣೆ ನಡೆಸಲಾಗಿತ್ತು.

ಇದನ್ನೂ ಓದಿ: Education News: ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ ಕರ್ನಾಟಕದ 148 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಎಬಿಬಿ ಇಂಡಿಯಾ ನೆರವು

Exit mobile version